Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 28:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಕೆಟ್ಟದನ್ನು ಮಾಡುವುದಕ್ಕೆ ಯಾವಾಗಲೂ ಭಯಪಡುವವನು ಧನ್ಯನು, ಕಠಿಣಹೃದಯನು ಕೇಡಿಗೆ ಸಿಕ್ಕಿಬೀಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಭಯದಿಂದ ನಡೆದುಕೊಳ್ಳುವವನು ಭಾಗ್ಯವಂತನು; ಕಠಿಣ ಹೃದಯನು ಕೇಡಿಗೆ ತುತ್ತಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಭಯದಿಂದ ನಡೆದುಕೊಳ್ಳುವವನು ಧನ್ಯನು; ಕಠಿನಹೃದಯನು ಕೇಡಿಗೆ ಸಿಕ್ಕಿಬೀಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಕೇಡನ್ನು ಮಾಡಲು ಭಯಪಡುವವನು ಆಶೀರ್ವಾದ ಹೊಂದುವನು. ಆದರೆ ಮೊಂಡನು ಆಪತ್ತಿಗೆ ಸಿಕ್ಕಿಬೀಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯಾವಾಗಲೂ ಯೆಹೋವ ದೇವರ ಭಯಭಕ್ತಿಯಲ್ಲಿ ನಡೆದುಕೊಳ್ಳುವವನು ಧನ್ಯನು. ಆದರೆ ಹೃದಯವನ್ನು ಕಠಿಣಪಡಿಸಿಕೊಳ್ಳುವವನು ಕೇಡಿಗೆ ಸಿಕ್ಕಿಬೀಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 28:14
18 ತಿಳಿವುಗಳ ಹೋಲಿಕೆ  

ಪಾಪಿಗಳನ್ನು ನೋಡಿ ಹೊಟ್ಟೆಕಿಚ್ಚುಪಡಬೇಡ, ಯೆಹೋವನಲ್ಲಿ ನಿರಂತರವಾಗಿ ಭಯಭಕ್ತಿಯುಳ್ಳವನಾಗಿರು.


ಯೆಹೋವನನ್ನು ಭಯಭಕ್ತಿಯಿಂದ ಸೇವಿಸಿರಿ; ನಡುಗುತ್ತಾ ಉಲ್ಲಾಸಪಡಿರಿ.


ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತು, ಹೌದು, ನನ್ನ ಕೈಯಿಂದಲೇ ಇವುಗಳೆಲ್ಲಾ ಉಂಟಾದವು. ನಾನು ಕಟಾಕ್ಷಿಸುವವನು ಎಂಥವನೆಂದರೆ ದೀನನೂ, ಮನಮುರಿದವನೂ ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.


ಪ್ರತಿಯೊಬ್ಬನ ನಡತೆಯನ್ನು ನೋಡಿ ಪಕ್ಷಪಾತವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆಯೆಂದು ಕರೆಯುವವರಾಗಿರುವುದರಿಂದ ಈ ಲೋಕದಲ್ಲಿನ ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯಿಂದ ಕಳೆಯಿರಿ.


ನಾನು ನಿಮಗೆ ಹಿತ ಮಾಡುವುದನ್ನು ಬಿಟ್ಟು ವಿಮುಖನಾಗೆನು’ ಎಂಬುವ ಶಾಶ್ವತವಾದ ಒಡಂಬಡಿಕೆಯನ್ನು ಅವರೊಂದಿಗೆ ಮಾಡಿಕೊಳ್ಳುವೆನು; ಅವರು ನನ್ನಿಂದಗಲದಂತೆ ಅವರ ಹೃದಯದೊಳಗೆ ನನ್ನ ಮೇಲಣ ಭಯಭಕ್ತಿಯನ್ನು ನೆಲೆಗೊಳಿಸುವೆನು.


ನೀನು ಹೇಳುವುದು ನಿಜ. ಅವರು ನಂಬದೇ ಹೋದ್ದದರಿಂದ ಮುರಿದುಹಾಕಲ್ಪಟ್ಟರು. ನೀನು ನಿಂತಿರುವುದು ನಂಬಿಕೆಯಿಂದಲೇ.


ಹೀಗಿರಲಾಗಿ, ದೇವರ ವಿಶ್ರಾಂತಿಯಲ್ಲಿ ಸೇರಬಹುದೆಂಬ ವಾಗ್ದಾನ ಇನ್ನೂ ಇರುವುದರಿಂದ ನಿಮ್ಮಲ್ಲಿ ಯಾವನಾದರೂ ಅದರಿಂದ ತಪ್ಪಿಹೋಗದಂತೆ ನಾವು ಭಯಭಕ್ತಿಯಿಂದ ಇರೋಣ.


ಬಹಳವಾಗಿ ಗದರಿಸಿದರೂ ತಗ್ಗದವನು, ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.


ಯೆಹೋವನಿಗೆ ಸ್ತೋತ್ರ! ಯಾರು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ, ಆತನ ಆಜ್ಞೆಗಳಲ್ಲಿ ಅತ್ಯಾನಂದಪಡುವನೋ ಅವನೇ ಧನ್ಯನು.


ನಿಮ್ಮ ಹಿರಿಯರು ಅರಣ್ಯದಲ್ಲಿರುವ ಮೆರೀಬದಲ್ಲಿ, ಮಸ್ಸಾದಲ್ಲಿ ಮಾಡಿದ ದಿನದಂತೆ, ನೀವು ನಿಮ್ಮ ಹೃದಯವನ್ನು ಕಠಿಣಮಾಡಿಕೊಳ್ಳಬೇಡಿರಿ.


ಅಥವಾ ಆತನ ಅಪಾರವಾದ ದಯೆ, ಸಹನೆ, ದೀರ್ಘಶಾಂತಿಗಳನ್ನು ಕೇವಲವಾಗಿ ಯೋಚಿಸಿ, ನಿನ್ನ ಮನಸ್ಸು ಮಾರ್ಪಡಿಸಿಕೊಳ್ಳುವಂತೆ ಪ್ರೆರೇಪಿಸುವ ದೇವರ ಒಳ್ಳೆತನದ ಅರಿವು ನಿನಗಿಲ್ಲವೋ?


ನಾನು ಯೆಹೋವನನ್ನು ಯಾವಾಗಲೂ ನನ್ನೆದುರಿನಲ್ಲಿಯೇ ಇಟ್ಟುಕೊಂಡಿದ್ದೇನೆ; ಆತನು ನನ್ನ ಬಲಗಡೆಯಲ್ಲಿ ಇರುವುದರಿಂದ ನಾನು ಎಂದಿಗೂ ಕದಲುವುದಿಲ್ಲ.


ದೇವರ ಹೃದಯವು ವಿವೇಕವುಳ್ಳದ್ದು, ಆತನ ಶಕ್ತಿಯು ಪ್ರಬಲವಾದದ್ದು. ಆತನ ವಿರುದ್ಧವಾಗಿ ಮನಸ್ಸು ಕಠಿಣಮಾಡಿಕೊಂಡವನು ಸಾರ್ಥಕನಾದದ್ದುಂಟೇ?


ಆದರೆ ಐಗುಪ್ತ್ಯ ದೇಶದ ಮಾಂತ್ರಿಕರು ತಮ್ಮ ಮಂತ್ರವಿದ್ಯೆಗಳಿಂದ ಅದೇ ರೀತಿಯಾಗಿ ಮಾಡಿದ್ದರಿಂದ ಫರೋಹನ ಹೃದಯವು ಇನ್ನೂ ಕಠಿಣವಾಯಿತು. ಯೆಹೋವನು ಹೇಳಿದಂತೆಯೇ ಅವನು ಮೋಶೆ ಮತ್ತು ಆರೋನರ ಮಾತನ್ನು ಕೇಳದೆ ಹೋದನು.


ಐಗುಪ್ತ್ಯರೂ ಅಂದರೆ ಫರೋಹನ ಕುದುರೆಗಳೂ, ರಥಗಳೂ, ರಾಹುತರೂ ಅವರನ್ನು ಬೆನ್ನಟ್ಟುವವರಾಗಿ ಅವರ ಹಿಂದೆಯೇ ಸಮುದ್ರದೊಳಗೆ ಬಂದರು.


ನೀನು ನಿನ್ನ ಮೊಂಡತನವನ್ನೂ, ಪಶ್ಚಾತ್ತಾಪವಿಲ್ಲದ ಮನಸ್ಸನ್ನೂ ಅನುಸರಿಸಿ ನ್ಯಾಯತೀರ್ಪಿನ ದಿನದವರೆಗೂ ನಿನಗಾಗಿ ದೇವರ ಕೋಪವನ್ನು ಸಂಗ್ರಹಿಸಿಕೊಳ್ಳುತ್ತಾ ಇದ್ದೀ.


ಫರೋಹನು ಆ ಮಹತ್ಕಾರ್ಯವನ್ನು ಲಕ್ಷ್ಯಕ್ಕೆ ತೆಗೆದುಕೊಳ್ಳದೆ ತನ್ನ ಮನೆಗೆ ಹೊರಟುಹೋದನು.


ಪಾಪಿಯು ನೂರು ಸಲ ಅಧರ್ಮ ಮಾಡಿ ಬಹು ಕಾಲ ಬದುಕಿದರೂ, ದೇವರ ಮುಂದೆ ಹೆದರಿ, ಆತನಲ್ಲಿ ಭಯಭಕ್ತಿಯುಳ್ಳವರಿಗೆ ಒಳ್ಳೆಯದೇ ಆಗುವುದೆಂದು ಬಲ್ಲೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು