Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 20:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಚಾಡಿಕೋರನು ಗುಟ್ಟನ್ನು ರಟ್ಟು ಮಾಡುವನು, ಆದುದರಿಂದ ತುಟಿ ಬಿಗಿಹಿಡಿಯದವನ ಗೊಡವೆಗೆ ಹೋಗಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಗುಟ್ಟನ್ನು ರಟ್ಟು ಮಾಡದಿರನು ಚಾಡಿಕೋರ; ತುಟಿ ಬಿಗಿಹಿಡಿಯದವನ ಗೊಡವೆ ನಿನಗೆ ಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಚಾಡಿಕೋರನು ಗುಟ್ಟು ರಟ್ಟುಮಾಡುವನು; ಆದದರಿಂದ ತುಟಿಬಿಗಿಹಿಡಿಯದವನ ಗೊಡವೆಗೆ ಹೋಗಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಬೇರೆಯವರ ಬಗ್ಗೆ ಸುಳ್ಳುಸುದ್ದಿ ಹಬ್ಬಿಸುವವನನ್ನು ನಂಬಬೇಡ; ಅತಿಯಾಗಿ ಮಾತಾಡುವವನ ಸ್ನೇಹಿತನೂ ಆಗಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಚಾಡಿಕೋರನು ಗುಟ್ಟುಗಳನ್ನು ರಟ್ಟುಮಾಡುತ್ತಾನೆ; ಆದಕಾರಣ ಹರಟೆ ಹೊಡೆಯುವವನ ಸಹವಾಸ ಮಾಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 20:19
9 ತಿಳಿವುಗಳ ಹೋಲಿಕೆ  

ಚಾಡಿಕೋರನು ಗುಟ್ಟನ್ನು ರಟ್ಟು ಮಾಡುವನು, ನಂಬಿಗಸ್ತನು ಸಂಗತಿಗಳನ್ನು ಗುಪ್ತವಾಗಿಡುವನು.


ಅಂಥವರು ನಮ್ಮ ಕರ್ತನಾದ ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿಗಳಿಂದಲೂ ಮತ್ತು ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.


ಚಾಡಿಕೋರನ ಮಾತುಗಳು ರುಚಿಯಾದ ತುತ್ತುಗಳು, ಹೊಟ್ಟೆಯೊಳಕ್ಕೇ ಇಳಿಯುವವು.


ಬಾಯನ್ನು ಕಾಯುವವನು ಜೀವವನ್ನು ಕಾಯುತ್ತಾನೆ, ತುಟಿಗಳನ್ನು ತೆರೆದುಬಿಡುವವನು ನಾಶವಾಗುವನು.


“‘ಪರಿಚಯವುಳ್ಳವರಲ್ಲಿ ಒಬ್ಬರ ಮೇಲೊಬ್ಬರು ಚಾಡಿಹೇಳಬಾರದು. ನೆರೆಯವನಿಗೆ ಮರಣ ಶಿಕ್ಷೆಯಾಗಲೇಬೇಕು ಎಂದು ಹಠ ಹಿಡಿಯಬಾರದು. ನಾನು ಯೆಹೋವನು.


ಮಗನೇ, ಯೆಹೋವನಿಗೂ ಮತ್ತು ರಾಜನಿಗೂ ಭಯಪಡು, ತಿರುಗಿಬೀಳುವವರ ಗೊಡವೆಗೆ ಹೋಗಬೇಡ.


ಬಲಾತ್ಕಾರಿಯು ನೆರೆಯವನನ್ನು ಮರುಳುಗೊಳಿಸಿ, ದುರ್ಮಾರ್ಗಕ್ಕೆ ಎಳೆಯುವನು.


ಗುಪ್ತದಲ್ಲಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸಂಹರಿಸುವೆನು; ಸೊಕ್ಕಿನ ಕಣ್ಣೂ, ಉಬ್ಬಿದ ಮನಸ್ಸೂ ಉಳ್ಳವನನ್ನು ಸಹಿಸುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು