Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 26:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಕಟ್ಟಿಗೆಯಿಲ್ಲದಿದ್ದರೆ ಬೆಂಕಿ ಆರುವುದು, ಚಾಡಿಕೋರನು ಇಲ್ಲದಿದ್ದರೆ ಜಗಳ ಶಮನವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಸೌದೆಯಿಲ್ಲದಿದ್ದರೆ ಬೆಂಕಿ ಆರುವುದು; ಚಾಡಿಕೋರನಿಲ್ಲದಿದ್ದರೆ ಜಗಳ ಶಮನವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಕಟ್ಟಿಗೆಯಿಲ್ಲದಿದ್ದರೆ ಬೆಂಕಿ ಆರುವದು; ಚಾಡಿಕೋರನು ಇಲ್ಲದಿದ್ದರೆ ಜಗಳ ಶಮನವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಸೌದೆ ಇಲ್ಲದಿದ್ದರೆ ಬೆಂಕಿಯು ಆರಿಹೋಗುವುದು. ಅಂತೆಯೇ ಹುರುಳಿಲ್ಲದ ವಾಗ್ವಾದ ನಿಂತುಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಕಟ್ಟಿಗೆ ಇಲ್ಲದಿರುವಲ್ಲಿ ಬೆಂಕಿಯು ಆರಿಹೋಗುತ್ತದೆ; ಹಾಗೆಯೇ ಚಾಡಿಕೋರನು ಇಲ್ಲದಿರುವಲ್ಲಿ ಜಗಳ ಶಮನವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 26:20
6 ತಿಳಿವುಗಳ ಹೋಲಿಕೆ  

ನಾಲಿಗೆಯೂ ಸಹ ಬೆಂಕಿಯೇ. ನಾಲಿಗೆಯೂ ಅಧರ್ಮ ಲೋಕರೂಪವಾಗಿ ನಮ್ಮ ಅಂಗಗಳ ನಡುವೆ ಇಡಲ್ಪಟ್ಟಿದೆ. ಅದು ದೇಹವನ್ನೆಲ್ಲಾ ಕೆಡಿಸುತ್ತದೆ. ತಾನೇ ನರಕವೆಂಬ ಬೆಂಕಿ ಹೊತ್ತಿಸಿಕೊಳ್ಳುತ್ತಾ ಇಡೀ ಬಾಳಿಗೆ ಬೆಂಕಿ ಹಚ್ಚುತ್ತದೆ.


ಧರ್ಮನಿಂದಕನನ್ನು ಓಡಿಸಿಬಿಟ್ಟರೆ ಜಗಳವು ತೊಲಗುವುದು, ಹೌದು, ವ್ಯಾಜ್ಯವು ತೀರಿ ಅವಮಾನವು ಇಲ್ಲವಾಗುವುದು.


ತುಂಟನು ಜಗಳ ಬಿತ್ತುತ್ತಾನೆ, ಚಾಡಿಕೋರನು ಮಿತ್ರರನ್ನು ಅಗಲಿಸುತ್ತಾನೆ.


ಚಾಡಿಕೋರನ ಮಾತುಗಳು ರುಚಿಯಾದ ತುತ್ತುಗಳು, ಇವು ಹೊಟ್ಟೆಯೊಳಕ್ಕೇ ಇಳಿಯುವವು.


ಹಾಗೆಯೇ ನಾಲಿಗೆಯು ಕೂಡ ಚಿಕ್ಕ ಅಂಗವಾಗಿದ್ದರೂ ದೊಡ್ಡ ಕಾರ್ಯಗಳನ್ನು ಮಾಡುವ ಬಗ್ಗೆ ಕೊಚ್ಚಿಕೊಳ್ಳುತ್ತದೆ. ಬೆಂಕಿಯ ಸಣ್ಣ ಕಿಡಿ ದೊಡ್ಡ ಕಾಡನ್ನೂ ಸುಡುತ್ತದೆ.


“‘ಪರಿಚಯವುಳ್ಳವರಲ್ಲಿ ಒಬ್ಬರ ಮೇಲೊಬ್ಬರು ಚಾಡಿಹೇಳಬಾರದು. ನೆರೆಯವನಿಗೆ ಮರಣ ಶಿಕ್ಷೆಯಾಗಲೇಬೇಕು ಎಂದು ಹಠ ಹಿಡಿಯಬಾರದು. ನಾನು ಯೆಹೋವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು