Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 19:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಉದಾರಿಯ ಕಟಾಕ್ಷವನ್ನು ಅನೇಕರು ಕೋರುವರು, ದಾನಶೂರನಿಗೆ ಪ್ರತಿಯೊಬ್ಬನೂ ಸ್ನೇಹಿತನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಉದಾರಿಯ ಕೃಪೆಕೋರುವವರು ಅನೇಕರು; ದಾನಶೂರನಿಗೆ ಎಲ್ಲರು ಸ್ನೇಹಿತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಉದಾರಿಯ ಕಟಾಕ್ಷವನ್ನು ಅನೇಕರು ಕೋರುವರು; ದಾನಶೂರನಿಗೆ ಪ್ರತಿಯೊಬ್ಬನೂ ಸ್ನೇಹಿತನಲ್ಲವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಉದಾರಿಯ ಸ್ನೇಹಿತರಾಗಿರಲು ಅನೇಕರಿಗೆ ಆಸೆ. ದಾನಶೂರನಿಗೆ ಸ್ನೇಹಿತರಾಗಿರಲು ಎಲ್ಲರಿಗೂ ಆಸೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅನೇಕರು ಅಧಿಪತಿಯಿಂದ ಸಹಾಯ ಪಡೆಯುತ್ತಾರೆ. ಕಾಣಿಕೆಗಳನ್ನು ಕೊಡುವವನಿಗೆ ಪ್ರತಿಯೊಬ್ಬನೂ ಸ್ನೇಹಿತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 19:6
14 ತಿಳಿವುಗಳ ಹೋಲಿಕೆ  

ಅನೇಕರು ನ್ಯಾಯಾಧಿಪತಿಯ ಕಟಾಕ್ಷವನ್ನು ಕೋರುವರು, ನ್ಯಾಯತೀರ್ಪು ಯೆಹೋವನಿಂದಲೇ ಆಗುವುದು.


ಕಾಣಿಕೆಯು ಅನುಕೂಲತೆಗೂ, ಶ್ರೀಮಂತರ ಸಾನ್ನಿಧ್ಯ ಪ್ರವೇಶಕ್ಕೂ ಸಾಧನ.


ಕೊಡುವವನ ದೃಷ್ಟಿಗೆ ಲಂಚವು ಚಿಂತಾಮಣಿಯಾಗಿದೆ, ಎಲ್ಲಿ ಹೋದರೂ ಅವನಿಗೆ ಅನುಕೂಲವೇ.


ಗುಪ್ತ ಬಹುಮಾನವು ಕೋಪವನ್ನಾರಿಸುವುದು, ಮಡಲಲ್ಲಿಟ್ಟ ಲಂಚವು ಕ್ರೋಧವನ್ನು ಅಣಗಿಸುವುದು.


ರಾಜನ ರೋಷವು ಸಿಂಹದ ಗರ್ಜನೆ, ಅವನ ದಯೆಯು ಪೈರಿನ ಇಬ್ಬನಿ.


ಐಗುಪ್ತ ದೇಶದ ಮೇಲೆ ಅಧಿಕಾರವನ್ನು ನಡಿಸಿ ಜನರಿಗೆ ಧಾನ್ಯವನ್ನು ಮಾರುವವನು ಯೋಸೇಫನೇ ಆಗಿದ್ದನು. ಹೀಗಿರುವುದರಿಂದ ಅವನ ಅಣ್ಣಂದಿರು ಬಂದು ಅವನ ಮುಂದೆಯೇ ಅಡ್ಡಬಿದ್ದರು.


ಯಾಕೆಂದರೆ ಪಾಪವು ಕೊಡುವ ಸಂಬಳ ಮರಣ; ದೇವರ ಕೃಪಾವರವು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿರುವ ನಿತ್ಯಜೀವವೇ ಆಗಿದೆ.


ಅವರು ಆ ಮನೆಯೊಳಕ್ಕೆ ಹೋಗಿ ಆ ಕೂಸನ್ನು ಅದರ ತಾಯಿಯಾದ ಮರಿಯಳ ಬಳಿಯಲ್ಲಿ ಕಂಡು ಅದಕ್ಕೆ ಸಾಷ್ಟಾಂಗನಮಸ್ಕಾರ ಮಾಡಿ ತಮ್ಮ ನಿಕ್ಷೇಪದ ಗಂಟುಗಳನ್ನು ಬಿಚ್ಚಿ ಅದಕ್ಕೆ ಚಿನ್ನ, ಪರಿಮಳದ್ರವ್ಯ ಮತ್ತು ರಕ್ತಬೋಳಗಳನ್ನು ಮಗುವಿಗೆ ಕಾಣಿಕೆಯಾಗಿ ಅರ್ಪಿಸಿದರು.


ಪ್ರಭುವಿನ ಮುಖಪ್ರಸನ್ನತೆ ಜೀವ, ಆತನ ದಯೆ ಮುಂಗಾರುಮುಗಿಲು.


ತೂರ್ ಸಂಸ್ಥಾನದವರು ಕಾಣಿಕೆಗಳೊಂದಿಗೆ ಬರುವರು; ಪ್ರಜೆಗಳಲ್ಲಿ ಐಶ್ವರ್ಯವಂತರು ನಿನ್ನ ದಯೆಯನ್ನು ಕೋರುವರು.


ಆಗ ಆ ಮನುಷ್ಯರು ಕಾಣಿಕೆಯನ್ನು ಸಿದ್ಧಮಾಡಿಕೊಂಡು, ಎರಡರಷ್ಟು ಹಣವನ್ನೂ ತೆಗೆದುಕೊಂಡು, ಬೆನ್ಯಾಮೀನನನ್ನು ತಮ್ಮ ಜೊತೆಯಲ್ಲಿ ಕರೆದುಕೊಂಡು ಐಗುಪ್ತ ದೇಶಕ್ಕೆ ಹೋಗಿ ಯೋಸೇಫನ ಎದುರಿನಲ್ಲಿ ನಿಂತುಕೊಂಡರು.


ಯಾಕೋಬನು ತನ್ನೊಳಗೆ, “ನನ್ನ ಮುಂದೆ ಹೋಗುವ ಈ ಕಾಣಿಕೆಯಿಂದ ಏಸಾವನನ್ನು ಸಮಾಧಾನಪಡಿಸುವೆನು. ಆಮೇಲೆ ಅವನನ್ನು ಸಂಧಿಸುವಾಗ, ಒಂದು ವೇಳೆ ನನ್ನನ್ನು ಪ್ರೀತಿಯಿಂದ ಸ್ವೀಕರಿಸುವನೇನೋ” ಎಂದುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು