Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 2:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವರಾದರೋ ಕತ್ತಲೆಯ ಮಾರ್ಗಗಳನ್ನು ಹಿಡಿಯಬೇಕೆಂದು, ಧರ್ಮಮಾರ್ಗಗಳನ್ನು ತೊರೆದುಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅಂಥವರು ಹಿಡಿವುದು ಕತ್ತಲು ಹಾದಿಯನ್ನು, ತೊರೆದುಬಿಡುವರು ಸತ್ಯದ ಮಾರ್ಗವನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅವರಾದರೋ ಕತ್ತಲ ಹಾದಿಗಳನ್ನು ಹಿಡಿಯಬೇಕೆಂದು ಧರ್ಮಮಾರ್ಗಗಳನ್ನು ತೊರೆದುಬಿಡುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅವರಾದರೋ ನೀತಿಮಾರ್ಗವನ್ನು ಬಿಟ್ಟು ಪಾಪವೆಂಬ ಕತ್ತಲೆಯಲ್ಲಿ ಜೀವಿಸುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅವರು ಕತ್ತಲೆಯ ಹಾದಿಗಳಲ್ಲಿ ನಡೆಯುವುದಕ್ಕೆ ನೇರವಾದ ದಾರಿಗಳನ್ನು ತೊರೆದುಬಿಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 2:13
21 ತಿಳಿವುಗಳ ಹೋಲಿಕೆ  

ದುಷ್ಟರ ಮಾರ್ಗವೋ ಕತ್ತಲಿನಂತಿದೆ; ತಾವು ಯಾವುದಕ್ಕೆ ಎಡವಿಬಿದ್ದೆವೆಂದು ಅವರಿಗೆ ಗೊತ್ತಾಗದು.


ಅವರು ನಮ್ಮಿಂದ ಹೊರಟುಹೋದವರು. ಏಕೆಂದರೆ ಅವರು ನಮ್ಮವರಾಗಿರಲಿಲ್ಲ. ಅವರು ನಮ್ಮವರಾಗಿದ್ದರೆ, ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟುಹೋದುದರಿಂದ ಅವರೆಲ್ಲರೂ ನಮ್ಮವರಲ್ಲವೆಂಬುದು ಸ್ಪಷ್ಟವಾಗಿ ತೋರಿಬಂದಿದೆ.


ಜ್ಞಾನಮಾರ್ಗದಿಂದ ತಪ್ಪಿದವನಿಗೆ, ಪ್ರೇತಸಮೂಹವೇ ವಿಶ್ರಾಂತಿಸ್ಥಾನ.


ಯಾಕೆಂದರೆ ದೇಮನು ಇಹಲೋಕವನ್ನು ಪ್ರೀತಿಸಿ, ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು.


ಆಗ ಯೇಸು ಅವರಿಗೆ, “ಇನ್ನು ಸ್ವಲ್ಪ ಕಾಲವೇ ಬೆಳಕು ನಿಮ್ಮಲ್ಲಿ ಇರುತ್ತದೆ. ಕತ್ತಲೆಯು ನಿಮ್ಮನ್ನು ಮುಸುಕಿಕೊಳ್ಳದಂತೆ ಬೆಳಕು ಇರುವಾಗಲೇ ನಡೆಯಿರಿ. ಕತ್ತಲಿನಲ್ಲಿ ಒಬ್ಬನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯನು.


ದೇವರು ಕಳುಹಿಸಿದ ಒಬ್ಬ ಮನುಷ್ಯನು ಬಂದನು. ಅವನ ಹೆಸರು ಯೋಹಾನನು.


ಯೆಹೋವನನ್ನು ಆಶ್ರಯಿಸದೆ, ಯೆಹೋವನ ದರ್ಶನವನ್ನು ಬಯಸದೇ, ಯೆಹೋವನ ಮಾರ್ಗ ಬಿಟ್ಟವರನ್ನೂ ಧ್ವಂಸ ಮಾಡುವೆನು.”


ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು, ಅಧರ್ಮಮಾಡಿ, ಅದರಲ್ಲಿ ಸತ್ತರೆ ತಾನು ಮಾಡಿದ ಅಧರ್ಮದಿಂದಲೇ ಸಾಯಬೇಕಾಯಿತು.


ಇವರು ಬುದ್ಧಿಹೀನರೂ, ವಿವೇಕಶೂನ್ಯರೂ ಆಗಿ ಅಂಧಕಾರದಲ್ಲಿ ಅಲೆಯುತ್ತಾರೆ. ಭೂಮಿಯ ಅಸ್ತಿವಾರಗಳೆಲ್ಲಾ ಕದಲುತ್ತವೆ.


ಅವನ ಬಾಯಿಂದ ಕೆಡುಕೂ, ವಂಚನೆಯೂ ಬರುತ್ತವೆ; ವಿವೇಕಮಾರ್ಗವನ್ನೂ, ಪರಹಿತವನ್ನೂ ಬಿಟ್ಟೇಬಿಟ್ಟಿದ್ದಾನೆ.


ಒಳ್ಳೆಯದನ್ನು ಮಾಡುವವನು ಇಲ್ಲ, ಒಬ್ಬನಾದರೂ ಇಲ್ಲ. ಪ್ರತಿಯೊಬ್ಬನೂ ದಾರಿತಪ್ಪಿದವನು, ಎಲ್ಲರೂ ಕೆಟ್ಟು ಹೋದವರೇ.


ಯಾಕೆಂದರೆ ದೇವರ ವಿಷಯವಾಗಿ ಅವರಿಗೆ ತಿಳಿವಳಿಕೆಯಿದ್ದರೂ ಅವರು ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ. ಆತನ ಉಪಕಾರಗಳನ್ನು ನೆನಸಿ ಆತನನ್ನು ಸ್ತುತಿಸಲಿಲ್ಲ. ಅವರು ಎಷ್ಟೇ ವಿಚಾರ ಮಾಡಿದರೂ ಫಲ ಕಾಣಲಿಲ್ಲ. ವಿವೇಕವಿಲ್ಲದ ಅವರ ಮನಸ್ಸು ಕತ್ತಲಾಗಿಬಿಟ್ಟಿದೆ.


ಇವರು ಸಮಾಧಾನದ ಮಾರ್ಗವನ್ನೇ ಅರಿಯರು, ಇವರ ಹಾದಿಗಳಲ್ಲಿ ಯಾವ ನ್ಯಾಯವೂ ಇಲ್ಲ, ತಮ್ಮ ಮಾರ್ಗಗಳನ್ನು ಡೊಂಕು ಮಾಡಿಕೊಂಡಿದ್ದಾರೆ, ಅವುಗಳಲ್ಲಿ ನಡೆಯುವವರು ಸಮಾಧಾನವನ್ನು ಅರಿಯರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು