Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 19:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಯೆಹೋವನ ಭಯವು ಜೀವದಾಯಕವು, ಭಯಭಕ್ತಿಯುಳ್ಳವನು ತೃಪ್ತನಾಗಿ ನೆಲೆಗೊಳ್ಳುವನು, ಅವನಿಗೆ ಕೇಡು ಸಂಭವಿಸದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವನಿಗೆ ಜೀವಪ್ರಾಪ್ತಿ; ಅಂಥವನು ಸಂತುಷ್ಟನಾಗಿ ಬಾಳುವನು, ಅವನಿಗೆ ಕೇಡು ಸಂಭವಿಸದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಯೆಹೋವನ ಭಯವು ಜೀವದಾಯಕವು; [ಭಯಭಕ್ತಿಯುಳ್ಳವನು] ತೃಪ್ತನಾಗಿ ನೆಲೆಗೊಳ್ಳುವನು; ಅವನಿಗೆ ಕೇಡು ಸಂಭವಿಸದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಭಯಭಕ್ತಿಯು ಒಳ್ಳೆಯ ಜೀವನಕ್ಕೆ ನಡೆಸುತ್ತದೆ. ಅದು ಅವನಿಗೆ ತೃಪ್ತಿಯನ್ನೂ ಕೊಡುವುದು; ಕೇಡಿನಿಂದಲೂ ತಪ್ಪಿಸಿ ಕಾಪಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಯೆಹೋವ ದೇವರ ಭಯವು ಜೀವದಾಯಕವು; ಆಗ ಅವನು ತೃಪ್ತನಾಗಿ ನೆಲೆಗೊಳ್ಳುವನು; ಅವನಿಗೆ ಕೇಡು ಸಂಭವಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 19:23
28 ತಿಳಿವುಗಳ ಹೋಲಿಕೆ  

ನೀತಿಗೆ ಹಸಿದು ಬಾಯಾರಿದವರು ಧನ್ಯರು; ಅವರು ತೃಪ್ತರಾಗುವರು.


ಸಜ್ಜನರಿಗೆ ಯಾವ ಹಾನಿಯೂ ಸಂಭವಿಸದು, ದುರ್ಜನರಿಗೆ ಕೇಡು ತುಂಬಿ ತುಳುಕುವುದು.


ಮುಂಜಾನೆಯಲ್ಲಿ ನಿನ್ನ ಕೃಪೆಯಿಂದ ನಮ್ಮನ್ನು ಸಂತೃಪ್ತಿಪಡಿಸು; ಆಗ ಜೀವಮಾನದಲ್ಲೆಲ್ಲಾ ಉಲ್ಲಾಸಿಸಿ ಹರ್ಷಿಸುವೆವು.


ದೇಹಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಪ್ರಯೋಜನವಾದದ್ದು. ಅದಕ್ಕೆ ಇಹಪರಗಳಲ್ಲಿನ ಜೀವನಕ್ಕೆ ವಾಗ್ದಾನ ಉಂಟು.


ಯೆಹೋವನಿಗೆ ಭಯಪಡುವವರ ದಿನಗಳಿಗೆ ವೃದ್ಧಿ, ದುಷ್ಟರ ವರ್ಷಗಳು ಅಲ್ಪ.


ಆದರೆ ಯೆಹೋವನಲ್ಲಿ ಭಯಭಕ್ತಿಯುಳ್ಳವರ ಮೇಲೆ, ಆತನ ದಯೆಯು ಯುಗಯುಗಾಂತರಗಳವರೆಗೂ ಇರುತ್ತದೆ.


ಭಯಭಕ್ತಿಯುಳ್ಳ ಜನರಿಗೆ ಆತನ ರಕ್ಷಣೆಯು ಹತ್ತಿರವಿರುವುದು ಸತ್ಯ. ಇದರಿಂದ ಆತನ ಮಹಿಮೆ ನಮ್ಮ ದೇಶದಲ್ಲಿ ನೆಲೆಗೊಳ್ಳುವುದು.


ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ ಎಲ್ಲಾ ಕಾರ್ಯಗಳು ಒಳ್ಳೆಯದಕ್ಕಾಗಿಯೇ ಆಗುವುದೆಂದು ನಮಗೆ ತಿಳಿದಿದೆ.


ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ ದೇವರ ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ; ದುಷ್ಟರನ್ನು ತುಳಿದುಬಿಡುವಿರಿ.


ದೀರ್ಘಾಯುಷ್ಯವನ್ನು ಅನುಗ್ರಹಿಸಿ, ಅವನನ್ನು ತೃಪ್ತಿಪಡಿಸುವೆನು; ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸುವೆನು.


ಅವರು ಸುಖದಿಂದಲೇ ಇರುವರು; ಅವರ ಸಂತತಿಯವರು ದೇಶವನ್ನು ಅನುಭವಿಸುವರು.


ಪ್ರತಿಯೊಂದು ದುಷ್ಕೃತ್ಯದಿಂದ ಕರ್ತನು ನನ್ನನ್ನು ಕಾಪಾಡಿ ತನ್ನೊಂದಿಗೆ ಪರಲೋಕ ರಾಜ್ಯಕ್ಕೆ ಸೇರಿಸುವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಸ್ತೋತ್ರ. ಆಮೆನ್.


ಯೆಹೋವನ ಭಯ ಪರಿಶುದ್ಧವಾಗಿದೆ; ಅದು ಶಾಶ್ವತವಾದದ್ದೇ. ಯೆಹೋವನ ಕಟ್ಟಳೆಗಳು ಯಥಾರ್ಥವಾದವುಗಳು; ಅವು ಕೇವಲ ನ್ಯಾಯವಾಗಿವೆ.


ಹೀಗಿರಲಾಗಿ ಯೂದಾಯ, ಗಲಿಲಾಯ, ಸಮಾರ್ಯ ಸೀಮೆಗಳಲ್ಲಿದ್ದ ಸಭೆಯು ಸಮಾಧಾನ ಹೊಂದಿತು; ಮತ್ತು ಭಕ್ತಿಯಲ್ಲಿ ಬೆಳೆದು ಕರ್ತನ ಭಯದಲ್ಲಿ ನಡೆದು, ಪವಿತ್ರಾತ್ಮನಿಂದ ಪ್ರೋತ್ಸಾಹವನ್ನು ಹೊಂದಿ ಬೆಳೆಯುತ್ತಾ ಬಂದಿತು.


ಯಾವ ಕೇಡೂ ನಿನಗೆ ಸಂಭವಿಸದು; ಉಪದ್ರವವು ನಿನ್ನ ಗುಡಾರದ ಸಮೀಪಕ್ಕೂ ಬಾರದು.


ಧರ್ಮನಿರತನಿಗೆ ಜೀವ, ಅಧರ್ಮಾಸಕ್ತನಿಗೆ ಮರಣ.


ಮನುಷ್ಯನು ತನ್ನ ಹೃದಯದಲ್ಲಿ ಬಯಸುವಂಥದ್ದು ನಿಷ್ಠೆಯಾಗಿದೆ, ಬಡವನಾಗಿರುವುದು ಉತ್ತಮ.


ನೀನು ಮಲಗುವಾಗ ಹೆದರಿಕೆ ಇರುವುದಿಲ್ಲ, ಮಲಗಿದ ಮೇಲೆ ಸುಖವಾಗಿ ನಿದ್ರೆಮಾಡುವಿ.


ಧನ, ಮಾನ ಮತ್ತು ಜೀವಗಳು ದೀನಭಾವಕ್ಕೂ, ಯೆಹೋವನ ಭಯಕ್ಕೂ ಫಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು