Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 27:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ತೈಲವೂ, ಸುಗಂಧದ್ರವ್ಯಗಳೂ ಹೇಗೋ, ಮಿತ್ರನ ಸಂಭಾಷಣೆಯಿಂದ ಅನುಭವಕ್ಕೆ ಬರುವ ಸ್ನೇಹರಸವು ಹಾಗೆ ಮನೋಹರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ತೈಲ, ಸುಗಂಧ ದ್ರವ್ಯಗಳು ಮನೋಹರ, ಮಿತ್ರನ ಆದರಣೆ, ಸಲಹೆ ಅತಿ ಮಧುರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ತೈಲವೂ ಸುಗಂಧದ್ರವ್ಯಗಳೂ ಹೇಗೋ ವಿುತ್ರನ ಸಂಭಾಷಣೆಯಿಂದ ಅನುಭವಕ್ಕೆ ಬರುವ ಸ್ನೇಹರಸವು ಹಾಗೆ ಮನೋಹರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಪರಿಮಳತೈಲ ಮತ್ತು ಧೂಪ ನಿನ್ನನ್ನು ಸಂತೋಷಗೊಳಿಸುತ್ತವೆ; ಆದರೆ ಸ್ನೇಹಿತನ ಮಧುರವಾದ ಉಪದೇಶದಿಂದ ಸ್ವಂತ ನಿರ್ಧಾರಕ್ಕಿಂತಲೂ ಹೆಚ್ಚು ಆನಂದವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ತೈಲವೂ ಸುಗಂಧದ್ರವ್ಯವೂ ಹೃದಯವನ್ನು ಸಂತೋಷಪಡಿಸುವ ಹಾಗೆ, ಆದರಣೆಯ ಸಲಹೆಯೂ ಸ್ನೇಹಿತನಿಗೆ ಮಧುರವಾಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 27:9
20 ತಿಳಿವುಗಳ ಹೋಲಿಕೆ  

ಜ್ಞಾನಹೃದಯರಿಗೆ ಜಾಣರೆಂಬ ಬಿರುದು ಬರುವುದು, ಸವಿತುಟಿಯಿಂದ ಉಪದೇಶ ಶಕ್ತಿಯು ಹೆಚ್ಚುವುದು.


ವೈರಿಗಳ ಮುಂದೆಯೇ ನೀನು ನನಗೋಸ್ಕರ ಔತಣವನ್ನು ಸಿದ್ಧಪಡಿಸುತ್ತೀ; ನನ್ನ ತಲೆಗೆ ತೈಲವನ್ನು ಹಚ್ಚಿಸುತ್ತೀ, ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.


ತಕ್ಕ ಉತ್ತರಕೊಡುವವನಿಗೆ ಎಷ್ಟೋ ಸಂತೋಷ! ಸಮಯೋಚಿತವಾದ ನುಡಿಯಲ್ಲಿ ಎಷ್ಟೋ ಸ್ವಾರಸ್ಯ!


ಹೃದಯಾನಂದಕರವಾದ ದ್ರಾಕ್ಷಾರಸವನ್ನು, ಮುಖಕ್ಕೆ ಕಾಂತಿಯನ್ನು ಉಂಟುಮಾಡುವ ಎಣ್ಣೆಯನ್ನು, ಪ್ರಾಣಾಧಾರವಾದ ರೊಟ್ಟಿಯನ್ನು ಸಂಪಾದಿಸಿಕೊಳ್ಳುತ್ತಾರೆ.


ಪ್ರಿಯಳೇ, ವಧುವೇ, ನಿನ್ನ ಪ್ರೀತಿ ಅದೆಷ್ಟೋ ರಮ್ಯ! ನಿನ್ನ ಪ್ರೇಮ ದ್ರಾಕ್ಷಾರಸಕ್ಕಿಂತ ಎಷ್ಟೋ ಉತ್ತಮ! ನಿನ್ನ ತೈಲದ ಪರಿಮಳ ಸಕಲಸುಗಂಧ ದ್ರವ್ಯಗಳಿಗಿಂತ ಎಷ್ಟೋ ಮನೋಹರ!


ವರ್ತಕರು ಮಾರುವ ಸಕಲ ಸುಗಂಧತೈಲಗಳಿಂದ, ರಸಗಂಧ, ಸಾಂಬ್ರಾಣಿಧೂಪ ಮುಂತಾದ ದ್ರವ್ಯಗಳಿಂದ ಧೂಮಸ್ತಂಭಗಳೋಪಾದಿಯಲ್ಲಿ ಹೊರಹೊಮ್ಮುತ್ತಿರುವ, ಅರಣ್ಯಮಾರ್ಗವಾಗಿ ಬರುತ್ತಿರುವ ಈ ಮೆರವಣಿಗೆ ಯಾರದು?


ಆಗ ಮರಿಯಳು ಬಹು ಬೆಲೆಯುಳ್ಳ ಸ್ವಚ್ಛ ಜಟಮಾಂಸಿ ತೈಲವನ್ನು ಒಂದು ಸೇರಷ್ಟು ತಂದು ಯೇಸುವಿನ ಪಾದಕ್ಕೆ ಹಚ್ಚಿ ತನ್ನ ತಲೆ ಕೂದಲಿನಿಂದ ಆತನ ಪಾದಗಳನ್ನು ಒರಸಿದಳು. ಆ ತೈಲದ ಪರಿಮಳವು ಮನೆಯಲ್ಲೆಲ್ಲಾ ತುಂಬಿಕೊಂಡಿತ್ತು.


ಅದು ಆರೋನನ ತಲೆಯ ಮೇಲೆ ಹಾಕಲ್ಪಟ್ಟು, ಅವನ ಗಡ್ಡದ ಮೇಲೆಯೂ, ಅವನ ಅಂಗಿಗಳ ಕೊರಳ ಪಟ್ಟಿಯವರೆಗೂ ಹರಿದು ಬರುವ ಶ್ರೇಷ್ಠ ತೈಲದಂತೆಯೂ,


ಆಗ ಅದು ಅವುಗಳಿಗೆ, ‘ನನ್ನಲ್ಲಿರುವ ಎಣ್ಣೆಗೋಸ್ಕರ ದೇವತೆಗಳೂ, ಮನುಷ್ಯರು ನನ್ನನ್ನು ಘನಪಡಿಸುತ್ತಾರೆ; ಇದನ್ನು ಬಿಟ್ಟು ಮರಗಳ ಮೇಲೆ ಓಲಾಡುವುದಕ್ಕೆ ಬರಬೇಕೋ?’ ಅಂದಿತು.


ಅಲ್ಲಿದ್ದ ಸಹೋದರರು ನಮ್ಮ ಸಮಾಚಾರವನ್ನು ಕೇಳಿದಾಗ, ನಮ್ಮನ್ನು ಭೇಟಿಮಾಡುವುದಕ್ಕಾಗಿ ಕೆಲವರು ಅಪ್ಪಿಯಪೇಟೆಯ ವರೆಗೂ, ಕೆಲವರು ತ್ರಿಛತ್ರವೆಂಬ ಸ್ಥಳದ ವರೆಗೂ ಬಂದರು. ಪೌಲನು ಅವರನ್ನು ನೋಡಿ ದೇವರಿಗೆ ಸ್ತೋತ್ರವನ್ನು ಸಲ್ಲಿಸಿ ಧೈರ್ಯಗೊಂಡನು.


ನಿನ್ನ ತೈಲವು ಸುಗಂಧ; ನಿನ್ನ ಹೆಸರು ಸುರಿದ ತೈಲದ ಸುಗಂಧದಂತೆ ವ್ಯಾಪಿಸಿರುವುದರಿಂದ, ತರುಣಿಯರು ನಿನ್ನನ್ನು ಪ್ರೀತಿಸುವರು.


ಹಾಸಿಗೆಯ ಮೇಲೆ ರಕ್ತಬೋಳ, ಅಗುರು, ಲವಂಗ, ಚಕ್ಕೆ ಇವುಗಳ ಚೂರ್ಣಗಳಿಂದ ಸುವಾಸನೆಗೊಳಿಸಿದ್ದೇನೆ.


ನೀತಿವಂತರು ನನ್ನನ್ನು ಹೊಡೆಯಲಿ, ಅದು ನನಗೆ ಉಪಕಾರ, ಅವರು ನನ್ನನ್ನು ಶಿಕ್ಷಿಸಲಿ, ಅದು ನನ್ನ ತಲೆಗೆ ಎಣ್ಣೆಯಂತಿದೆ, ನನ್ನ ತಲೆಯು ಅದನ್ನು ಬೇಡವೆನ್ನದಿರಲಿ. ಆದರೆ ದುಷ್ಟರ ಕೆಟ್ಟತನಕ್ಕೆ ವಿರುದ್ಧವಾಗಿ ದೇವರನ್ನು ಪ್ರಾರ್ಥಿಸುತ್ತಿರುವೆನು.


ಈಗ ನನ್ನ ಆಲೋಚನೆಯನ್ನು ಲಾಲಿಸಿ ನಿನ್ನ ಮತ್ತು ನಿನ್ನ ಮಗನಾದ ಸೊಲೊಮೋನನ ಜೀವವನ್ನು ಉಳಿಸಿಕೋ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು