Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 19:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನೀಚ ಸಾಕ್ಷಿಯು ನ್ಯಾಯವನ್ನು ಗೇಲಿಮಾಡುವನು, ದುಷ್ಟರ ಬಾಯಿ ದ್ರೋಹವನ್ನು ಆತುರದಿಂದ ನುಂಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ನೀಚಸಾಕ್ಷಿ ನ್ಯಾಯತೀರ್ಪನ್ನು ಮರ್ಯಾದಿಸನು; ದುಷ್ಟಸಾಕ್ಷಿ ದ್ರೋಹವನ್ನೂ ನುಂಗಿಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನೀಚ ಸಾಕ್ಷಿಯು ನ್ಯಾಯವನ್ನು ಗೇಲಿಮಾಡುವನು; ದುಷ್ಟರ ಬಾಯಿ ದ್ರೋಹವನ್ನು ಆತುರದಿಂದ ನುಂಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ದುಷ್ಟಸಾಕ್ಷಿಯು ನ್ಯಾಯವನ್ನು ಪರಿಹಾಸ್ಯ ಮಾಡುವನು; ಕೆಡುಕರ ಮಾತುಗಳು ಅನ್ಯಾಯವನ್ನು ಹರಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಭ್ರಷ್ಟನ ಸಾಕ್ಷಿಯು ನ್ಯಾಯತೀರ್ಪನ್ನು ಗೇಲಿ ಮಾಡುತ್ತದೆ; ದುಷ್ಟನ ಬಾಯಿಯು ದ್ರೋಹವನ್ನು ನುಂಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 19:28
15 ತಿಳಿವುಗಳ ಹೋಲಿಕೆ  

ಹೀಗಿರಲು ಅಧರ್ಮವನ್ನು ನೀರಿನಂತೆ ಕುಡಿಯುತ್ತಾ ಅಸಹ್ಯನೂ, ಕೆಟ್ಟವನೂ ಆದ ನರಜನ್ಮದವನು ಮತ್ತೂ ಅಶುದ್ಧನಲ್ಲವೇ!


ಯೋಬನಿಗೆ ಸಮಾನನು ಯಾರು? ದೇವದೂಷಣೆಯನ್ನು ನೀರಿನಂತೆ ಕುಡಿಯುತ್ತಾನಲ್ಲಾ.


ನನ್ನ ಜನರ ಪಾಪವೇ ಅವರಿಗೆ ಜೀವನ; ಅವರು ಅಧರ್ಮವನ್ನು ಆಶಿಸುತ್ತಾರೆ.


ವಿವೇಕಿಯ ಹೃದಯ ತಿಳಿವಳಿಕೆಯನ್ನು ಹುಡುಕುವುದು, ಮೂಢರ ಬಾಯಿ ಮೂರ್ಖತನವನ್ನು ಮುಕ್ಕುವುದು.


ಆ ದುಷ್ಟನು ತನ್ನೊಳಗೆ, “ದೇವರು ಇವನನ್ನು ಬಿಟ್ಟು ವಿಮುಖನಾಗಿದ್ದಾನೆ; ಆತನು ನೋಡುವುದೇ ಇಲ್ಲ” ಅಂದುಕೊಳ್ಳುತ್ತಾನೆ.


ಅವನ ಪ್ರಯತ್ನಗಳು ಯಾವಾಗಲೂ ಕೈಗೂಡುತ್ತವೆ; ಆದರೆ ನಿನ್ನ ನ್ಯಾಯತೀರ್ಪು ಮಹೋನ್ನತವಾಗಿರುವುದರಿಂದ ಅದು ಅವನ ಗ್ರಹಿಕೆಗೆ ಬರುವುದಿಲ್ಲ; ವೈರಿಗಳ ಗುಂಪನ್ನಾದರೋ ತಾತ್ಸಾರಮಾಡುತ್ತಾನೆ.


ತರುವಾಯ ಇಬ್ಬರು ದುಷ್ಟರು ಬಂದು ಅವನ ಮುಂದೆ ಕುಳಿತು ಇವನು ದೇವರನ್ನೂ ಅರಸನನ್ನೂ ಶಪಿಸಿದ್ದಾನೆ ಎಂಬುದಾಗಿ ಜನರ ಎದುರಿನಲ್ಲಿ ಅವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಿದರು. ಜನರು ಅವನನ್ನು ಊರಿನ ಹೊರಗೆ ಒಯ್ದು ಕಲ್ಲೆಸೆದು ಕೊಂದರು.


ಅವನು ದೇವರನ್ನೂ ಮತ್ತು ಅರಸನನ್ನೂ ಶಪಿಸಿದನು ಎಂಬುದಾಗಿ ಇಬ್ಬರ ಸಾಕ್ಷಿ ಹೇಳಿಸಿ, ಅವನನ್ನು ಹೊರಗೆ ಒಯ್ದು ಕಲ್ಲೆಸೆದು ಕೊಲ್ಲಿರಿ” ಎಂದು ಬರೆದಿದ್ದಳು.


ಮಗನೇ, ಬುದ್ಧಿವಾದಗಳನ್ನು ಅನುಸರಿಸಲಿಕ್ಕೆ ಮನಸ್ಸಿಲ್ಲದಿದ್ದರೆ, ಉಪದೇಶ ಕೇಳುವುದನ್ನೇ ಬಿಟ್ಟುಬಿಡು.


ಅವನ ಉಳಿದ ಚರಿತ್ರೆಯೂ ಪರಾಕ್ರಮಕೃತ್ಯಗಳೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ನೀಚನು ಕೇಡೆಂಬ ಕುಣಿಯನ್ನು ತೋಡುತ್ತಾನೆ, ಅವನ ಮಾತುಗಳು ಬೆಂಕಿಯ ಉರಿಯಂತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು