Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 27:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಿನಗೂ, ನಿನ್ನ ತಂದೆಗೂ ಮಿತ್ರನಾದವನನ್ನು ಬಿಡಬೇಡ, ನಿನ್ನ ಇಕ್ಕಟ್ಟಿನ ದಿನದಲ್ಲಿ ಅಣ್ಣನ ಮನೆಯನ್ನು ಆಶ್ರಯಿಸದಿರು, ದೂರವಾಗಿರುವ ಅಣ್ಣನಿಗಿಂತ ಹತ್ತಿರವಾಗಿರುವ ನೆರೆಯವನು ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನಿನಗೂ ನಿನ್ನ ಹೆತ್ತವನಿಗೂ ಮಿತ್ರನಾದವನನ್ನು ಬಿಡಬೇಡ; ಇಕ್ಕಟ್ಟಿನ ದಿನದಲ್ಲಿ ಒಡಹುಟ್ಟಿದವರನ್ನು ಆಶ್ರಯಿಸಬೇಡ; ದೂರವಿರುವ ಅಣ್ಣನಿಗಿಂತ ಹತ್ತಿರವಿರುವ ನೆರೆಯವನೆ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಿನಗೂ ನಿನ್ನ ತಂದೆಗೂ ವಿುತ್ರನಾದವನನ್ನು ಬಿಡಬೇಡ; ನಿನ್ನ ಇಕ್ಕಟ್ಟಿನ ದಿನದಲ್ಲಿ ಅಣ್ಣನ ಮನೆಯನ್ನು ಆಶ್ರಯಿಸದಿರು; ದೂರವಾಗಿರುವ ಅಣ್ಣನಿಗಿಂತ ಹತ್ತಿರವಾಗಿರುವ ನೆರೆಯವನು ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಿನ್ನ ಸ್ನೇಹಿತರನ್ನೂ ನಿನ್ನ ತಂದೆಯ ಸ್ನೇಹಿತರನ್ನೂ ಮರೆಯಬೇಡ. ಕಷ್ಟಬಂದಾಗ ಸಹಾಯ ಕೇಳಲು ಬಹುದೂರವಿರುವ ನಿನ್ನ ಸಹೋದರನ ಮನೆಗೆ ಹೋಗುವುದಕ್ಕಿಂತ ನಿನ್ನ ಸಮೀಪದಲ್ಲಿರುವ ನೆರೆಯವನನ್ನು ಕೇಳುವುದೇ ಉತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಿನ್ನ ಸ್ನೇಹಿತನನ್ನೂ ನಿನ್ನ ತಂದೆಯ ಸ್ನೇಹಿತನನ್ನೂ ತ್ಯಜಿಸಬೇಡ; ಅಲ್ಲದೆ ನಿನ್ನ ಇಕ್ಕಟ್ಟಿನ ದಿನದಲ್ಲಿ ನಿನ್ನ ಸಹೋದರನ ಮನೆಗೆ ಹೋಗಬೇಡ; ಏಕೆಂದರೆ ದೂರವಾಗಿರುವ ಸಹೋದರನಿಗಿಂತ ಹತ್ತಿರವಾಗಿರುವ ನೆರೆಯವನೇ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 27:10
17 ತಿಳಿವುಗಳ ಹೋಲಿಕೆ  

ಬಹಳ ಗೆಳೆಯರನ್ನು ಸೇರಿಸಿಕೊಂಡವನಿಗೆ ನಾಶನ, ಸಹೋದರನಿಗಿಂತಲೂ ಹತ್ತಿರ ಹೊಂದಿಕೊಳ್ಳುವ ಮಿತ್ರನುಂಟು.


ಮಿತ್ರನ ಪ್ರೀತಿಯು ನಿರಂತರ, ಸಹೋದರನ ಜನ್ಮವು ಆಪತ್ತಿನಲ್ಲಿ ಸಾರ್ಥಕ.


ಬಡವನನ್ನು ಬಂಧುಗಳೆಲ್ಲಾ ಹಗೆಮಾಡುವರು, ಹೌದು, ಮಿತ್ರರೂ ಅವನಿಗೆ ದೂರವಾಗುವರು. ಅವರ ಬರೀ ಮಾತುಗಳನ್ನು ನಂಬಿ ಹಿಂಬಾಲಿಸಿದರೆ ಏನೂ ಸಿಕ್ಕದು.


ತರುವಾಯ ಸೌಲನ ಮೊಮ್ಮಗನಾದ ಮೆಫೀಬೋಶೆತನು ಅರಸನನ್ನು ಎದುರುಗೊಳ್ಳುವುದಕ್ಕಾಗಿ ಬಂದನು. ಅರಸನು ಯೆರೂಸಲೇಮನ್ನು ಬಿಟ್ಟಂದಿನಿಂದ ಸುರಕ್ಷಿತವಾಗಿ ಹಿಂದಿರುಗುವ ವರೆಗೂ ಇವನು ತನ್ನ ಕಾಲುಗಳನ್ನು ತೊಳೆದುಕೊಂಡಿರಲಿಲ್ಲ, ಮೀಸೆಯನ್ನು ಕತ್ತರಿಸಿರಲಿಲ್ಲ, ಬಟ್ಟೆಯನ್ನು ಒಗೆಸಿಕೊಂಡಿರಲಿಲ್ಲ.


ದಾವೀದನು ತಾನು ಸೌಲನ ಮಗನಾದ ಯೋನಾತಾನನಿಗೆ ಯೆಹೋವನ ಹೆಸರಿನಲ್ಲಿ ಮಾಡಿದ ಪ್ರಮಾಣವನ್ನು ನೆನಪುಮಾಡಿಕೊಂಡು ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಮೆಫೀಬೋಶೆತನನ್ನು ಉಳಿಸಿದನು.


ಬೆಳಗಾದ ಮೇಲೆ ಯೆಹೂದ್ಯರು ಒಳಸಂಚು ಮಾಡಿ; ನಾವು ಪೌಲನನ್ನು ಕೊಲ್ಲುವ ತನಕ ಅನ್ನಪಾನವೇನೂ ಮುಟ್ಟುವುದಿಲ್ಲವೆಂದು ಶಪಥಮಾಡಿಕೊಂಡರು.


ಯೆಹೋವನು ಹೀಗೆನ್ನುತ್ತಾನೆ, “ನಿಮ್ಮ ಪೂರ್ವಿಕರು ನನ್ನಲ್ಲಿ ಯಾವ ಅನ್ಯಾಯವನ್ನು ಕಂಡು, ವ್ಯರ್ಥಾಚರಣೆಯನ್ನು ಅನುಸರಿಸಿ ತಾವೇ ಅಯೋಗ್ಯರಾಗಿ ನನ್ನನ್ನು ಬಿಟ್ಟು ದೂರವಾದರು?


ಯೆಹೋವಾಷನು ಜೆಕರೀಯನ ತಂದೆಯಾದ ಯೆಹೋಯಾದನಿಂದ ತನಗಾದ ಕೃಪೆಯನ್ನು ಮರೆತು ಅವನ ಮಗನನ್ನು ಕೊಲ್ಲಿಸಿದನು. ಜೆಕರೀಯನು ಸಾಯುವಾಗ, “ಯೆಹೋವನೇ ಇದನ್ನು ನೋಡಿ, ತಕ್ಕ ಶಿಕ್ಷೆಯನ್ನು ವಿಧಿಸಲಿ” ಎಂದನು.


ನನ್ನ ತಂದೆಯ ಮನೆಯವರೆಲ್ಲರೂ ಅರಸನಾದ ನನ್ನ ಒಡೆಯನ ದೃಷ್ಟಿಯಲ್ಲಿ ಮರಣಕ್ಕೆ ಪಾತ್ರರಾಗಿದ್ದರು. ಆದರೂ ಅವನು ತನ್ನ ಸೇವಕನಾದ ನನ್ನನ್ನು ಭೋಜನಕ್ಕೆ ತನ್ನ ಪಂಕ್ತಿಯಲ್ಲಿ ಕುಳ್ಳಿರಿಸಿಕೊಂಡನು. ಅರಸನಿಗೆ ಹೆಚ್ಚಾಗಿ ಮೊರೆಯಿಡುವುದಕ್ಕೆ ನಾನೇನು ಯೋಗ್ಯನೋ?” ಎಂದು ಉತ್ತರ ಕೊಟ್ಟನು.


ಸ್ವದೇಶದವನ ಎತ್ತಾಗಲಿ ಅಥವಾ ಕುರಿಯಾಗಲಿ ದಾರಿ ತಪ್ಪಿ ಹೋಗಿರುವುದನ್ನು ನೀವು ನೋಡಿಯೂ ನೋಡದಂತೆ ಅದನ್ನು ಬಿಟ್ಟು ಹೋಗಬಾರದು; ಅದನ್ನು ಅಟ್ಟಿಸಿಕೊಂಡು ಹೋಗಿ ಅವನಿಗೆ ಕೊಡಲೇಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು