Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 25:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನೀನು ಪ್ರಭುವನ್ನು ದರ್ಶನಮಾಡುತ್ತಿರಲು ಅವನ ಸಮಕ್ಷಮದಲ್ಲಿ ಕೆಳಗಣಸ್ಥಾನಕ್ಕೆ ನೂಕಿಸಿಕೊಳ್ಳುವುದಕ್ಕಿಂತಲೂ, “ಇನ್ನೂ ಮೇಲಕ್ಕೆ ಬಾ” ಎಂದು ಕರೆಯಿಸಿಕೊಳ್ಳುವುದು ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಘನವಂತರ ಮುಂದೆ ಕೆಳಗಣ ಸ್ಥಾನಕ್ಕೆ ನೂಕಿಸಿಕೊಳ್ಳುವುದಕ್ಕಿಂತ “ಇನ್ನೂ ಮೇಲಕ್ಕೆ ಬಾ” ಎಂದು ಕರೆಸಿಕೊಳ್ಳುವುದು ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನೀನು ಪ್ರಭುವನ್ನು ದರ್ಶನಮಾಡುತ್ತಿರಲು ಅವನ ಸಮಕ್ಷಮ ಕೆಳಗಣಸ್ಥಾನಕ್ಕೆ ನೂಕಿಸಿಕೊಳ್ಳುವದಕ್ಕಿಂತಲೂ ಇನ್ನೂ ಮೇಲಕ್ಕೆ ಬಾ ಎಂದು ಕರೆಯಿಸಿಕೊಳ್ಳುವದು ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಗಣ್ಯರ ಮುಂದೆ ಅವಮಾನಿತನಾಗುವುದಕ್ಕಿಂತ, “ಮೇಲಕ್ಕೆ ಬಾ” ಎಂದು ಹೇಳಿಸಿಕೊಳ್ಳುವುದೇ ಉತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಘನವಂತರ ಸನ್ನಿಧಿಯಲ್ಲಿ ನಿನ್ನನ್ನು ತಗ್ಗಿಸಿಕೊಳ್ಳುವುದಕ್ಕಿಂತ, “ಮೇಲಕ್ಕೆ ಬಾ,” ಎಂದು ಅರಸನು ನಿನಗೆ ಹೇಳುವುದು ಲೇಸು. ನೀವು ಏನನ್ನೋ ಕಂಡಿದ್ದರಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 25:7
6 ತಿಳಿವುಗಳ ಹೋಲಿಕೆ  

ಇವನು ನೀತಿವಂತನೆಂದು ನಿರ್ಣಯಿಸಲ್ಪಟ್ಟವನಾಗಿ ತನ್ನ ಮನೆಗೆ ಹೋದನು. ಆ ಫರಿಸಾಯನು ಅಂಥವನಾಗಿ ಹೋಗಲಿಲ್ಲ ಎಂದು ನಿಮಗೆ ಹೇಳುತ್ತೇನೆ. ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು” ಅಂದನು.


ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆ ಮಾಡಿರಿ. ಏಕೆಂದರೆ “ದೇವರು ಅಹಂಕಾರಿಗಳನ್ನು ವಿರೋಧಿಸುತ್ತಾನೆ. ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.”


ಆನಂತರ ನಾನು ನೋಡಿದಾಗ, ಪರಲೋಕದಲ್ಲಿ ತೆರೆದಿರುವ ಒಂದು ಬಾಗಿಲು ಕಾಣಿಸಿತು. ಮೊದಲು ನನ್ನೊಡನೆ ಮಾತನಾಡಿದ ವಾಣಿಯು ತುತ್ತೂರಿಯಂತೆ ಮಾತನಾಡುತ್ತದೋ ಎಂಬಂತೆ ನನಗೆ ಕೇಳಿಸಿತು. ಅದು, “ಇಲ್ಲಿಗೆ ಏರಿ ಬಾ, ಮುಂದೆ ಸಂಭವಿಸಬೇಕಾದವುಗಳನ್ನು ನಿನಗೆ ತೋರಿಸಿ ಕೊಡುವೆನು” ಎಂದು ಹೇಳಿತು.


ಸೊಕ್ಕಿನವರ ಸಂಗಡ ಸೂರೆಯನ್ನು ಹಂಚಿಕೊಳ್ಳುವುದಕ್ಕಿಂತಲೂ, ದೀನರ ಸಂಗಡ ದೈನ್ಯದಿಂದಿರುವುದು ವಾಸಿ.


ರಾಜನ ಸನ್ನಿಧಾನದಲ್ಲಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ, ಶ್ರೀಮಂತರಿಗೆ ಏರ್ಪಡಿಸಿರುವ ಸ್ಥಾನದಲ್ಲಿ ನಿಂತುಕೊಳ್ಳಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು