Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 20:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ನನ್ನ ಹೃದಯವನ್ನು ಶುದ್ಧಿಮಾಡಿಕೊಂಡಿದ್ದೇನೆ, ನನ್ನ ಪಾಪವನ್ನು ತೊಳೆದುಕೊಂಡು ನಿರ್ಮಲನಾಗಿದ್ದೇನೆ” ಎಂದು ಯಾರು ಹೇಳಬಲ್ಲರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 “ಹೃದಯವನ್ನು ಪರಿಶುದ್ಧವಾಗಿ ಇಟ್ಟುಕೊಂಡಿದ್ದೇನೆ; ಪಾಪವಿಮುಕ್ತನಾಗಿ ಪವಿತ್ರನಾಗಿದ್ದೇನೆ” ಎಂದು ಹೇಳಬಲ್ಲವನಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನನ್ನ ಹೃದಯವನ್ನು ಶುದ್ಧಮಾಡಿಕೊಂಡಿದ್ದೇನೆ; ನನ್ನ ಪಾಪವನ್ನು ಕಳೆದುಕೊಂಡು ನಿರ್ಮಲನಾಗಿದ್ದೇನೆ ಎಂದು ಯಾರು ಹೇಳಬಲ್ಲರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯಾವನಾದರೂ, “ನನ್ನ ಹೃದಯವನ್ನು ಶುದ್ಧೀಕರಿಸಿರುವೆ. ನಾನು ಪಾಪರಹಿತನಾಗಿರುವೆ” ಎಂದು ಹೇಳಲು ಸಾಧ್ಯವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ನನ್ನ ಹೃದಯವನ್ನು ಶುದ್ಧವಾಗಿ ಇಟ್ಟುಕೊಂಡಿದ್ದೇನೆ. ನಾನು ಶುದ್ಧನೂ ಪಾಪರಹಿತನೂ,” ಎಂದು ಯಾರು ಹೇಳಬಲ್ಲರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 20:9
11 ತಿಳಿವುಗಳ ಹೋಲಿಕೆ  

ಪಾಪಮಾಡದೇ ಧರ್ಮವನ್ನೇ ಆಚರಿಸುತ್ತಿರುವ ಸತ್ಪುರುಷರು ಲೋಕದಲ್ಲಿ ಇಲ್ಲವೇ ಇಲ್ಲ.


“ಅವರು ನಿನಗೆ ವಿರುದ್ಧವಾಗಿ ಪಾಪ ಮಾಡಬಹುದು. ಪಾಪಮಾಡದ ಮನುಷ್ಯನು ಒಬ್ಬನೂ ಇಲ್ಲ. ನೀನು ಅವರ ಮೇಲೆ ಕೋಪಗೊಂಡು ಅವರನ್ನು ಶತ್ರುಗಳ ಕೈಗೆ ಒಪ್ಪಿಸಿದಾಗ ಮತ್ತು ಆ ಶತ್ರುಗಳು ಅವರನ್ನು ಸೆರೆಹಿಡಿದು ದೂರದಲ್ಲಾಗಲಿ, ಸಮೀಪದಲ್ಲಾಗಲಿ ಇರುವ ತಮ್ಮ ದೇಶಕ್ಕೆ ಅವರನ್ನು ಒಯ್ದಾಗ,


ಅಶುದ್ಧದಿಂದ ಶುದ್ಧವು ಉಂಟಾದೀತೇ? ಎಂದಿಗೂ ಇಲ್ಲ.


ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುಮಾಡುವವರಾಗಿದ್ದಾರೆ. ಒಬ್ಬನು ಮಾತಿನಲ್ಲಿ ತಪ್ಪಿ ನಡೆಯದಿದ್ದರೆ ಅವನು ಸರ್ವಸುಗುಣವುಳ್ಳವನೂ ತನ್ನ ಇಡೀ ದೇಹವನ್ನೆಲ್ಲಾ ಸ್ವಾಧೀನಪಡಿಸಿಕೊಳ್ಳುವುದಕ್ಕೆ ಸಮರ್ಥನೂ ಆಗಿದ್ದಾನೆ.


ನನ್ನಲ್ಲಿ ದೋಷವಿದೆಯೆಂದು ನನ್ನ ಮನಸ್ಸಿಗೆ ತೋರುವುದಿಲ್ಲವಾದರೂ ನಾನು ನಿರ್ದೋಷಿಯೆಂದು ನಿರ್ಣಯಿಸುವಂತಿಲ್ಲ. ನನ್ನನ್ನು ನ್ಯಾಯವಿಚಾರಣೆ ಮಾಡುವವನು ಕರ್ತನೇ.


ಮನುಷ್ಯನು ದೇವರ ಎಣಿಕೆಯಲ್ಲಿ ನೀತಿವಂತನಾಗಿರುವುದು ಹೇಗೆ? ಮಾನವನಾಗಿ ಹುಟ್ಟಿದವನು ಪರಿಶುದ್ಧನಾಗಿರುವುದು ಸಾಧ್ಯವೋ?


ನರನು ಎಷ್ಟರವನು! ಅವನು ಪರಿಶುದ್ಧನಾಗಿರುವುದು ಸಾಧ್ಯವೋ? ಮಾನವನಾಗಿ ಹುಟ್ಟಿದವನು ನೀತಿವಂತನಾಗಿರಬಹುದೇ?


ಹುಟ್ಟಿದಂದಿನಿಂದ ನಾನು ಪಾಪಿಯೇ; ಮಾತೃಗರ್ಭವನ್ನು ಹೊಂದಿದ ದಿನದಿಂದ ದ್ರೋಹಿಯೇ.


“ಅವರು ನಿನಗೆ ವಿರುದ್ಧವಾಗಿ ಪಾಪ ಮಾಡಬಹುದು, ಪಾಪ ಮಾಡದ ಮನುಷ್ಯನು ಒಬ್ಬನೂ ಇಲ್ಲ. ನೀನು ಅವರ ಮೇಲೆ ಕೋಪಗೊಂಡು ಅವರನ್ನು ಶತ್ರುಗಳ ಕೈಗೆ ಒಪ್ಪಿಸಿದಾಗ ಮತ್ತು ಆ ಶತ್ರುಗಳು ಅವರನ್ನು ಸೆರೆಹಿಡಿದು ದೂರದಲ್ಲಾಗಲಿ, ಸಮೀಪದಲ್ಲಾಗಲಿ, ಇರುವ ದೇಶಕ್ಕೆ ಒಯ್ದಾಗ,


ಹಾಗಾದರೆ ಏನು ಹೇಳಬೇಕು? ನಾವು ಅನ್ಯರಿಗಿಂತ ಶ್ರೇಷ್ಠರೋ? ಎಷ್ಟು ಮಾತ್ರಕ್ಕೂ ಇಲ್ಲ. ಯೆಹೂದ್ಯರೇ ಆಗಲಿ ಗ್ರೀಕರೇ ಆಗಲಿ ಎಲ್ಲರೂ ಪಾಪಕ್ಕೆ ಒಳಗಾಗಿ ಅಪರಾಧಿಗಳಾಗಿದ್ದಾರೆಂದು ಮೊದಲೇ ತೋರಿಸಿಕೊಟ್ಟಿದ್ದೇವಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು