ಜ್ಞಾನೋಕ್ತಿಗಳು 20:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಮನುಷ್ಯನಿಗೆ ಗತಿಯನ್ನು ಏರ್ಪಡಿಸುವವನು ಯೆಹೋವನೇ ಆಗಿರುವಲ್ಲಿ, ಮನುಷ್ಯನು ತನ್ನ ಮಾರ್ಗವನ್ನು ಹೇಗೆ ತಿಳಿದುಕೊಂಡಾನು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಮಾನವನ ಸ್ಥಿತಿಗತಿ ಸರ್ವೇಶ್ವರನ ಏರ್ಪಾಡು; ಮನುಷ್ಯ ತನ್ನ ಮಾರ್ಗವನ್ನು ತಾನೇ ಹೇಗೆ ತಿಳಿದಾನು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಮನುಷ್ಯನಿಗೆ ಗತಿಯನ್ನು ಏರ್ಪಡಿಸುವವನು ಯೆಹೋವನೇ ಆಗಿರುವಲ್ಲಿ ಮನುಷ್ಯನು ತನ್ನ ಮಾರ್ಗವನ್ನು ಹೇಗೆ ತಿಳಿದುಕೊಂಡಾನು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಭವಿಷ್ಯತ್ತನ್ನು ನಿರ್ಣಯಿಸುವವನು ಯೆಹೋವನೇ ಆಗಿರುವಾಗ, ತನ್ನ ಭವಿಷ್ಯತ್ತನ್ನು ಅರ್ಥಮಾಡಿಕೊಳ್ಳಲು ಯಾರಿಗೆ ಸಾಧ್ಯ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಮನುಷ್ಯನ ಹೆಜ್ಜೆಗಳನ್ನು ಯೆಹೋವ ದೇವರು ನಿರ್ದೇಶಿಸುತ್ತಾರೆ. ಹಾಗಾದರೆ ಒಬ್ಬ ಮನುಷ್ಯನು ತನ್ನ ಮಾರ್ಗವನ್ನು ಹೇಗೆ ತಿಳಿದುಕೊಳ್ಳಬಲ್ಲನು? ಅಧ್ಯಾಯವನ್ನು ನೋಡಿ |
ಪರಲೋಕದ ಒಡೆಯನಿಗೆ ವಿರುದ್ಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಮುಂದೆ ತಂದರಲ್ಲಾ; ನೀನು ನಿನ್ನ ರಾಜ್ಯದ ಮುಖಂಡರ, ಪತ್ನಿ ಹಾಗೂ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ, ಕಣ್ಣು, ಕಿವಿ ಇಲ್ಲದ ಬೆಳ್ಳಿ, ಬಂಗಾರ, ತಾಮ್ರ, ಕಬ್ಬಿಣ, ಮರ, ಕಲ್ಲುಗಳ ದೇವರುಗಳನ್ನು ಸ್ತುತಿಸಿದ್ದೀ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ, ನಿನ್ನ ಸ್ಥಿತಿಗತಿಗಳು ಯಾರ ಅಧೀನವೋ ಆ ದೇವರನ್ನು ಘನಪಡಿಸಲೇ ಇಲ್ಲ.