Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 28:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ದುರಾಶೆಯುಳ್ಳವನು ಜಗಳವನ್ನೆಬ್ಬಿಸುವನು, ಯೆಹೋವನಲ್ಲಿ ಭರವಸವಿಡುವವನು ಪುಷ್ಟನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅತ್ಯಾಸೆಪಡುವವನು ಜಗಳವೆಬ್ಬಿಸುವನು; ಸರ್ವೇಶ್ವರನಲ್ಲಿ ಭರವಸೆಯಿಟ್ಟವನು ಬಲಿಷ್ಠನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆಸೆಬಡುಕನು ಜಗಳವನ್ನೆಬ್ಬಿಸುವನು; ಯೆಹೋವನಲ್ಲಿ ಭರವಸವಿಡುವವನು ಪುಷ್ಟನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ದುರಾಶೆಯುಳ್ಳವನು ಜಗಳಗಳನ್ನು ಎಬ್ಬಿಸುತ್ತಾನೆ. ಯೆಹೋವನಲ್ಲಿ ಭರವಸೆ ಇಡುವವನಾದರೋ ಅಭಿವೃದ್ಧಿ ಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ದುರಾಶೆಯುಳ್ಳವನು ಕಲಹವನ್ನೆಬ್ಬಿಸುವನು; ಯೆಹೋವ ದೇವರಲ್ಲಿ ಭರವಸವಿಡುವವನು ಪುಷ್ಟನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 28:25
16 ತಿಳಿವುಗಳ ಹೋಲಿಕೆ  

ಸಂತುಷ್ಟಿಸಹಿತವಾದ ಭಕ್ತಿಯು ದೊಡ್ಡ ಲಾಭವೇ ಸರಿ.


ಉದಾರಿಯು ಪುಷ್ಟನಾಗುವನು, ನೀರು ಹಾಯಿಸುವವನಿಗೆ ನೀರು ಸಿಕ್ಕುವುದು.


ಹೆಮ್ಮೆಯ ಫಲವು ಕಲಹವೇ, ಬುದ್ಧಿವಾದಕ್ಕೆ ಕಿವಿಗೊಡುವವರಲ್ಲಿ ಜ್ಞಾನ.


ಸೋಮಾರಿಯ ಆಶೆಯು ವ್ಯರ್ಥ, ಉದ್ಯೋಗಿಯ ಆತ್ಮಕ್ಕೆ ಪುಷ್ಟಿ.


ದ್ವೇಷವು ಜಗಳಗಳನ್ನೆಬ್ಬಿಸುತ್ತದೆ, ಪ್ರೀತಿಯು ಪಾಪಗಳನ್ನೆಲ್ಲಾ ಮುಚ್ಚುತ್ತದೆ.


ಮನುಷ್ಯನ ಭಯ ಉರುಲು, ಯೆಹೋವನ ಭರವಸ ಉದ್ಧಾರ.


ಕೋಪಿಷ್ಠನು ಜಗಳವನ್ನೆಬ್ಬಿಸುವನು, ಕ್ರೋಧಶೀಲನು ದೋಷಭರಿತನು.


ಧರ್ಮನಿಂದಕನನ್ನು ಓಡಿಸಿಬಿಟ್ಟರೆ ಜಗಳವು ತೊಲಗುವುದು, ಹೌದು, ವ್ಯಾಜ್ಯವು ತೀರಿ ಅವಮಾನವು ಇಲ್ಲವಾಗುವುದು.


“ಧರ್ಮನಿಂದಕ” ಎನ್ನಿಸಿಕೊಳ್ಳುವವನು ಸೊಕ್ಕೇರಿದ ಅಹಂಕಾರಿಯಾಗಿ, ಗರ್ವ ಮತ್ತು ಮದದಿಂದ ಪ್ರವರ್ತಿಸುವನು.


ಹಸನ್ಮುಖ ಹೃದಯಕ್ಕೆ ಆನಂದ, ಶುಭಸಮಾಚಾರ ದೇಹಕ್ಕೆ ಆರೋಗ್ಯ.


ಕೋಪಿಷ್ಠನು ವ್ಯಾಜ್ಯವನ್ನೆಬ್ಬಿಸುವನು, ದೀರ್ಘಶಾಂತನು ಜಗಳವನ್ನು ಶಮನಪಡಿಸುವನು.


ಸೇನಾಧೀಶ್ವರನಾದ ಯೆಹೋವನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.


ಮತ್ತು ಯೆಹೋವನು ನಿಮ್ಮನ್ನು ನಿತ್ಯವೂ ನಡೆಸುತ್ತಾ, ಮರುಭೂಮಿಯಲ್ಲಿಯೂ ನಿಮ್ಮ ಆತ್ಮವನ್ನು ತೃಪ್ತಿಗೊಳಿಸಿ, ನಿಮ್ಮ ಎಲುಬುಗಳನ್ನು ಬಲಗೊಳಿಸುವನು; ನೀವು ತಂಪಾದ ತೋಟಕ್ಕೂ, ನೀರಿಗೆ ಮೋಸವಿಲ್ಲದ ಬುಗ್ಗೆಗೂ ಸಮಾನವಾಗುವಿರಿ.


ಯೆಹೋವನು ನೀತಿವಂತರನ್ನು ಹಸಿವೆಗೊಳಿಸನು, ದುಷ್ಟನ ಆಶೆಯನ್ನು ಭಂಗಪಡಿಸುತ್ತಾನೆ.


ಸೂರೆಮಾಡುವವನು ಸ್ವಂತ ಮನೆಯನ್ನು ಬಾಧಿಸುವನು. ಲಂಚವನ್ನೊಪ್ಪದವನು ಸುಖವಾಗಿ ಬಾಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು