Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 23:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಪಾಪಿಗಳನ್ನು ನೋಡಿ ಹೊಟ್ಟೆಕಿಚ್ಚುಪಡಬೇಡ, ಯೆಹೋವನಲ್ಲಿ ನಿರಂತರವಾಗಿ ಭಯಭಕ್ತಿಯುಳ್ಳವನಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಪಾಪಿಗಳನ್ನು ನೋಡಿ ಅಸೂಯೆಪಡಬೇಡ; ಸರ್ವೇಶ್ವರನಲ್ಲಿರಲಿ ನಿರಂತರ ಭಯಭಕ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಪಾಪಿಗಳನ್ನು ನೋಡಿ ಹೊಟ್ಟೆಕಿಚ್ಚುಪಡಬೇಡ; ಯೆಹೋವನಲ್ಲಿ ದಿನವೆಲ್ಲಾ ಭಯಭಕ್ತಿಯುಳ್ಳವನಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಕೆಡುಕರ ಬಗ್ಗೆ ಹೊಟ್ಟೆಕಿಚ್ಚುಪಡಬೇಡ. ಆದರೆ ಯೆಹೋವನಲ್ಲಿ ಭಯಭಕ್ತಿಯಿಂದಿರಲು ನಿನ್ನಿಂದಾದಷ್ಟು ಪ್ರಯತ್ನಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಪಾಪಿಗಳನ್ನು ನೋಡಿ ನಿನ್ನ ಹೃದಯವು ಅಸೂಯೆಪಡದಿರಲಿ; ಆದರೆ ಯೆಹೋವ ದೇವರ ಭಯದಲ್ಲಿರಲು ಯಾವಾಗಲೂ ಆಸಕ್ತನಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 23:17
15 ತಿಳಿವುಗಳ ಹೋಲಿಕೆ  

ಕೆಟ್ಟದನ್ನು ಮಾಡುವುದಕ್ಕೆ ಯಾವಾಗಲೂ ಭಯಪಡುವವನು ಧನ್ಯನು, ಕಠಿಣಹೃದಯನು ಕೇಡಿಗೆ ಸಿಕ್ಕಿಬೀಳುವನು.


ಪ್ರತಿಯೊಬ್ಬನ ನಡತೆಯನ್ನು ನೋಡಿ ಪಕ್ಷಪಾತವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆಯೆಂದು ಕರೆಯುವವರಾಗಿರುವುದರಿಂದ ಈ ಲೋಕದಲ್ಲಿನ ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯಿಂದ ಕಳೆಯಿರಿ.


ಪ್ರಿಯರೇ, ಈ ವಾಗ್ದಾನಗಳು ನಮಗಿರುವುದರಿಂದ, ನಾವು ದೇಹಾತ್ಮಗಳ ಕಲ್ಮಷವನ್ನು ತೊಲಗಿಸಿ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಿಂದ ಕೂಡಿದವರಾಗಿ ಪವಿತ್ರತೆಯ ಸಂಪೂರ್ಣತೆಗೆ ಪ್ರಯತ್ನಿಸೋಣ.


ಕಳವಳದಿಂದ ಕೂಡಿದ ಬಹುಧನಕ್ಕಿಂತಲೂ ಯೆಹೋವನ ಭಯದಿಂದ ಕೂಡಿದ ಅಲ್ಪ ಧನವೇ ಲೇಸು.


ಹೀಗಿರಲಾಗಿ ಯೂದಾಯ, ಗಲಿಲಾಯ, ಸಮಾರ್ಯ ಸೀಮೆಗಳಲ್ಲಿದ್ದ ಸಭೆಯು ಸಮಾಧಾನ ಹೊಂದಿತು; ಮತ್ತು ಭಕ್ತಿಯಲ್ಲಿ ಬೆಳೆದು ಕರ್ತನ ಭಯದಲ್ಲಿ ನಡೆದು, ಪವಿತ್ರಾತ್ಮನಿಂದ ಪ್ರೋತ್ಸಾಹವನ್ನು ಹೊಂದಿ ಬೆಳೆಯುತ್ತಾ ಬಂದಿತು.


ಬಹಳ ಕನಸುಗಳಿಂದಲೂ, ವ್ಯರ್ಥ ವಿಷಯಗಳಿಂದಲೂ, ಹೆಚ್ಚು ಮಾತುಗಳಿಂದಲೂ ವ್ಯರ್ಥವೇ. ನೀನಂತೂ ದೇವರಲ್ಲಿ ಭಯಭಕ್ತಿಯುಳ್ಳವನಾಗಿರು.


ಬಲಾತ್ಕಾರಿಯನ್ನು ನೋಡಿ ಹೊಟ್ಟೆಕಿಚ್ಚುಪಡದಿರು, ಅವನ ನಡತೆಯನ್ನು ಎಷ್ಟು ಮಾತ್ರಕ್ಕೂ ಅನುಸರಿಸಬೇಡ.


ಯೆಹೋವನ ಭಯವೇ ಜ್ಞಾನಕ್ಕೆ ಮೂಲ; ಆತನ ಕಟ್ಟಳೆಗಳನ್ನು ಕೈಕೊಳ್ಳುವವರು ಪೂರ್ಣ ವಿವೇಕಿಗಳು. ಆತನ ಸ್ತುತಿಯು ನಿರಂತರವಾದದ್ದು.


ಕೆಟ್ಟವರನ್ನು ನೋಡಿ ಹೊಟ್ಟೆಕಿಚ್ಚುಪಡಬೇಡ, ಅವರ ಸಹವಾಸವನ್ನು ಬಯಸಬೇಡ.


ಕೆಡುಕರ ಮೇಲೆ ಉರಿಗೊಳ್ಳದಿರು, ದುಷ್ಟರನ್ನು ನೋಡಿ ಹೊಟ್ಟೆಕಿಚ್ಚುಪಡದಿರು.


ಮಗನೇ, ಯೆಹೋವನಿಗೂ ಮತ್ತು ರಾಜನಿಗೂ ಭಯಪಡು, ತಿರುಗಿಬೀಳುವವರ ಗೊಡವೆಗೆ ಹೋಗಬೇಡ.


ನಿನ್ನ ಬಾಯಿ ನಿನ್ನನ್ನು ಪಾಪಕ್ಕೆ ಗುರಿಮಾಡದಂತೆ ನೋಡಿಕೋ. “ಇದು ಅಜಾಗ್ರತೆಯಿಂದ ಆಯಿತು” ಎಂದು ದೂತನ ಮುಂದೆ ಹೇಳಬೇಡ. ದೇವರು ನಿನ್ನ ಮಾತಿಗೆ ರೋಷಗೊಂಡು ನಿನ್ನ ಕೈಕೆಲಸವನ್ನು ಏಕೆ ಹಾಳುಮಾಡಬೇಕು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು