Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 27:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಕಾರ್ಯದಿಂದ ಹೊರಪಡದ ಪ್ರೀತಿಗಿಂತಲೂ, ಬಹಿರಂಗವಾದ ಗದರಿಕೆಯು ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಮರೆಯಾದ ಪ್ರೀತಿಗಿಂತ ಬಹಿರಂಗವಾದ ಗದರಿಕೆ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 [ಕಾರ್ಯದಿಂದ] ಹೊರಪಡದ ಪ್ರೀತಿಗಿಂತಲೂ ಬಹಿರಂಗವಾದ ಗದರಿಕೆಯು ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಬಹಿರಂಗವಾದ ಟೀಕೆ ಗುಟ್ಟಾದ ಪ್ರೀತಿಗಿಂತಲೂ ಉತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ರಹಸ್ಯವಾದ ಪ್ರೀತಿಗಿಂತಲೂ ಬಹಿರಂಗವಾದ ಗದರಿಕೆಯೇ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 27:5
5 ತಿಳಿವುಗಳ ಹೋಲಿಕೆ  

ಮುಖಸ್ತುತಿ ಮಾಡುವವನಿಗಿಂತಲೂ, ಗದರಿಸುವವನು ಬಳಿಕ ಹೆಚ್ಚು ದಯಾಪಾತ್ರನಾಗುವನು.


ಪಾಪದಲ್ಲಿ ನಡೆಯುವವರನ್ನು ಎಲ್ಲರ ಮುಂದೆಯೇ ಗದರಿಸು. ಇವರಿಂದ ಉಳಿದವರಿಗೂ ಭಯವುಂಟಾಗುವುದು.


ಅವರು ಸುವಾರ್ತೆಯ ಸತ್ಯಾರ್ಥದ ಪ್ರಕಾರ ಸರಿಯಾಗಿ ನಡೆಯುತ್ತಿಲ್ಲವೆಂಬುದನ್ನು ನಾನು ಕಂಡಾಗ ಎಲ್ಲರ ಮುಂದೆ ಕೇಫನಿಗೆ ಹೇಳಿದ್ದೇನಂದರೆ, “ನೀನು ಯೆಹೂದ್ಯನಾಗಿದ್ದು ಯೆಹೂದ್ಯರಂತೆ ನಡೆಯದೆ ಅನ್ಯಜನರಂತೆ ಬದುಕಿ, ಅನ್ಯಜನರಿಗೆ, ನೀವು ಯೆಹೂದ್ಯರಂತೆ ನಡೆದುಕೊಳ್ಳಬೇಕೆಂದು ಒತ್ತಾಯಪಡಿಸಿ ಹೇಳುವುದಾದರೂ ಹೇಗೆ?”


“ನಿನ್ನ ಸಹೋದರನು ನಿನ್ನ ವಿರುದ್ಧ ತಪ್ಪು ಮಾಡಿದರೆ, ನೀನು ಹೋಗಿ ಅವನು ಒಬ್ಬನೇ ಇರುವಾಗ ಅವನ ತಪ್ಪನ್ನು ಅವನಿಗೆ ಅರಿವಾಗುವಂತೆ ತಿಳಿಸು. ಅವನು ನಿನ್ನ ಮಾತನ್ನು ಕೇಳಿದರೆ ನಿನ್ನ ಸಹೋದರನನ್ನು ನೀನು ಸಂಪಾದಿಸಿಕೊಂಡಿರುವಿ.


“‘ಸಹೋದರನ ವಿಷಯವಾಗಿ ಮನಸ್ಸಿನಲ್ಲಿ ದ್ವೇಷವನ್ನು ಇಟ್ಟುಕೊಳ್ಳಬಾರದು. ನೆರೆಯವನ ದೋಷಕ್ಕೆ ನೀವು ಒಳಗಾಗದಂತೆ ಅವನ ತಪ್ಪನ್ನು ಅವನಿಗೆ ತಿಳಿಸಲೇಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು