Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 24:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಕೆಟ್ಟವರನ್ನು ನೋಡಿ ಹೊಟ್ಟೆಕಿಚ್ಚುಪಡಬೇಡ, ಅವರ ಸಹವಾಸವನ್ನು ಬಯಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಕೆಟ್ಟವರನ್ನು ನೋಡಿ ಹೊಟ್ಟೆಕಿಚ್ಚುಪಡಬೇಡ. ಅವರ ಒಡನಾಟವನ್ನು ಬಯಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಕೆಟ್ಟವರನ್ನು ನೋಡಿ ಹೊಟ್ಟೆಕಿಚ್ಚುಪಡಬೇಡ, ಅವರ ಸಹವಾಸವನ್ನು ಬಯಸದಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಕೆಡುಕರ ವಿಷಯದಲ್ಲಿ ಹೊಟ್ಟೆಕಿಚ್ಚುಪಡಬೇಡ; ಅವರೊಂದಿಗಿರಲು ಅಪೇಕ್ಷಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಕೆಟ್ಟವರಿಗೆ ವಿರೋಧವಾಗಿ ನೀನು ಅಸೂಯೆ ಪಡದಿರು; ಇಲ್ಲವೆ ಅವರ ಸಂಗಡ ಇರುವುದಕ್ಕೆ ಅಪೇಕ್ಷಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 24:1
16 ತಿಳಿವುಗಳ ಹೋಲಿಕೆ  

ಯೆಹೋವನ ಸನ್ನಿಧಿಯಲ್ಲಿ ಶಾಂತನಾಗಿ ಆತನಿಗೋಸ್ಕರ ಕಾದಿರು; ಕುಯುಕ್ತಿಗಳನ್ನು ನೆರವೇರಿಸಿಕೊಂಡು ಅಭಿವೃದ್ಧಿ ಹೊಂದುವವನನ್ನು ನೋಡಿ ಉರಿಗೊಳ್ಳಬೇಡ.


ಬಲಾತ್ಕಾರಿಯನ್ನು ನೋಡಿ ಹೊಟ್ಟೆಕಿಚ್ಚುಪಡದಿರು, ಅವನ ನಡತೆಯನ್ನು ಎಷ್ಟು ಮಾತ್ರಕ್ಕೂ ಅನುಸರಿಸಬೇಡ.


ಪಾಪಿಗಳನ್ನು ನೋಡಿ ಹೊಟ್ಟೆಕಿಚ್ಚುಪಡಬೇಡ, ಯೆಹೋವನಲ್ಲಿ ನಿರಂತರವಾಗಿ ಭಯಭಕ್ತಿಯುಳ್ಳವನಾಗಿರು.


ಜ್ಞಾನಿಗಳ ಸಹವಾಸಿ ಜ್ಞಾನಿಯಾಗುವನು, ಜ್ಞಾನಹೀನರ ಒಡನಾಡಿ ಸಂಕಟಪಡುವನು.


ಆದರೆ ನಾನು ದುಷ್ಟರ ಸೌಭಾಗ್ಯವನ್ನು ಕಂಡು ಸೊಕ್ಕಿನವರ ಮೇಲೆ ಉರಿಗೊಂಡೆನು.


ಕೆಟ್ಟ ನಡತೆಯುಳ್ಳವರನ್ನು ನೋಡಿ ತಳಮಳಗೊಳ್ಳಬೇಡ; ದುರಾಚಾರಿಗಳನ್ನು ನೋಡಿ ಅಸೂಯೆಪಡಬೇಡ.


ಕೆಡುಕರ ಮೇಲೆ ಉರಿಗೊಳ್ಳದಿರು, ದುಷ್ಟರನ್ನು ನೋಡಿ ಹೊಟ್ಟೆಕಿಚ್ಚುಪಡದಿರು.


ಪಾಪಿಷ್ಠರ ಪ್ರಾಣದ ಸಂಗಡ ನನ್ನ ಪ್ರಾಣವನ್ನೂ ತೆಗೆಯಬೇಡ; ಕೊಲೆಪಾತಕರ ಜೀವದೊಂದಿಗೆ ನನ್ನ ಜೀವವನ್ನೂ ತೆಗೆಯಬೇಡ.


ಯಾರು ದುಷ್ಟರ ಆಲೋಚನೆಯಂತೆ ನಡೆಯದೆ, ಪಾಪಾತ್ಮರ ಮಾರ್ಗದಲ್ಲಿ ನಿಂತುಕೊಳ್ಳದೆ, ಧರ್ಮನಿಂದಕರೊಡನೆ ಕುಳಿತುಕೊಳ್ಳದೆ,


ದುಷ್ಟರ ಮಾರ್ಗದಲ್ಲಿ ಸೇರಬೇಡ, ಕೆಟ್ಟವರ ದಾರಿಯಲ್ಲಿ ನಡೆಯಬೇಡ.


ಅದಕ್ಕೆ ದೂರವಾಗಿರು, ಅದರಲ್ಲಿ ನಡೆಯಬೇಡ, ಅದರಿಂದ ಹಿಂತಿರುಗಿ ಮುಂದೆ ನಡೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು