Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 27:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಗೋದಿರವೆಯ ಸಂಗಡ ಮೂರ್ಖನನ್ನು ಒರಳಿನಲ್ಲಿ ಒನಕೆಯಿಂದ ಕುಟ್ಟಿದರೂ, ಮೂರ್ಖತನವು ಅವನಿಂದ ತೊಲಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಮೂರ್ಖನನ್ನು ಕಾಳಿನ ಸಂಗಡ ಒರಳಿಗೆ ಹಾಕಿ ಒನಕೆಯಿಂದ ಕುಟ್ಟಿದರೂ ಮೂರ್ಖತನ ತೊಲಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಗೋದಿರವೆಯ ಸಂಗಡ ಮೂರ್ಖನನ್ನು ಒರಳಿನಲ್ಲಿ ಒನಕೆಯಿಂದ ಕುಟ್ಟಿದರೂ ಮೂರ್ಖತನವು ಅವನಿಂದ ತೊಲಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನೀನು ಮೂಢನನ್ನು ಅರೆದು ಪುಡಿಪುಡಿ ಮಾಡಿದರೂ ಅವನ ಮೂಢತನವನ್ನು ತೊಲಗಿಸಲಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಬುದ್ಧಿಹೀನನನ್ನು ಒರಳಿನಲ್ಲಿ ಗೋಧಿಯೊಂದಿಗೆ ಹಾಕಿ, ಒಣಕೆಯಿಂದ ಕುಟ್ಟಿದರೂ, ಅವನಿಂದ ಮೂರ್ಖನತವು ತೊಲಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 27:22
14 ತಿಳಿವುಗಳ ಹೋಲಿಕೆ  

ಯೆಹೋವನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇರುತ್ತವಲ್ಲಾ; ನೀನು ಹೊಡೆದರೂ ಅವರು ದುಃಖಪಡಲ್ಲಿಲ್ಲ, ಸಂಹರಿಸಿದರೂ ನೀತಿ ಶಿಕ್ಷೆಗೆ ಒಳಪಡಲಿಲ್ಲ. ತಮ್ಮ ಮುಖವನ್ನು ಕಲ್ಲಿಗಿಂತ ಕಠಿನಮಾಡಿಕೊಂಡು ಪಶ್ಚಾತ್ತಾಪಪಡದೆ ಹೋಗಿದ್ದಾರೆ.


ಜನರು ನನ್ನನ್ನು ಹೊಡೆದರೂ ನೋವಾಗಲಿಲ್ಲ, ಬಡಿದರೂ ತಿಳಿಯಲಿಲ್ಲ, ಯಾವಾಗ ಎಚ್ಚೆತ್ತೇನು? ಪುನಃ ಅದನ್ನೇ ಹುಡುಕೇನು ಎಂದುಕೊಳ್ಳುವಿ.


ಏಕೆ ದ್ರೋಹವನ್ನು ಹೆಚ್ಚಿಸಿ, ಪೆಟ್ಟಿಗೆ ಗುರಿಯಾಗುತ್ತೀರಿ? ತಲೆಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.


ಆ ರಾತ್ರಿಯಲ್ಲಿ ಫರೋಹನೂ, ಅವನ ಪರಿವಾರದವರೂ, ಐಗುಪ್ತ್ಯರೆಲ್ಲರೂ ಎದ್ದು ನೋಡಲಾಗಿ ಸಾವಿಲ್ಲದ ಮನೆ ಒಂದೂ ಇರಲಿಲ್ಲ. ಐಗುಪ್ತ ದೇಶದಲ್ಲಿ ದೊಡ್ಡ ಗೋಳಾಟವಾಯಿತು.


ಇಸ್ರಾಯೇಲರು ಓಡಿಹೋದರೆಂಬ ವರ್ತಮಾನವು ಐಗುಪ್ತದ ಅರಸನಾದ ಫರೋಹನಿಗೆ ತಿಳಿದುಬಂದಾಗ, ಅವರ ವಿಷಯದಲ್ಲಿ ಫರೋಹನ ಮತ್ತು ಅವನ ಪರಿವಾರದವರ ಹೃದಯವು ಅವರಿಗೆ ವಿರುದ್ಧವಾಗಿ ಕಠಿಣಗೊಂಡಿತು. ಅವರು, “ಇದೇನು ನಾವು ಮಾಡಿದ್ದು? ನಮಗೆ ದಾಸರಾಗಿದ್ದ ಇಸ್ರಾಯೇಲರನ್ನು ಹೊರಟು ಹೋಗುವುದಕ್ಕೆ ಬಿಟ್ಟೆವಲ್ಲಾ” ಎಂದುಕೊಂಡರು.


ಶತ್ರುವು, ‘ನಾವು ಇವರನ್ನು ಹಿಂದಟ್ಟಿ ಹಿಡಿಯುವೆವು, ಅವರ ಸೊತ್ತನ್ನು ಅಪಹರಿಸಿ ಹಂಚಿಕೊಳ್ಳುವೆವು; ಅವರಲ್ಲಿ ನಮ್ಮ ಬಯಕೆಯನ್ನು ತೀರಿಸಿಕೊಳ್ಳುವೆವು. ನಾವು ಖಡ್ಗವನ್ನು ಹಿಡಿದು; ಶಕ್ತಿಯಿಂದ ಅವರನ್ನು ಸಂಹಾರಮಾಡುವೆವು’ ಎಂಬುದಾಗಿ ಮಾತನಾಡಿಕೊಳ್ಳುತ್ತಿದ್ದರು.


ನಾಯಿ ತಾನು ಕಕ್ಕಿದ್ದನ್ನು ನೆಕ್ಕುವುದಕ್ಕೆ ತಿರುಗಿಕೊಳ್ಳುವ ಹಾಗೆ, ಮೂಢನು ತಾನು ಮಾಡಿದ ಮೂರ್ಖತನವನ್ನೇ ಪುನಃ ಮಾಡುವನು.


ಕೂಷ್ಯನು ತನ್ನ ಚರ್ಮವನ್ನು ಮಾರ್ಪಡಿಸಬಲ್ಲನೇ? ಚಿರತೆಯು ತನ್ನ ಚುಕ್ಕೆಗಳನ್ನು ಬದಲಾಯಿಸಲು ಸಾಧ್ಯವೇ? ಹೀಗಾದರೆ ದುಷ್ಟತನದಲ್ಲಿ ಶಿಕ್ಷಿತರಾದ ನೀವು ಶಿಷ್ಟತನದಲ್ಲಿ ನಡೆಯಬಹುದು.


ಸೌಲನಿಗೆ ಈ ವರ್ತಮಾನವು ಮುಟ್ಟಿದಾಗ ಅವನು ಬೇರೆ ಆಳುಗಳನ್ನು ಕಳುಹಿಸಿದನು. ಇವರೂ ಪ್ರವಾದಿಸಿದರು. ಅವನು ಮೂರನೆಯ ಸಾರಿ ಇನ್ನೂ ಕೆಲವು ಮಂದಿ ಆಳುಗಳನ್ನು ಕಳುಹಿಸಿದನು. ಅವರೂ ಪ್ರವಾದಿಸಿದರು.


ಇಷ್ಟಾದರೂ ಯಾರೊಬ್ಬಾಮನು ತನ್ನ ದುರ್ಮಾರ್ಗವನ್ನು ಬಿಡದೆ, ಪುನಃ ಕನಿಷ್ಠರಾದ ಜನರನ್ನು ಪೂಜಾಸ್ಥಳಗಳ ಯಾಜಕರನ್ನಾಗಿ ಪ್ರತಿಷ್ಠಿಸಿದನು.


ಜ್ಞಾನಿಗಳ ಜ್ಞಾನಕಿರೀಟವೇ ಅವರ ಶ್ರೇಷ್ಠ ಸಂಪತ್ತು, ಜ್ಞಾನಹೀನರ ಮೂರ್ಖತನವು ಬರೀ ಮೂರ್ಖತನವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು