Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 24:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಇವು ಕೂಡ ಜ್ಞಾನಿಗಳ ಮಾತುಗಳು: ನ್ಯಾಯವಿಚಾರಣೆಯಲ್ಲಿ ಪಕ್ಷಪಾತವು ಧರ್ಮವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಜ್ಞಾನಿಗಳ ಬೇರೆ ಕೆಲವು ಹೇಳಿಕೆಗಳು ಇವು: ನ್ಯಾಯವಿಚಾರಣೆಯಲ್ಲಿ ಪಕ್ಷಪಾತ ಸರಿಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಇವು ಕೂಡ ಜ್ಞಾನಿಗಳ ಉಕ್ತಿಗಳೇ: - ನ್ಯಾಯವಿಚಾರಣೆಯಲ್ಲಿ ಪಕ್ಷಪಾತವು ಧರ್ಮವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಇವು ಸಹ ಜ್ಞಾನಿಗಳ ಮಾತುಗಳು: ನ್ಯಾಯಾಧಿಪತಿ ನ್ಯಾಯವಂತನಾಗಿರಬೇಕು. ಅವನು ಕೇವಲ ಪರಿಚಯದ ನಿಮಿತ್ತ ಯಾರಿಗೂ ಸಹಾಯ ಮಾಡಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಇವು ಜ್ಞಾನಿಗಳ ಹೇಳಿಕೆಗಳಾಗಿವೆ: ನ್ಯಾಯ ವಿಚಾರಣೆಯಲ್ಲಿ ಪಕ್ಷಪಾತವು ಸರಿಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 24:23
18 ತಿಳಿವುಗಳ ಹೋಲಿಕೆ  

ಪಕ್ಷಪಾತವು ಅಧರ್ಮ, ತುತ್ತು ಅನ್ನಕ್ಕಾಗಿಯೂ ಜನರು ದ್ರೋಹಮಾಡುವುದುಂಟು.


ದುಷ್ಟನಿಗೆ ಪ್ರಸನ್ನನಾಗಿ ಶಿಷ್ಟನಿಗೆ ನ್ಯಾಯತಪ್ಪಿಸುವುದು ಅಧರ್ಮ.


ಜ್ಞಾನಿಗಳು ಈ ಸಂಗತಿಗಳನ್ನು ಗಮನಿಸಿ, ಯೆಹೋವನ ಕೃಪಾಕಾರ್ಯಗಳನ್ನು ಗ್ರಹಿಸಿಕೊಳ್ಳಲಿ.


“‘ವ್ಯಾಜ್ಯವನ್ನು ವಿಚಾರಿಸುವಾಗ ಅನ್ಯಾಯವಾದ ತೀರ್ಪನ್ನು ಮಾಡಬಾರದು. ಬಡವನ ಬಡತನವನ್ನಾಗಲಿ ಅಥವಾ ದೊಡ್ಡ ಮನುಷ್ಯನ ಘನತೆಯನ್ನಾಗಲಿ ಲಕ್ಷ್ಯಮಾಡದೆ, ಪಕ್ಷಪಾತವಿಲ್ಲದೆ ತೀರ್ಪನ್ನು ಕೊಡಬೇಕು.


ಪ್ರತಿಯೊಬ್ಬನ ನಡತೆಯನ್ನು ನೋಡಿ ಪಕ್ಷಪಾತವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆಯೆಂದು ಕರೆಯುವವರಾಗಿರುವುದರಿಂದ ಈ ಲೋಕದಲ್ಲಿನ ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯಿಂದ ಕಳೆಯಿರಿ.


ಆದರೆ ಮೇಲಿಂದ ಬರುವ ಜ್ಞಾನವು ಮೊದಲು ಪರಿಶುದ್ಧವಾದದ್ದು ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸಂತೋಷವಾಗಿ ಒಪ್ಪಿಕೊಳ್ಳುವಂಥದ್ದು, ಕರುಣೆ ಮತ್ತು ಒಳ್ಳೆ ಫಲಗಳಿಂದ ತುಂಬಿರುವಂಥದ್ದು, ಪಕ್ಷಪಾತವಿಲ್ಲದ್ದು, ಪ್ರಾಮಾಣಿಕವಾದ್ದದು ಆಗಿದೆ.


ತೋರಿಕೆಗೆ ಅನುಸಾರವಾಗಿ ತೀರ್ಪುಮಾಡಬೇಡಿರಿ. ನ್ಯಾಯಬದ್ಧವಾಗಿ ತೀರ್ಪುನ್ನು ಮಾಡಿರಿ” ಎಂದನು.


ಜ್ಞಾನಿಗಳು ಈ ಸಂಗತಿಗಳನ್ನು ಗ್ರಹಿಸುವರು; ವಿವೇಕಿಗಳು ಅವುಗಳನ್ನು ತಿಳಿದುಕೊಳ್ಳುವರು. ಯೆಹೋವನ ಮಾರ್ಗಗಳು ಸತ್ಯವಾದವುಗಳು; ಅವುಗಳಲ್ಲಿ ಸನ್ಮಾರ್ಗಿಗಳು ನಡೆಯುವರು, ದುರ್ಮಾರ್ಗಿಗಳು ಅವುಗಳನ್ನು ಬಿಟ್ಟು ಎಡವಿ ಬೀಳುವರು.


ಇವು ಗಾದೆ, ಸಾಮ್ಯ, ಜ್ಞಾನಿಗಳ ನುಡಿ ಮತ್ತು ಒಗಟುಗಳನ್ನು ತಿಳಿಯಲು ಸಾಧನವಾಗಿವೆ.


ಹೀಗಿರುವಲ್ಲಿ, ನಿಮಗೆ ಯೆಹೋವನ ಭಯವಿರಲಿ. ನಿಮ್ಮ ದೇವರಾದ ಯೆಹೋವನಲ್ಲಿ ಅನ್ಯಾಯವೂ, ಮುಖದಾಕ್ಷಿಣ್ಯವೂ ಇಲ್ಲದಿರುವುದರಿಂದ ಜಾಗರೂಕತೆಯಿಂದ ಕಾರ್ಯನಿರ್ವಹಿಸಿರಿ” ಎಂದು ಎಚ್ಚರಿಸಿದನು.


ನೀವು ನ್ಯಾಯವನ್ನು ಬಿಟ್ಟು ತೀರ್ಮಾನ ಮಾಡಬಾರದು, ಪಕ್ಷಪಾತಮಾಡಬಾರದು, ಲಂಚತೆಗೆದುಕೊಳ್ಳಬಾರದು. ಲಂಚವು ಬುದ್ಧಿವಂತರನ್ನೂ ಕುರುಡರಂತೆ ಮಾಡುತ್ತದೆ; ನಿರಪರಾಧಿಗಳ ನ್ಯಾಯವನ್ನು ಕೆಡಿಸುತ್ತದೆ.


ನ್ಯಾಯವಿಚಾರಣೆ ಮಾಡುವಾಗ ಮುಖದಾಕ್ಷಿಣ್ಯಮಾಡದೆ, ಪ್ರಮುಖರನ್ನೂ ಹಾಗು ಅಲ್ಪರನ್ನೂ ಸಮಾನವಾಗಿ ಕಾಣಬೇಕು. ನೀವು ದೇವರ ಹೆಸರಿನಲ್ಲಿ ನ್ಯಾಯತೀರಿಸುವವರಾದ ಕಾರಣ ಮನುಷ್ಯರ ಮುಖವನ್ನು ನೋಡಿ ಹೆದರಬೇಡಿರಿ. ನೀವು ತೀರಿಸಲಿಕ್ಕೆ ಆಗದ ವ್ಯಾಜ್ಯಗಳನ್ನು ನನ್ನ ಬಳಿಗೆ ತರಬೇಕು; ನಾನೇ ಅವುಗಳನ್ನು ತೀರಿಸುವೆನು” ಎಂದು ಹೇಳಿದೆನು.


ಕಿವಿಗೊಟ್ಟು ಜ್ಞಾನಿಗಳ ಮಾತುಗಳನ್ನು ಕೇಳು, ನನ್ನ ಜ್ಞಾನಬೋಧೆಗೆ ಮನಸ್ಸು ಕೊಡು.


ಆತನಿಗೆ ಮುಖದಾಕ್ಷಿಣ್ಯವನ್ನು ತೋರಿಸುವಿರಾ? ದೇವರಿಗಾಗಿ ವಾದಿಸುವಿರಾ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು