Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 26:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಕೆಟ್ಟ ಹೃದಯದಿಂದ ಪ್ರೀತಿಯನ್ನಾಡುವ ತುಟಿಯು, ಬೆಳ್ಳಿ ಲೇಪನ ಮಾಡಿದ ಮಣ್ಣಿನ ಮಡಿಕೆಯ ಹಾಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಕೆಟ್ಟ ಹೃದಯದಿಂದ ಸವಿನುಡಿಯು ತುಟಿ, ಬೆಳ್ಳಿ ಮೆರುಗಿನಿಂದ ಥಳಿಸುವ ಮಣ್ಣಿನ ಬೋಕಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಕೆಟ್ಟ ಹೃದಯದಿಂದ ಪ್ರೀತಿಯನ್ನಾಡುವ ತುಟಿಯು ಕೊಟ್ಟಿಬೆಳ್ಳಿ ಮುಲಾಮು ಮಾಡಿದ ಮಣ್ಣು ಮಡಕೆಯ ಹಾಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಕೆಟ್ಟ ಆಲೋಚನೆಯನ್ನು ಅಡಗಿಸಿಡುವ ಕನಿಕರದ ಮಾತುಗಳು ಕಡಿಮೆ ಬೆಲೆಯ ಮಡಿಕೆಯ ಮೇಲಿನ ಬೆಳ್ಳಿಯ ಲೇಪನದಂತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಕೆಟ್ಟ ಹೃದಯದಿಂದ ಸವಿನುಡಿಯುವ ತುಟಿಯು, ಬೆಳ್ಳಿಯ ಹೊದಿಕೆಯಿಂದ ಮುಚ್ಚಲ್ಪಟ್ಟ ಬೋಕಿಯಂತೆ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 26:23
10 ತಿಳಿವುಗಳ ಹೋಲಿಕೆ  

ಆದರೆ ಕರ್ತನು ಅವನಿಗೆ, “ಫರಿಸಾಯರಾದ ನೀವು ಪಂಚಪಾತ್ರೆ ತಟ್ಟೆ ಇವುಗಳ ಹೊರಭಾಗವನ್ನು ಶುಚಿಮಾಡುತ್ತೀರಿ ಸರಿ, ಆದರೆ ನಿಮ್ಮ ಒಳಭಾಗವು ದುರಾಶೆಯಿಂದಲೂ ಕೆಟ್ಟತನದಿಂದಲೂ ತುಂಬಿರುತ್ತದೆ.


ಹೊಟ್ಟೆಯಲ್ಲಿ ಹಗೆಯನ್ನಿಟ್ಟುಕೊಂಡವನು ಸುಳ್ಳುಗಾರ, ಚಾಡಿಗಾರನು ಜ್ಞಾನಹೀನ.


“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ ನೀವು ಸುಣ್ಣಾ ಹಚ್ಚಿದ ಸಮಾಧಿಗಳಿಗೆ ಹೋಲಿಕೆಯಾಗಿದ್ದೀರಿ; ಇವು ಹೊರಗೆ ಸುಂದರವಾಗಿ ಕಾಣುತ್ತವೆ. ಒಳಗೆ ನೋಡಿದರೆ ಸತ್ತವರ ಎಲುಬುಗಳಿಂದಲೂ ಎಲ್ಲಾ ಹೊಲಸಿನಿಂದಲೂ ತುಂಬಿರುತ್ತವೆ.


ಶ್ರದ್ಧೆ ಇರುವ ನನ್ನ ಭಕ್ತರಂತೆ ಅವರು ನಿನ್ನ ಬಳಿಗೆ ಬಂದು, ನಿನ್ನ ಮುಂದೆ ಕುಳಿತುಕೊಂಡು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಗೊಳ್ಳುವುದಿಲ್ಲ; ಬಾಯಿಂದ ಬಹುಪ್ರೀತಿಯನ್ನು ತೋರಿಸುತ್ತಾರೆ. ಅವರ ಮನಸ್ಸೋ ತಾವು ದೋಚಿಕೊಂಡದರ ಮೇಲೆ ಇರುತ್ತದೆ.


ಬೆಳ್ಳಿಯಿಂದ ಕಲ್ಮಷವನ್ನು ತೆಗೆದುಹಾಕಿದರೆ, ಅಕ್ಕಸಾಲಿಗನಿಗೆ ಬೇಕಾದ ಪಾತ್ರೆಯಾಗುವುದು.


ಸವಿಮಾತನಾಡಿದರೂ ಅವನನ್ನು ನಂಬಬೇಡ, ಅವನ ಹೃದಯದಲ್ಲಿ ಎಷ್ಟೋ ಹೇಯ ಕೃತ್ಯಗಳು.


ಅವನು ತನ್ನ ಒಳಗಿನ ಯೋಚನೆಯಂತೆಯೇ ಇದ್ದಾನೆ, ಉಣ್ಣು, ಕುಡಿ ಎಂದು ಹೇಳಿದರೂ ನಿನ್ನಲ್ಲಿ ಅವನಿಗೆ ಪ್ರೀತಿಯಿಲ್ಲ.


ಮಿತ್ರನು ಮಾಡುವ ಗಾಯಗಳು ಮೇಲಿಗಾಗಿಯೇ, ಶತ್ರುವಿನ ಮುದ್ದುಗಳು ಹೇರಳವಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು