Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 22:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ವಕ್ರಬುದ್ಧಿಯುಳ್ಳವನ ಮಾರ್ಗದಲ್ಲಿ ಮುಳ್ಳುಗಳೂ, ಉರುಲುಗಳೂ ತುಂಬಿವೆ, ತನ್ನನ್ನು ರಕ್ಷಿಸಿಕೊಳ್ಳುವವನು ಅವುಗಳಿಗೆ ದೂರವಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ವಕ್ರಬುದ್ಧಿಯುಳ್ಳವನ ಹಾದಿತುಂಬ ಮುಳ್ಳು, ಉರುಳು; ಅದರಿಂದ ದೂರವಿರುವನು ಪ್ರಾಣದಾಸೆಯುಳ್ಳವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ವಕ್ರಬುದ್ಧಿಯುಳ್ಳವನ ಮಾರ್ಗದಲ್ಲಿ ಮುಳ್ಳುಗಳೂ ಉರುಲುಗಳೂ ತುಂಬಿವೆ; ತನ್ನನ್ನು ರಕ್ಷಿಸಿಕೊಳ್ಳುವವನು ಅವುಗಳಿಗೆ ದೂರವಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ವಕ್ರಬುದ್ಧಿಯುಳ್ಳವರು ಅನೇಕ ಆಪತ್ತುಗಳಿಗೆ ಸಿಕ್ಕಿಕ್ಕೊಂಡಿದ್ದಾರೆ. ಆದರೆ ತನ್ನ ಆತ್ಮದ ಬಗ್ಗೆ ಚಿಂತಿಸುವವನು ಆ ಆಪತ್ತುಗಳಿಂದ ದೂರವಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ದುಷ್ಟರ ದಾರಿಯಲ್ಲಿ ಮುಳ್ಳುಗಳೂ, ಉರುಲುಗಳೂ ಇವೆ; ತನ್ನ ಜೀವವನ್ನು ಕಾಪಾಡಿಕೊಳ್ಳುವವನು ಅವುಗಳಿಂದ ದೂರವಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 22:5
15 ತಿಳಿವುಗಳ ಹೋಲಿಕೆ  

ಸೋಮಾರಿಯ ಮಾರ್ಗ ಮುಳ್ಳುಬೇಲಿ, ಯಥಾರ್ಥವಂತನ ಮಾರ್ಗ ರಾಜಮಾರ್ಗ.


ದೇವರಿಂದ ಹುಟ್ಟಿರುವವನು ಪಾಪಮಾಡುವುದಿಲ್ಲವೆಂಬುದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದವನು ತನ್ನನ್ನು ತಾನು ಕಾಪಾಡಿಕೊಳ್ಳುವನು. ಕೆಡುಕನು ಅವನನ್ನು ಮುಟ್ಟುವುದಿಲ್ಲ.


ಸತ್ಯವಂತನ ರಾಜಮಾರ್ಗ ಹಾನಿಗೆ ದೂರ, ತನ್ನ ನಡತೆಯನ್ನು ಗಮನಿಸುವವನು ತನ್ನ ಆತ್ಮವನ್ನು ಕಾಯುವನು.


ಆಜ್ಞೆಯನ್ನು ಪಾಲಿಸುವವನು ಆತ್ಮವನ್ನು ಪಾಲಿಸುವನು, ನಡತೆಯನ್ನು ಲಕ್ಷಿಸದವನು ಸಾಯುವನು.


ಸುಬುದ್ಧಿಯು ದಯಾಸ್ಪದವು, ದ್ರೋಹಿಯ ಮಾರ್ಗವು ನಾಶಕರ.


ತನ್ನ ಹೆಜ್ಜೆಗಳಿಂದಲೇ ಬಲೆಗೆ ಬೀಳುವನು, ಹಾಳು ಗುಂಡಿಯ ಮೇಲೆ ನಡೆಯುವನು.


ಬಾಯನ್ನು ಕಾಯುವವನು ಜೀವವನ್ನು ಕಾಯುತ್ತಾನೆ, ತುಟಿಗಳನ್ನು ತೆರೆದುಬಿಡುವವನು ನಾಶವಾಗುವನು.


ಅತ್ಯುನ್ನತನಾದ ದೇವರ ಮೊರೆಹೊಕ್ಕವನು, ಸರ್ವಶಕ್ತನ ಆಶ್ರಯದಲ್ಲಿ ಸುರಕ್ಷಿತನಾಗಿರುವನು.


ಆತನು ದುಷ್ಟರ ಮೇಲೆ ಬೆಂಕಿ ಗಂಧಕಗಳನ್ನು ಸುರಿಸಲಿ. ಉರಿಗಾಳಿಗಳನ್ನು ಅವರಿಗೆ ಪಾನವಾಗಮಾಡಲಿ.


ನಿಮ್ಮ ದೇವರಾದ ಯೆಹೋವನು ಅವರನ್ನು ನಿಮ್ಮ ಎದುರಿನಿಂದ ಹೊರಡಿಸುವುದೇ ಇಲ್ಲವೆಂದು ತಿಳಿದುಕೊಳ್ಳಿರಿ. ಅವರೇ ನಿಮಗೆ ಉರುಲೂ ಬೋನೂ ಆಗಿರುವರು. ಅವರು ಪಕ್ಕೆಗೆ ಹೊಡೆಯುವ ಕೊರಡೆಯಂತೆಯೂ ಕಣ್ಣಿಗೆ ಚುಚ್ಚುವ ಮುಳ್ಳಿನಂತೆಯೂ ಇರುವರು. ಕಡೆಯಲ್ಲಿ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟ ಈ ಉತ್ತಮ ದೇಶದಲ್ಲಿ ನೀವು ಇಲ್ಲದಂತಾಗುವಿರಿ.


ಧನ, ಮಾನ ಮತ್ತು ಜೀವಗಳು ದೀನಭಾವಕ್ಕೂ, ಯೆಹೋವನ ಭಯಕ್ಕೂ ಫಲ.


ಕೆಟ್ಟವನ ದುರ್ಮಾರ್ಗದಲ್ಲಿ ಉರುಲುಂಟು, ಒಳ್ಳೆಯವನು ಉಲ್ಲಾಸಗೊಂಡು ಹರ್ಷಧ್ವನಿಗೈಯುವನು.


ದುಷ್ಟರ ಮಾರ್ಗವೋ ಕತ್ತಲಿನಂತಿದೆ; ತಾವು ಯಾವುದಕ್ಕೆ ಎಡವಿಬಿದ್ದೆವೆಂದು ಅವರಿಗೆ ಗೊತ್ತಾಗದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು