Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 28:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಬಡವರಾದ ಪ್ರಜೆಗಳನ್ನು ಆಳುವ ದುಷ್ಟರಾಜನು, ಗರ್ಜಿಸುವ ಸಿಂಹ ಮತ್ತು ಹುಡುಕಾಡುವ ಕರಡಿಯಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ದಲಿತರನ್ನಾಳುವ ದುರುಳರಾಜ ಗರ್ಜಿಸುವ ಸಿಂಹ, ಹುಡುಕಾಡುವ ಕರಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಬಡವರಾದ ಪ್ರಜೆಗಳನ್ನು ಆಳುವ ದುಷ್ಟರಾಜನು ಗರ್ಜಿಸುವ ಸಿಂಹ, ಹುಡುಕಾಡುವ ಕರಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಬಲಹೀನರನ್ನು ಆಳುವ ಕೆಡುಕನು ಗರ್ಜಿಸುವ ಸಿಂಹದಂತಿರುವನು; ಮೇಲೆರಗಲಿರುವ ಕರಡಿಯಂತಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಗರ್ಜಿಸುವ ಸಿಂಹದಂತೆಯೂ ಅಲೆದಾಡುವ ಕರಡಿಯಂತೆಯೂ, ಬಡವರನ್ನು ದುಷ್ಟನು ಆಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 28:15
19 ತಿಳಿವುಗಳ ಹೋಲಿಕೆ  

ಆಗ ಹೆರೋದನು ತಾನು ಜ್ಞಾನಿಗಳಿಂದ ವಂಚಿತನಾದೆ ಎಂದು ತಿಳಿದು ಬಹಳ ಕೋಪಗೊಂಡು ತನ್ನ ಆಳುಗಳನ್ನು ಕಳುಹಿಸಿ ತಾನು ಜ್ಞಾನಿಗಳಿಂದ ಕೂಸು ಹುಟ್ಟಿದ್ದ ಗಳಿಗೆಯನ್ನು ತಿಳಿದುಕೊಂಡಿದ್ದ ಕಾಲಕ್ಕೆ ಸರಿಯಾಗಿ, ಬೇತ್ಲೆಹೇಮಿನಲ್ಲಿಯೂ ಅದರ ಎಲ್ಲಾ ನೆರೆಹೊರೆ ಹಳ್ಳಿಗಳಲ್ಲಿಯೂ ಹುಟ್ಟಿದ ಎರಡು ವರ್ಷದೊಳಗಿನ ಗಂಡು ಕೂಸುಗಳನ್ನೆಲ್ಲಾ ಕೊಲ್ಲಿಸಿದನು.


ಸ್ವಸ್ಥಚಿತ್ತರಾಗಿರಿ ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಘರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗಾಡುತ್ತಿದ್ದಾನೆ.


ರಾಜನು ಗರ್ಜಿಸುವ ಸಿಂಹದಂತೆ ಭಯಂಕರನು, ಅವನನ್ನು ಕೆಣಕುವವನು ತನಗೇ ಕೆಡುಕುಮಾಡಿಕೊಳ್ಳುವನು.


ರಾಜನ ರೋಷವು ಸಿಂಹದ ಗರ್ಜನೆ, ಅವನ ದಯೆಯು ಪೈರಿನ ಇಬ್ಬನಿ.


ಮನಸ್ಸೆಯು ಯೆಹೂದ್ಯರನ್ನು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಲು ಪ್ರೇರೇಪಿಸಿದ್ದಲ್ಲದೆ ಯೆರೂಸಲೇಮನ್ನೆಲ್ಲಾ ನಿರಪರಾಧಿಗಳ ರಕ್ತದಿಂದ ತುಂಬಿಸಿದನು.


ತರುವಾಯ ಫರೋಹನು ತನ್ನ ಜನರಿಗೆ, “ಇಬ್ರಿಯರ ಗಂಡು ಕೂಸುಗಳನ್ನೆಲ್ಲಾ ನೈಲ್ ನದಿಯಲ್ಲಿ ಹಾಕಬೇಕು, ಹೆಣ್ಣುಕೂಸುಗಳನ್ನೆಲ್ಲಾ ಉಳಿಸಬೇಕು” ಎಂದು ಆಜ್ಞೆ ಮಾಡಿದನು.


ಮರಿಗಳನ್ನು ಕಳಕೊಂಡ ಕರಡಿಯಂತೆ ಅವರಿಗೆ ಎದುರು ಬಿದ್ದು ಅವರ ಎದೆಯನ್ನು ಸೀಳಿಬಿಡುವೆನು; ಅಲ್ಲೇ ಮೃಗರಾಜನಂತೆ ಅವರನ್ನು ನುಂಗುವೆನು; ಭೂಜಂತುಗಳು ಅವರನ್ನು ಹರಿದುಬಿಡುವವು.


ಎಫ್ರಾಯೀಮು ವ್ಯರ್ಥಾಚಾರಗಳನ್ನು ಅನುಸರಿಸಲು ಮನಸ್ಸುಮಾಡಿದ ಕಾರಣ, ಅದು ದೇವರ ನ್ಯಾಯತೀರ್ಪಿಗೆ ಗುರಿಯಾಗಿ ಹಿಂಸಿಸಲ್ಪಟ್ಟಿದೆ, ಜಜ್ಜಲ್ಪಟ್ಟಿದೆ.


ಮೂರ್ಖತನದಲ್ಲಿ ಮುಳುಗಿರುವ ಮೂಢನನ್ನು ಎದುರಾಗುವುದಕ್ಕಿಂತಲೂ, ಮರಿಗಳನ್ನು ಕಳೆದುಕೊಂಡ ಕರಡಿಯನ್ನು ಎದುರಾಗುವುದು ಲೇಸು.


ಮೆನಹೇಮನು ತಿರ್ಚದಿಂದ ತಿಪ್ಸಹುವಿಗೆ ಹೋದಾಗ ಅಲ್ಲಿಯವರು ತಮ್ಮ ಊರುಬಾಗಿಲನ್ನು ಅವನಿಗೆ ತೆರೆಯಲಿಲ್ಲ, ಆದುದರಿಂದ ಅವನು ಆ ಊರನ್ನು ಅದಕ್ಕೆ ಸೇರಿದ ಪ್ರದೇಶವನ್ನೂ ಹಾಳುಮಾಡಿ ಅದರ ನಿವಾಸಿಗಳನ್ನು ಸಂಹರಿಸಿದನು. ಅದರಲ್ಲಿದ್ದ ಎಲ್ಲಾ ಗರ್ಭಿಣಿಗಳ ಹೊಟ್ಟೆಯನ್ನು ಸೀಳಿಹಾಕಿಸಿದನು.


ಅವನು ಅವರ ಕಡೆಗೆ ತಿರುಗಿಕೊಂಡು ಯೆಹೋವನ ಹೆಸರಿನಲ್ಲಿ ಅವರನ್ನು ಶಪಿಸಿದನು. ಕೂಡಲೆ ಕಾಡಿನಿಂದ ಎರಡು ಹೆಣ್ಣು ಕರಡಿಗಳು ಬಂದು ಆ ಹುಡುಗರಲ್ಲಿ ನಲ್ವತ್ತೆರಡು ಮಂದಿಯನ್ನು ಹರಿದುಬಿಟ್ಟವು.


ಶಿಷ್ಟರ ವೃದ್ಧಿ ಜನರಿಗೆ ಉಲ್ಲಾಸ, ದುಷ್ಟನ ಆಳ್ವಿಕೆ ಜನರಿಗೆ ನರಳಾಟ.


ಐಗುಪ್ತರು ಇಸ್ರಾಯೇಲರಿಂದ ಕ್ರೂರವಾಗಿ ಸೇವೆಮಾಡಿಸಿಕೊಂಡರು.


ಯೆಹೋವನು ಆಳುತ್ತಿದ್ದ ದುಷ್ಟರ ಕೋಲನ್ನೂ, ಅರಸರ ದಂಡವನ್ನೂ ಮುರಿದುಬಿಟ್ಟನು.


ಜನಗಳನ್ನು ಕೋಪೋದ್ರೇಕದಿಂದ ಎಡೆಬಿಡದೆ ಹೊಡೆದು, ಜನಾಂಗಗಳನ್ನು ಸಿಟ್ಟಿನಿಂದ ತಡೆಯಿಲ್ಲದೆ ಹಿಂಸಿಸಿ, ಅಧೀನಮಾಡಿಕೊಂಡರು.


ಅವರೊಳಗಿನ ಮುಖ್ಯಾಧಿಕಾರಿಗಳು ಗರ್ಜಿಸುವ ಸಿಂಹಗಳು; ಅದರ ನ್ಯಾಯಾಧಿಪತಿಗಳು ಸಂಜೆಯ ತೋಳಗಳು; ಮರುದಿನ ಬೆಳಗ್ಗೆ ಕಡಿಯುವುದಕ್ಕೆ ಎಲುಬು ಸಹಾ ಬಿಡದ ಕ್ರೂರರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು