Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 20:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ರಾಜನ ಕೃಪಾಸತ್ಯತೆಗಳು ಅವನನ್ನು ಕಾಯುವವು, ಅವನ ಕರುಣೆಯೇ ಅವನ ಸಿಂಹಾಸನಕ್ಕೆ ಆಧಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಪ್ರೀತಿಸತ್ಯತೆಗಳು ರಾಜನನ್ನು ಕಾಪಾಡುವ ಕವಚ; ಕರುಣೆಯೇ ಅವನ ಸಿಂಹಾಸನಕ್ಕೆ ಸ್ಥಿರಾಧಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ರಾಜನ ಕೃಪಾಸತ್ಯತೆಗಳು ಅವನನ್ನು ಕಾಯುವವು; ಅವನ ಕರುಣೆಯೇ ಅವನ ಸಿಂಹಾಸನಕ್ಕೆ ಆಧಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ರಾಜನು ನಂಬಿಗಸ್ತನಾಗಿಯೂ ಪ್ರೀತಿಯುಳ್ಳವನಾಗಿಯೂ ಇದ್ದರೆ, ಅವನ ಅಧಿಕಾರ ಉಳಿದುಕೊಳ್ಳುವುದು; ಅವನ ಆಡಳಿತ ಮುಂದುವರಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಪ್ರೀತಿಯೂ ನಂಬಿಗಸ್ತಿಕೆಯೂ ಅರಸನನ್ನು ಕಾಯುತ್ತವೆ; ಪ್ರೀತಿಯಿಂದಲೇ ಅವನ ಸಿಂಹಾಸನವು ಸ್ಥಿರಗೊಳ್ಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 20:28
11 ತಿಳಿವುಗಳ ಹೋಲಿಕೆ  

ಬಡವರನ್ನು ನ್ಯಾಯವಾಗಿ ಆಳ್ವಿಕೆ ಮಾಡುವ ರಾಜನ ಸಿಂಹಾಸನವು ಶಾಶ್ವತವು.


ರಾಜರು ಸಿಂಹಾಸನಕ್ಕೆ ಧರ್ಮವೇ ಆಧಾರವೆಂದು ತಿಳಿದು, ಅಧರ್ಮವನ್ನಾಚರಿಸಲು ಅಸಹ್ಯಪಡುವರು.


ಕೃಪಾಸತ್ಯತೆಗಳಿಂದ ಪಾಪನಿವಾರಣೆ, ಯೆಹೋವನ ಭಯಭಕ್ತಿಯಿಂದ ಹಾನಿನಿವಾರಣೆ.


ಪ್ರೀತಿ, ನೀತಿಗಳನ್ನು ಕುರಿತು ಹಾಡುವೆನು; ಯೆಹೋವನೇ, ನಿನ್ನನ್ನು ಕೊಂಡಾಡುವೆನು.


ಯೆಹೋವನೇ, ನನಗೋಸ್ಕರ ನ್ಯಾಯವನ್ನು ನಿರ್ಣಯಿಸು. ನಾನಾದರೋ ನಿರ್ದೋಷಿಯಾಗಿಯೇ ನಡೆದುಕೊಂಡಿದ್ದೇನೆ. ನಾನು ಕದಲದೆ ಯೆಹೋವನಲ್ಲೇ ಭರವಸವಿಟ್ಟಿದ್ದೇನೆ.


ಅರಸನು ಯೆಹೋವನಲ್ಲಿಯೇ ಭರವಸವಿಟ್ಟಿದ್ದಾನೆ; ಪರಾತ್ಪರನಾದ ದೇವರ ಶಾಶ್ವತ ಪ್ರೀತಿಯ ನಿಮಿತ್ತ ಅವನು ಕದಲುವುದೇ ಇಲ್ಲ.


ಇದಲ್ಲದೆ ಸಿಂಹಾಸನವು ಒಡಂಬಡಿಕೆಯ ನಂಬಿಗಸ್ತಿಕೆಯಲ್ಲಿ ಸ್ಥಾಪಿತವಾಗುವುದು. ನ್ಯಾಯತೀರಿಸುವವನೂ, ನ್ಯಾಯವನ್ನು ಹುಡುಕುವವನೂ, ನೀತಿಗೋಸ್ಕರ ತ್ವರೆಪಡುವವನೂ ದಾವೀದನ ಗುಡಾರದಲ್ಲಿನ ಆ ಸಿಂಹಾಸನದ ಮೇಲೆ ಸತ್ಯಪರನಾಗಿ ನೀತಿನ್ಯಾಯದಿಂದ ಕುಳಿತುಕೊಳ್ಳುವನು.


ಅವನು ನಿನ್ನ ಸಾನ್ನಿಧ್ಯವನ್ನು ಪಡೆದು, ಸದಾಕಾಲವೂ ಸಿಂಹಾಸನಾರೂಢನಾಗಿರಲಿ; ನಿನ್ನ ಪ್ರೇಮ ಮತ್ತು ಸತ್ಯತೆಗಳು ಅವನನ್ನು ಕಾಯಲಿ.


ಯೆಹೋವನೇ, ನೀನಂತೂ ನಿನ್ನ ಕರುಣೆಯನ್ನು ನನ್ನಿಂದ ಅಗಲಿಸಬೇಡ; ನಿನ್ನ ಕೃಪಾಸತ್ಯತೆಗಳು ನನ್ನನ್ನು ಯಾವಾಗಲೂ ಕಾಪಾಡಲಿ.


ಪ್ರೀತಿ, ಸತ್ಯತೆಗಳು ನಿನ್ನನ್ನು ಬಿಡದಿರಲಿ, ಅವುಗಳನ್ನು ನಿನ್ನ ಕೊರಳಿಗೆ ಕಟ್ಟು, ನಿನ್ನ ಹೃದಯದ ಹಲಗೆಯ ಮೇಲೆ ಅವುಗಳನ್ನು ಬರೆ.


“ರಾಜನೇ ಇದರ ತಾತ್ಪರ್ಯವೇನೆಂದರೆ, ಎನ್ನೊಡೆಯನಾದ ಅರಸನಿಗೆ ಉಂಟಾಗಿರುವ ಪರಾತ್ಪರನಾದ ದೇವರ ತೀರ್ಪು ಹೀಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು