Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 26:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಕುಪ್ಪಳಿಸುತ್ತಿರುವ ಗುಬ್ಬಿಯಂತೆ, ಹಾರಾಡುವ ಬಾನಕ್ಕಿಯ ಹಾಗೆ, ಕಾರಣವಿಲ್ಲದೆ ಕೊಟ್ಟ ಶಾಪವು ಎರಗಿ ನಿಲ್ಲದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಕುಪ್ಪಳಿಸುವ ಗುಬ್ಬಿಯಂತೆ, ಹಾರಾಡುವ ಬಾನಕ್ಕಿಯಂತೆ, ಕಾರಣವಿಲ್ಲದೆ ಕೊಟ್ಟ ಶಾಪ ಗಾಳಿ ಪಾಲಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಕುಪ್ಪಳಿಸುತ್ತಿರುವ ಗುಬ್ಬಿಯಂತೆ, ಹಾರಾಡುವ ಬಾನಕ್ಕಿಯ ಹಾಗೆ, ನಿವಿುತ್ತವಿಲ್ಲದೆ ಕೊಟ್ಟ ಶಾಪವು ಎರಗಿ ನಿಲ್ಲದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅಯೋಗ್ಯವಾದ ಶಾಪ ನಿರಪರಾಧಿಗೆ ತಟ್ಟುವುದಿಲ್ಲ. ಆ ಶಾಪದ ಮಾತುಗಳು ಹಾರಿಹೋಗಿ ಎಂದೂ ಕೆಳಗಿಳಿಯದ ಪಕ್ಷಿಗಳಂತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅಲೆದಾಡುವ ಪಕ್ಷಿಯಂತೆಯೂ, ಹಾರಾಡುವ ಬಾನಕ್ಕಿಯಂತೆಯೂ ಕಾರಣವಿಲ್ಲದೆ ಕೊಡುವ ಶಾಪವು ತಗಲದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 26:2
10 ತಿಳಿವುಗಳ ಹೋಲಿಕೆ  

ದೇವರು ಶಪಿಸದವನನ್ನು ನಾನು ಹೇಗೆ ಶಪಿಸಲಿ? ಯೆಹೋವನು ಎದುರಿಸದವನನ್ನು ನಾನು ಹೇಗೆ ಎದುರಿಸಲಿ?


ಅವರು ಶಪಿಸಲಿ, ಚಿಂತೆಯಿಲ್ಲ; ನೀನು ಆಶೀರ್ವದಿಸುವಿ. ಅವರು ಎದ್ದು ಅಪಮಾನ ಹೊಂದುವರು. ಆದರೆ ನಿನ್ನ ಸೇವಕನಾದ ನಾನು ಉಲ್ಲಾಸಿಸುವೆನು.


ಯಾಕೆಂದರೆ ಅವರು ಇಸ್ರಾಯೇಲರನ್ನು ಅನ್ನಪಾನಗಳೊಡನೆ ಎದುರುಗೊಳ್ಳಲಿಲ್ಲ, ಅವರನ್ನು ಶಪಿಸುವುದಕ್ಕಾಗಿ ಬಿಳಾಮನಿಗೆ ಹಣವನ್ನು ಕೊಟ್ಟು ಅವನನ್ನು ಕರೆಯಿಸಿದರು. ನಮ್ಮ ದೇವರಾದರೋ ಅವನಿಂದ ಶಾಪವನ್ನಲ್ಲ, ಆಶೀರ್ವಾದವನ್ನೇ ಹೇಳಿಸಿದನು ಎಂಬ ಮಾತು ಬರೆದಿರುವುದಾಗಿ ಕಂಡು ಬಂದಿತು.


ಒಂದು ವೇಳೆ ಯೆಹೋವನು ನನ್ನ ಕಷ್ಟವನ್ನು ನೋಡಿ ಈ ಹೊತ್ತಿನ ಶಾಪಕ್ಕೆ ಬದಲಾಗಿ ನನಗೆ ಶುಭವನ್ನು ಅನುಗ್ರಹಿಸಾನು” ಎಂದು ಹೇಳಿದನು.


“ನೀನು ಕೋಲುಹಿಡಿದು ನನ್ನ ಬಳಿಗೆ ಬರುವುದೇನು? ನಾನು ನಾಯಿಯೋ” ಎಂದು ಹೇಳಿ ಅವನನ್ನು ತನ್ನ ದೇವರ ಹೆಸರಿನಲ್ಲಿ ಶಪಿಸಿ,


ಸ್ಥಳವನ್ನು ಬಿಟ್ಟು ಅಲೆಯುವ ಮನುಷ್ಯನು, ಗೂಡನ್ನು ಬಿಟ್ಟು ಅಲೆಯುವ ಹಕ್ಕಿಯ ಹಾಗೆ.


ಅರ್ನೋನ್ ನದಿಯ ಹಾಯ್ಗಡಗಳಲ್ಲಿ ಮೋವಾಬಿನ ಜನರು ಅಲೆಯುವ ಪಕ್ಷಿಗಳಂತೆಯೂ, ಗೂಡಿನಿಂದ ಚದುರಿರುವ ಮರಿಗಳಂತೆಯೂ ಆಗುವರು.


ಸೌಲನ ರಾಜ್ಯವನ್ನು ಕಸಿದುಕೊಂಡು ಅವನ ಮನೆಯವರನ್ನು ಕೊಂದದ್ದಕ್ಕಾಗಿ ಯೆಹೋವನು ನಿನಗೆ ಮುಯ್ಯಿ ತೀರಿಸಿದ್ದಾನೆ. ಆತನು ರಾಜ್ಯವನ್ನು ನಿನ್ನ ಮಗನಾದ ಅಬ್ಷಾಲೋಮನಿಗೆ ಕೊಟ್ಟು ಬಿಟ್ಟನು. ಕೊಲೆಗಾರನೇ ಇಗೋ, ನಿನಗೆ ಈಗ ತಕ್ಕ ಆಪತ್ತು ಬಂದಿದೆ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು