Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 25:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಮನಗುಂದಿದವನಿಗೆ ಸಂಗೀತಹಾಡುವುದು ಚಳಿದಿನದಲ್ಲಿ ಬಟ್ಟೆ ತೆಗೆದಂತೆ, ಗಾಯಕ್ಕೆ ಹುಳಿಹೊಯ್ದಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಮನಗುಂದಿದವನಿಗೆ ಸಂಗೀತ ಹಾಡುವುದೆಂದರೆ ಚಳಿಯಲ್ಲಿ ಬಟ್ಟೆ ಬಿಚ್ಚಿದ ಹಾಗೆ, ಉರಿಗಾಯಕ್ಕೆ ಉಪ್ಪು ಹಚ್ಚಿದಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಮನಗುಂದಿದವನಿಗೆ ಸಂಗೀತಹಾಡುವದು ಚಳಿದಿನದಲ್ಲಿ ಬಟ್ಟೆ ತೆಗೆದ ಹಾಗೂ ಸೋಡ ಉಪ್ಪಿಗೆ ಹುಳಿಹೊಯ್ದ ಹಾಗೂ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ವ್ಯಸನದಿಂದಿರುವವನಿಗೆ ಸಂತಸದ ಗೀತೆಗಳನ್ನು ಹಾಡಿದರೆ ಚಳಿಯಲ್ಲಿರುವವನ ಬಟ್ಟೆಯನ್ನು ತೆಗೆದುಹಾಕಿದಂತೆಯೂ ಗಾಯದ ಮೇಲೆ ಹುಳಿರಸವನ್ನು ಸುರಿದಂತೆಯೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಮನಗುಂದಿದವನಿಗೆ ಸಂಗೀತ ಹಾಡುವುದು ಚಳಿಯಲ್ಲಿ ಬಟ್ಟೆ ಬಿಚ್ಚಿದ ಹಾಗೆಯೂ ಹುಳಿ ಉಪ್ಪನ್ನು ಗಾಯಕ್ಕೆ ಹಚ್ಚಿದಂತೆಯೂ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 25:20
12 ತಿಳಿವುಗಳ ಹೋಲಿಕೆ  

ಸಂತೋಷಪಡುವವರ ಸಂಗಡ ಸಂತೋಷಪಡಿರಿ, ಅಳುವವರ ಸಂಗಡ ಅಳಿರಿ.


ಅಳುವ ಸಮಯ, ನಗುವ ಸಮಯ, ಗೋಳಾಡುವ ಸಮಯ, ಕುಣಿದಾಡುವ ಸಮಯ,


ಹಸಿದವರಿಗೆ ಅನ್ನವನ್ನು ಹಂಚುವುದು, ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬೆತ್ತಲೆಯವರನ್ನು ಕಂಡಾಗೆಲ್ಲಾ ಅವರಿಗೆ ಹೊದಿಸುವುದು, ನಿನ್ನಂತೆ ಮನುಷ್ಯನಾಗಿರುವ ಯಾರಿಗೇ ಆಗಲಿ ಮುಖತಪ್ಪಿಸಿಕೊಳ್ಳದಿರುವುದು, ಇವುಗಳೇ ನನಗೆ ಇಷ್ಟವಾದ ಉಪವಾಸ ವ್ರತವಲ್ಲವೇ.


ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ರೋಗಿಯನ್ನು ಗುಣಪಡಿಸುವುದು ಮತ್ತು ಕರ್ತನು ಅವನನ್ನು ಎಬ್ಬಿಸುವನು; ಅವನು ಪಾಪ ಮಾಡಿದವನಾಗಿದ್ದರೆ, ದೇವರು ಆ ಪಾಪಗಳನ್ನು ಕ್ಷಮಿಸುವನು.


ರಾಜನು ಅರಮನೆಯಲ್ಲಿ ವಿನೋದವಾದ್ಯಗಳನ್ನು ತನ್ನ ಮುಂದೆ ತರಿಸದೆ, ಉಪವಾಸವಾಗಿ ರಾತ್ರಿಯನ್ನು ಕಳೆದನು; ಅವನಿಗೆ ನಿದ್ರೆ ಬರಲಿಲ್ಲ.


ಹಲ್ಲುಗಳಿಗೆ ಹುಳಿಯೂ, ಕಣ್ಣುಗಳಿಗೆ ಹೊಗೆಯೂ ಹೇಗೋ, ಯಜಮಾನನಿಗೆ ಸೋಮಾರಿಯು ಹಾಗೆ.


ಕಷ್ಟಕಾಲದಲ್ಲಿ ದ್ರೋಹಿಯಲ್ಲಿಡುವ ನಂಬಿಕೆಯು, ಮುರುಕಹಲ್ಲು ಮತ್ತು ಜಾರುವ ಕಾಲು.


ನಿನ್ನ ವೈರಿ ಹಸಿದಿದ್ದರೆ ಅನ್ನವಿಡು, ಬಾಯಾರಿದ್ದರೆ ನೀರುಕೊಡು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು