Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 25:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇವು ಕೂಡ ಸೊಲೊಮೋನನ ಜ್ಞಾನೋಕ್ತಿಗಳು, ಯೆಹೂದದ ಅರಸನಾದ ಹಿಜ್ಕೀಯನ ಲೇಖಕರು ಇವುಗಳನ್ನು ಸಂಗ್ರಹಿಸಿ ಬರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇವು ಕೂಡ ಸೊಲೊಮೋನನ ಜ್ಞಾನೋಕ್ತಿಗಳು. ಜುದೇಯದ ಅರಸ ಹಿಜ್ಕೀಯನ ಲೇಖಕರು ಸಂಗ್ರಹಿಸಿದ ನುಡಿಗಳು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇವು ಕೂಡ ಸೊಲೊಮೋನನ ಜ್ಞಾನೋಕ್ತಿಗಳು; ಯೆಹೂದದ ಅರಸನಾದ ಹಿಜ್ಕೀಯನ ಲೇಖಕರು ಇವುಗಳನ್ನು ಸಂಗ್ರಹಿಸಿ ಬರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಇವು ಸಹ ಸೊಲೊಮೋನನು ಹೇಳಿದ ಜ್ಞಾನೋಕ್ತಿಗಳು. ಈ ನುಡಿಗಳನ್ನು ಯೆಹೂದದ ರಾಜನಾಗಿದ್ದ ಹಿಜ್ಕೀಯನ ಸೇವಕರು ನಕಲು ಮಾಡಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೂದದ ಅರಸನಾದ ಹಿಜ್ಕೀಯನ ಲೇಖಕರು ಬರೆದಿರುವ ಇವು ಕೂಡ ಸೊಲೊಮೋನನ ಜ್ಞಾನೋಕ್ತಿಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 25:1
10 ತಿಳಿವುಗಳ ಹೋಲಿಕೆ  

ಇಸ್ರಾಯೇಲರ ಅರಸನಾಗಿದ್ದ ದಾವೀದನ ಮಗನಾದ ಸೊಲೊಮೋನನ ಜ್ಞಾನೋಕ್ತಿಗಳು.


ಅವನ ಜ್ಞಾನೋಕ್ತಿಗಳು ಮೂರು ಸಾವಿರ ಮತ್ತು ಗೀತೆಗಳು ಸಾವಿರದ ಐದು.


ಯೆಹೂದದ ಅರಸನಾದ ಯೋಥಾಮ, ಆಹಾಜ ಮತ್ತು ಹಿಜ್ಕೀಯ ಇವರ ಕಾಲದಲ್ಲಿ ಸಮಾರ್ಯದ ಮತ್ತು ಯೆರೂಸಲೇಮಿನ ವಿಷಯವಾಗಿ ಮೋರೆಷೆತ್ ಊರಿನವನಾದ ಮೀಕನಿಗೆ ಕೇಳಿ ಬಂದ ಯೆಹೋವನ ವಾಕ್ಯ.


ಯೆಹೂದದ ಅರಸರಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ, ಇವರ ಕಾಲದಲ್ಲಿ, ಅಂದರೆ ಇಸ್ರಾಯೇಲಿನ ಅರಸನೂ ಯೋವಾಷನ ಮಗನೂ ಆದ ಯಾರೊಬ್ಬಾಮನ ಕಾಲದಲ್ಲಿ ಬೆಯೇರಿಯ ಮಗನಾದ ಹೋಶೇಯನಿಗೆ ಯೆಹೋವನು ತನ್ನ ವಾಕ್ಯವನ್ನು ದಯಪಾಲಿಸಿದನು.


ಇದಲ್ಲದೆ ಅವನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಹಿರಿಯರಾದ ಯಾಜಕರು ಇವರನ್ನು ಕರೆಯಿಸಿ, “ನೀವು ಗೋಣಿತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನೂ, ಪ್ರವಾದಿಯೂ ಆಗಿರುವ ಯೆಶಾಯನ ಬಳಿಗೆ ಹೋಗಿ ಹೀಗೆ ಹೇಳಿರಿ” ಎಂದು ಆಜ್ಞಾಪಿಸಿದನು.


ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಆಗಿದ್ದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬುವವರು ತಮ್ಮ ಬಟ್ಟೆಗಳನ್ನು ಹರಿದುಕೊಂಡು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ ರಬ್ಷಾಕೆಯ ಮಾತುಗಳನ್ನು ತಿಳಿಸಿದರು.


ಯೆಹೂದ ದೇಶದ ಅರಸರಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಯೆಹೂದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಆದ ದೈವದರ್ಶನ.


ಪ್ರಸಂಗಿಯು ಜ್ಞಾನಿಯಾಗಿದ್ದು, ಜನರಿಗೆ ತಿಳಿವಳಿಕೆಯನ್ನು ಬೋಧಿಸುತ್ತಾ ಬಂದನು, ಅನೇಕಾನೇಕ ಜ್ಞಾನೋಕ್ತಿಗಳನ್ನು ಧ್ಯಾನಿಸಿ, ಪರೀಕ್ಷಿಸಿ ಕ್ರಮಪಡಿಸಿದನು.


ಜ್ಞಾನಿಯಾದ ಮಗನಿಂದ ತಂದೆಗೆ ಆನಂದ, ಅಜ್ಞಾನಿಯಾದ ಮಗನಿಂದ ತಾಯಿಗೆ ದುಃಖ.


ಬಡತನವು ದಾರಿಗಳ್ಳನ ಹಾಗೂ, ಕೊರತೆಯು ಪಂಜುಗಳ್ಳನಂತೆಯೂ ನಿನ್ನ ಮೇಲೆ ಬೀಳುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು