Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 22:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಜಾಣನು ಕೇಡನ್ನು ಕಂಡು ಅಡಗಿಕೊಳ್ಳುವನು, ಬುದ್ಧಿಹೀನನು ಮುಂದೆ ಹೋಗಿ ನಷ್ಟಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಜಾಣ ಕೇಡನ್ನು ಕಂಡು ಅಡಗಿಕೊಳ್ಳುತ್ತಾನೆ; ಕೋಣ ಮುನ್ನುಗ್ಗಿ ಹಾನಿಗೆ ಈಡಾಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಜಾಣನು ಕೇಡನ್ನು ಕಂಡು ಅಡಗಿಕೊಳ್ಳುವನು; ಬುದ್ಧಿಹೀನನು ಮುಂದೆ ಹೋಗಿ ನಷ್ಟಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಜ್ಞಾನಿಗಳು ಕೇಡನ್ನು ಕಂಡು ದೂರವಾಗುತ್ತಾರೆ. ಮೂಢರಾದರೋ ನೇರವಾಗಿ ಹೋಗಿ ಆಪತ್ತಿಗೀಡಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಜಾಣನು ಕೇಡನ್ನು ಮುಂದಾಗಿ ಕಂಡು ತಾನು ಅಡಗಿಕೊಳ್ಳುತ್ತಾನೆ; ಆದರೆ ಮುಗ್ಧನು ಮುಂದೆ ಹೋಗಿ ಶಿಕ್ಷೆಯನ್ನು ಹೊಂದುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 22:3
14 ತಿಳಿವುಗಳ ಹೋಲಿಕೆ  

ಜಾಣನು ಕೇಡನ್ನು ಕಂಡು ಅಡಗಿಕೊಳ್ಳುವನು, ಬುದ್ಧಿಹೀನನು ಮುಂದೆ ಹೋಗಿ ನಷ್ಟಪಡುವನು.


ಜ್ಞಾನಿಯು ಕೇಡಿಗೆ ಭಯಪಟ್ಟು ಓರೆಯಾಗುವನು, ಜ್ಞಾನಹೀನನು ಸೊಕ್ಕಿನಿಂದ ಭಯವನ್ನು ಲಕ್ಷಿಸನು.


ಬಹಳವಾಗಿ ಗದರಿಸಿದರೂ ತಗ್ಗದವನು, ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.


ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ದೈವೋಕ್ತಿಯನ್ನು ಹೊಂದಿ, ಭಯಭಕ್ತಿಯುಳ್ಳವನಾಗಿ ತನ್ನ ಮನೆಯವರ ಸಂರಕ್ಷಣೆಗೋಸ್ಕರ ನಾವೆಯನ್ನು ಕಟ್ಟಿ ಸಿದ್ಧಮಾಡಿದನು. ನಂಬಿಕೆಯಿಂದಲೇ ಅವನು ಲೋಕದವರು ದಂಡನೆಗೆ ಪಾತ್ರರೆಂದು ನಿರ್ಣಯಿಸಿಕೊಂಡನು. ಆದುದ್ದರಿಂದ ನಂಬಿಕೆಯ ಫಲವಾದ ನೀತಿಗೆ ಬಾಧ್ಯನಾದನು.


ಅಲ್ಪಬುದ್ಧಿಯುಳ್ಳ ಅನೇಕ ಯುವಕರು ಕಾಣಿಸಿದರು. ಅವರಲ್ಲಿ ಜ್ಞಾನಹೀನನಾದ ಒಬ್ಬ ಯೌವನಸ್ಥನನ್ನು ಕಂಡೆನು.


ದೇವರ ವಾಗ್ದಾನ ಮತ್ತು ಆಣೆ ಇವೆರಡೂ ನಿಶ್ಚಲವಾದ ಆಧಾರಗಳು ಏಕೆಂದರೆ ದೇವರು ಸುಳ್ಳಾಡುವವನಲ್ಲ. ಅದುದರಿಂದ ಆಶ್ರಯವನ್ನು ಹೊಂದಬೇಕೆಂದು ಓಡಿಬಂದು, ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಂಡವರಾದ ನಮಗೆ ಬಲವಾದ ಪ್ರೋತ್ಸಾಹ ಉಂಟಾಯಿತು.


“ಮೂಢರೇ, ಮೂಢತನವನ್ನು ಎಂದಿನ ತನಕ ಪ್ರೀತಿಸುವಿರಿ? ಧರ್ಮನಿಂದಕರು ನಿಂದಿಸುವುದಕ್ಕೆ ಎಷ್ಟುಕಾಲ ಇಷ್ಟಪಡುವರು? ಜ್ಞಾನಹೀನರು ತಿಳಿವಳಿಕೆಯನ್ನು ಎಷ್ಟರವರೆಗೆ ಹಗೆಮಾಡುವರು?


ಧನ, ಮಾನ ಮತ್ತು ಜೀವಗಳು ದೀನಭಾವಕ್ಕೂ, ಯೆಹೋವನ ಭಯಕ್ಕೂ ಫಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು