Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 21:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ದುರಾತ್ಮನು ಕೇಡಿನ ಮೇಲೇ ಮನಸ್ಸಿಡುವನು ನೆರೆಯವನಿಗೂ ದಯೆತೋರಿಸನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ದುರಾತ್ಮನ ಮನಸ್ಸು ಕೇಡಿನ ಮೇಲೆ; ದಯೆತೋರಿಸನಾತ ನೆರೆಯವನ ಮೇಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ದುರಾತ್ಮನು ಕೇಡಿನ ಮೇಲೆ ಮನಸ್ಸಿಡುವನು; ನೆರೆಯವನಿಗೂ ದಯೆತೋರಿಸನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಕೆಡುಕರು ಕೇಡುಮಾಡುವುದಕ್ಕೇ ಇಷ್ಟಪಡುವರು; ಅವರು ತಮ್ಮ ಸುತ್ತಮುತ್ತಲಿರುವ ಜನರಿಗೆ ಕರುಣೆ ತೋರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ದುಷ್ಟರು ಕೇಡನ್ನು ಅಪೇಕ್ಷಿಸುತ್ತಾರೆ; ಅವನು ತನ್ನ ನೆರೆಯವನಿಗೂ ಯಾವ ದಯೆಯನ್ನೂ ತೋರಿಸನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 21:10
19 ತಿಳಿವುಗಳ ಹೋಲಿಕೆ  

ಲೋಕದಲ್ಲಿರುವ ಶರೀರದಾಶೆ, ಕಣ್ಣಿನಾಶೆ, ಬದುಕುಬಾಳಿನ ಗರ್ವ, ಇವು ತಂದೆಗೆ ಸಂಬಂಧಪಟ್ಟವುಗಳಲ್ಲ. ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ.


ನೆರೆಯವನಿಗೆ ಕೇಡನ್ನು ಕಲ್ಪಿಸಬಾರದು, ಅವನು ನಿನ್ನ ಪಕ್ಕದಲ್ಲಿ ನಂಬಿಕೆಯಿಂದ ವಾಸಮಾಡುತ್ತಾನಲ್ಲವೇ?


ಏಕೆಂದರೆ ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವುದಿಲ್ಲ. ಕರುಣೆಯು ನ್ಯಾಯತೀರ್ಪಿನ ಮೇಲೆ ಜಯ ಹೊಂದುತ್ತದೆ.


ಅವರು ಕೆಟ್ಟ ವಿಷಯಗಳನ್ನು ಮೋಹಿಸದಂತೆ ನಾವು ಮೋಹಿಸುವವರಾಗಬಾರದೆಂಬುದಕ್ಕಾಗಿ ಈ ಸಂಗತಿಗಳು ನಮಗೆ ನಿದರ್ಶನಗಳಾಗಿವೆ.


ಬಡವನ ಕೂಗಿಗೆ ಕಿವಿಮುಚ್ಚಿಕೊಳ್ಳುವವನು, ತಾನೇ ಮೊರೆಯಿಡುವಾಗ ಯಾರೂ ಉತ್ತರಕೊಡರು.


ಕೆಡುಕರ ಕೊಳ್ಳೆಯು ದುಷ್ಟರಿಗೆ ಇಷ್ಟ, ಆದರೆ ಶಿಷ್ಟರ ಬುಡ ಫಲದಾಯಕ.


ಬಡವರಿಗೆ ಉದಾರವಾಗಿ ಕೊಡುತ್ತಾನೆ; ಅವನ ನೀತಿಯ ಫಲವು ಸದಾಕಾಲವೂ ಇರುವುದು. ಮಹಿಮೆಯೊಡನೆ ಅವನ ಕೊಂಬು ಎತ್ತಲ್ಪಡುವುದು.


ದಯಾಳುವಾಗಿ ಧನಸಹಾಯ ಮಾಡುವವನೂ, ತನ್ನ ಕಾರ್ಯಗಳನ್ನು ನೀತಿಯಿಂದ ನಡೆಸುವವನೂ ಭಾಗ್ಯವಂತನು.


ಹಾಸಿಗೆಯ ಮೇಲೆ ಇರುವಾಗಲೂ ಕೆಡುಕನ್ನೇ ಯೋಚಿಸುತ್ತಿರುವನು; ದುಷ್ಟ ಮಾರ್ಗದಲ್ಲಿ ನಿಂತುಕೊಂಡಿದ್ದಾನೆ; ಎಂಥ ದುಷ್ಕೃತ್ಯಕ್ಕೂ ಹೇಸುವುದಿಲ್ಲ.


ಅವರು ಕೆಟ್ಟದ್ದನ್ನು ಮಾಡುವುದರಲ್ಲಿ ಸಂತೋಷಿಸಿ, ಕೆಟ್ಟವರ ದುಷ್ಟತನದಲ್ಲಿ ಆನಂದಿಸುವರು.


ನೆರೆಯವನನ್ನು ತಿರಸ್ಕರಿಸುವವನು ದೋಷಿ, ದರಿದ್ರನನ್ನು ಕನಿಕರಿಸುವವನು ಧನ್ಯನು.


ಮನೆಯಲ್ಲಿ ಜಗಳಗಂಟಿಯ ಜೊತೆಯಲ್ಲಿರುವುದಕ್ಕಿಂತಲೂ, ಮಾಳಿಗೆಯ ಒಂದು ಮೂಲೆಯಲ್ಲಿ ವಾಸಿಸುವುದೇ ಲೇಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು