Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 2:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯಥಾರ್ಥವಂತರು ದೇಶದಲ್ಲಿ ಸ್ವತಂತ್ರರಾಗಿರುವರು, ನಿರ್ದೋಷಿಗಳು ಅದರಲ್ಲಿ ನೆಲೆಯಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಸತ್ಯವಂತರು ನಾಡಿನಲ್ಲಿ ಬಾಳುವರು, ನಿರ್ದೋಷಿಗಳು ಅದರಲ್ಲಿ ನೆಲೆಯಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯಥಾರ್ಥವಂತರು ದೇಶದಲ್ಲಿ ಸ್ವತಂತ್ರರಾಗಿರುವರು, ನಿರ್ದೋಷಿಗಳು ಅದರಲ್ಲಿ ನೆಲೆಯಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯಥಾರ್ಥವಂತರು ಸ್ವದೇಶದಲ್ಲಿ ವಾಸಿಸುವರು. ನಿರ್ದೋಷಿಗಳು ಸ್ವದೇಶದಲ್ಲಿ ನೆಲೆಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಏಕೆಂದರೆ ಪ್ರಾಮಾಣಿಕರು ದೇಶದಲ್ಲಿ ವಾಸಿಸುವರು, ನಿರ್ದೋಷಿಗಳು ಅದರಲ್ಲಿ ನೆಲೆಯಾಗಿ ಇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 2:21
12 ತಿಳಿವುಗಳ ಹೋಲಿಕೆ  

ನೀತಿವಂತರೋ ದೇಶವನ್ನು ಅನುಭವಿಸುವವರಾಗಿ, ಅದರಲ್ಲಿ ಶಾಶ್ವತವಾಗಿ ವಾಸಿಸುವರು.


ಕೆಡುಕರು ತೆಗೆದುಹಾಕಲ್ಪಡುವರು; ಯೆಹೋವನನ್ನು ನಿರೀಕ್ಷಿಸುವವರೇ ದೇಶವನ್ನು ಅನುಭವಿಸುವರು.


ಶಿಷ್ಟರು ಎಂದಿಗೂ ಕದಲರು, ದುಷ್ಟರು ದೇಶದಲ್ಲಿ ನಿಲ್ಲರು.


ಯೆಹೋವ ದೇವರು ಸೂರ್ಯನೂ, ಗುರಾಣಿಯೂ ಆಗಿದ್ದಾನಲ್ಲಾ. ಯೆಹೋವನು ಕೃಪೆಯನ್ನೂ, ಘನವನ್ನೂ ಅನುಗ್ರಹಿಸುವನು; ಆತನು ಸದ್ಭಕ್ತರಿಗೆ ಯಾವ ಶುಭವನ್ನು ದಯಪಾಲಿಸದೆ ಇದ್ದಾನೋ?


ಯೆಹೋವನು ಯೋಬನ ಮೊದಲನೆಯ ಸ್ಥಿತಿಗಿಂತಲೂ ಅವನ ಕಡೆಯ ಸ್ಥಿತಿಯನ್ನು ಹೀಗೆ ಹೆಚ್ಚಾಗಿ ಆಶೀರ್ವದಿಸಿದನು. ಅವನಿಗೆ ಹದಿನಾಲ್ಕು ಸಾವಿರ ಕುರಿಗಳೂ, ಆರು ಸಾವಿರ ಒಂಟೆಗಳೂ, ಒಂದು ಸಾವಿರ ಜೋಡಿ ಎತ್ತುಗಳೂ, ಒಂದು ಸಾವಿರ ಹೆಣ್ಣುಕತ್ತೆಗಳೂ ಉಂಟಾದವು.


ಯೆಹೋವನ ಆಶೀರ್ವಾದವು ಯಾರಿಗಿರುವುದೋ ಅವರು ದೇಶವನ್ನು ಅನುಭವಿಸುವರು; ಆತನ ಶಾಪವು ಯಾರಿಗಿರುವುದೋ ಅವರು ತೆಗೆದುಹಾಕಲ್ಪಡುವರು.


ಆದರೆ ದೀನರು ದೇಶವನ್ನು ಅನುಭವಿಸುವರು; ಅವರು ಮಹಾಸೌಖ್ಯದಿಂದ ಆನಂದಿಸುವರು.


ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ದೇಶದಲ್ಲಿ ವಾಸವಾಗಿದ್ದು ನಂಬಿಕೆಯನ್ನು ಅನುಸರಿಸು.


ಊಚ್ ದೇಶದಲ್ಲಿ ಯೋಬನೆಂಬ ಒಬ್ಬ ಮನುಷ್ಯನಿದ್ದನು. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ, ನಿರ್ದೋಷಿಯೂ, ಯಥಾರ್ಥಚಿತ್ತನೂ ಆಗಿದ್ದನು.


ಯಥಾರ್ಥವಂತರನ್ನು ದುರ್ಮಾರ್ಗಕ್ಕೆ ಎಳೆಯುವವನು, ತಾನು ತೋಡಿದ ಗುಂಡಿಯಲ್ಲಿ ತಾನೇ ಬೀಳುವನು, ನಿರ್ದೋಷಿಗಳಿಗೋ ಸುಖವು ಸೊತ್ತಾಗುವುದು.


ಯೆಹೋವನು ನಿರ್ದೋಷಿಗಳ ಜೀವಮಾನವನ್ನು ಲಕ್ಷಿಸುತ್ತಾನೆ; ಅವರ ಸ್ವತ್ತು ಶಾಶ್ವತವಾಗಿ ನಿಲ್ಲುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು