Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 28:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಬಡವರಿಗೆ ದಾನಮಾಡುವವನು ಕೊರತೆಪಡನು, ಅವರನ್ನು ಕಂಡು ಕಾಣದಂತೆ ಇರುವವನು ಬಹುಶಾಪಕ್ಕೆ ಒಳಗಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಬಡವರಿಗೆ ಕೊಡುವವನು ಕೊರತೆಪಡನು; ಅವರನ್ನು ಕಂಡೂ ಕಾಣದಂತೆ ಇರುವವನು ಬಹುಶಾಪಗ್ರಸ್ಥನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಬಡವರಿಗೆ ದಾನಮಾಡುವವನು ಕೊರತೆಪಡನು; ಕಣ್ಣು ಮುಚ್ಚಿಕೊಳ್ಳುವವನು ಬಹುಶಾಪಕ್ಕೆ ಒಳಗಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಬಡವರಿಗೆ ಕೊಡುವವನು ತನಗೆ ಅಗತ್ಯವಾದ ಪ್ರತಿಯೊಂದನ್ನೂ ಹೊಂದಿಕೊಳ್ಳುವನು. ಬಡವರಿಗೆ ಸಹಾಯಮಾಡದವನಿಗೆ ಅನೇಕ ಶಾಪಗಳು ಬರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಬಡವರಿಗೆ ದಾನ ಮಾಡುವವನು, ಕೊರತೆ ಪಡುವುದಿಲ್ಲ; ಆದರೆ ತನ್ನ ಕಣ್ಣುಗಳನ್ನು ಮುಚ್ಚಿಕೊಳ್ಳುವವನಿಗೆ ಅನೇಕ ಶಾಪಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 28:27
14 ತಿಳಿವುಗಳ ಹೋಲಿಕೆ  

ಬಡವರಿಗೆ ದಯೆತೋರಿಸುವವನು ಯೆಹೋವನಿಗೆ ಸಾಲಕೊಡುವವನು, ಆ ಉಪಕಾರಕ್ಕೆ ಯೆಹೋವನೇ ಪ್ರತ್ಯುಪಕಾರ ಮಾಡುವನು.


ಒಬ್ಬನು ತನ್ನ ಧನವನ್ನು ಚೆಲ್ಲಿದರೂ ಅವನಿಗೆ ವೃದ್ಧಿ, ಮತ್ತೊಬ್ಬನು ನ್ಯಾಯವಾದದ್ದನ್ನು ಬಿಗಿಹಿಡಿದರೂ ಅವನಿಗೆ ಬಡತನ.


ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದ ಯಾವ ಊರಿನಲ್ಲಾದರೂ ಸ್ವದೇಶದವನಾದ ಬಡವನು ಇದ್ದರೆ, ನೀವು ಆ ಬಡ ಸಹೋದರನಿಗೆ ಮನಸ್ಸನ್ನು ಕಠಿಣಮಾಡಿಕೊಂಡು ಅವನಿಗೆ ಸಹಾಯಮಾಡದೆ ಇರಬಾರದು.


ನೀವು ಕೊಡುವಾಗ ಬೇಸರಗೊಳ್ಳದೆ ಉದಾರವಾದ ಮನಸ್ಸಿನಿಂದಲೇ ಕೊಡಬೇಕು. ಇದರಿಂದ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಕೆಲಸಗಳಲ್ಲಿಯೂ ಮತ್ತು ಪ್ರಯತ್ನಗಳಲ್ಲಿಯೂ ನಿಮ್ಮನ್ನು ಅಭಿವೃದ್ಧಿಪಡಿಸುವನು.


ದಯಾದೃಷ್ಟಿಯವನು ಆಶೀರ್ವಾದವನ್ನು ಪಡೆಯುವನು, ತನ್ನ ಆಹಾರವನ್ನು ಬಡವರಿಗೆ ಕೊಡುತ್ತಾನಲ್ಲವೆ.


ಧಾನ್ಯವನ್ನು ಬಿಗಿಹಿಡಿಯುವವನ ಮೇಲೆ ಜನರ ಶಾಪ, ಮಾರುವವನ ತಲೆಯ ಮೇಲೆ ಆಶೀರ್ವಾದ.


ಇದಲ್ಲದೆ ಪರೋಪಕಾರ ಮಾಡುವುದನ್ನು, ಬೇರೆಯವರಿಗೆ ಸಹಾಯ ಮಾಡುವುದನ್ನು ಮರೆಯಬೇಡಿರಿ. ಇವೇ ದೇವರಿಗೆ ಮೆಚ್ಚಿಕೆಯಾದ ಯಜ್ಞಗಳು.


ನೀವು ನನ್ನ ಕಡೆಗೆ ಪ್ರಾರ್ಥಿಸಲು ಕೈಯೆತ್ತುವಾಗ, ನಿಮ್ಮನ್ನು ನೋಡದಂತೆ ನನ್ನ ಕಣ್ಣುಗಳನ್ನು ಮರೆಮಾಡಿಕೊಳ್ಳುವೆನು. ಹೌದು, ನೀವು ಬಹಳ ಪ್ರಾರ್ಥನೆಗಳನ್ನು ಮಾಡಿದರೂ ನಾನು ಆಲಿಸುವುದಿಲ್ಲ. ನಿಮ್ಮ ಕೈಗಳಲ್ಲಿ ರಕ್ತವು ತುಂಬಿದೆ.


ಯಾವನು ಅಧರ್ಮಿಗೆ, “ನೀನು ಧರ್ಮಾತ್ಮನು” ಎಂದು ಹೇಳುತ್ತಾನೋ, ಅವನನ್ನು ಜನರು ಶಪಿಸುವರು, ಪ್ರಜೆಗಳು ದೂಷಿಸುವರು.


ದುಷ್ಟರು ಎದ್ದರೆ ಜನರು ಅಡಗಿಕೊಳ್ಳುವರು, ನಾಶನವಾದರೆ ಶಿಷ್ಟರು ವೃದ್ಧಿಯಾಗುವರು.


ಉದಾರಿಯು ಪುಷ್ಟನಾಗುವನು, ನೀರು ಹಾಯಿಸುವವನಿಗೆ ನೀರು ಸಿಕ್ಕುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು