Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 22:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಬಡವರು ಮತ್ತು ಸಿರಿವಂತರು ಸ್ಥಿತಿಯಲ್ಲಿ ಎದುರುಬದುರಾಗಿದ್ದಾರೆ, ಯೆಹೋವನೇ ಅವರನ್ನೆಲ್ಲಾ ಸೃಷ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಬಡವರು ಬಲ್ಲಿದರು ಸ್ಥಿತಿಯಲ್ಲಿ ಎದುರುಬದುರು; ಅವರೆಲ್ಲರನ್ನು ಸೃಷ್ಟಿಸಿದಾತ ಸರ್ವೇಶ್ವರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಬಡವರು ಬಲ್ಲಿದರು ಸ್ಥಿತಿಯಲ್ಲಿ ಎದುರುಬದುರಾಗಿದ್ದಾರೆ, ಯೆಹೋವನೇ ಅವರನ್ನೆಲ್ಲಾ ಸೃಷ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಐಶ್ವರ್ಯವಂತರಿಗೂ ಬಡವರಿಗೂ ಯಾವ ವ್ಯತ್ಯಾಸವಿಲ್ಲ. ಯಾಕೆಂದರೆ ಎಲ್ಲರನ್ನು ನಿರ್ಮಿಸಿದಾತನು ಯೆಹೋವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಧನಿಕರು, ಬಡವರು ಇದನ್ನು ಸಾಮಾನ್ಯವಾಗಿ ಹೊಂದಿರುವರು: ಇವರೆಲ್ಲರನ್ನು ಸೃಷ್ಟಿಸಿದಾತ ಯೆಹೋವ ದೇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 22:2
9 ತಿಳಿವುಗಳ ಹೋಲಿಕೆ  

ನನ್ನನ್ನು ಗರ್ಭದಲ್ಲಿ ನಿರ್ಮಿಸಿದಾತನೇ ಅವನನ್ನೂ ನಿರ್ಮಿಸಲಿಲ್ಲವೋ? ಆತನೊಬ್ಬನೇ ನಮ್ಮಿಬ್ಬರನ್ನೂ ಗರ್ಭದಲ್ಲಿ ರೂಪಿಸಿದನಲ್ಲವೇ.


ಬಡವರನ್ನು ಹಿಂಸಿಸುವವನು ಸೃಷ್ಟಿಕರ್ತನನ್ನು ಹೀನೈಸುವನು, ಗತಿಯಿಲ್ಲದವರನ್ನು ಕರುಣಿಸುವವನು ಆತನನ್ನು ಘನಪಡಿಸುವನು.


ಬಡತನ, ಸಿರಿತನಗಳನ್ನು ಕೊಡುವವನೂ ಯೆಹೋವನೇ, ತಗ್ಗಿಸುವವನೂ, ಹೆಚ್ಚಿಸುವವನೂ ಆತನೇ.


ತಗ್ಗುವವನು, ತಗ್ಗಿಸುವವನು ಸ್ಥಿತಿಯಲ್ಲಿ ಎದುರುಬದುರಾಗಿದ್ದಾರೆ, ಯೆಹೋವನೇ ಅವರಿಬ್ಬರ ಕಣ್ಣುಗಳಿಗೆ ಕಳೆಕೊಟ್ಟವನು.


ಅಧಿಪತಿಗಳಿಗೆ ಮುಖದಾಕ್ಷಿಣ್ಯವನ್ನು ತೋರಿಸದೆ, ಬಡವರು ಬಲ್ಲಿದರು ಎಂಬ ಭೇದವನ್ನು ಮಾಡದೆ ಇರುವನು; ಅವರೆಲ್ಲರೂ ಆತನ ಸೃಷ್ಟಿಯಾಗಿದ್ದಾರಷ್ಟೆ.


ಕಣ್ಣು ಕೈಗೆ, “ನೀನು ನನಗೆ ಅವಶ್ಯವಿಲ್ಲವೆಂದೂ,” ತಲೆಯು “ಪಾದಗಳಿಗೆ ನೀವು ನನಗೆ ಅವಶ್ಯವಿಲ್ಲವೆಂದೂ” ಹೇಳುವುದಕ್ಕಾಗುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು