Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 29:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಬಡವರನ್ನು ನ್ಯಾಯವಾಗಿ ಆಳ್ವಿಕೆ ಮಾಡುವ ರಾಜನ ಸಿಂಹಾಸನವು ಶಾಶ್ವತವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಬಡಬಗ್ಗರನ್ನು ನ್ಯಾಯವಾಗಿ ಆಳುವ ಅರಸನ ಸಿಂಹಾಸನ ಸದಾ ಸುಭದ್ರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಬಡವರನ್ನು ನ್ಯಾಯವಾಗಿ ಆಳುವ ರಾಜನ ಸಿಂಹಾಸನವು ಶಾಶ್ವತವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಬಡಜನರಿಗೆ ನ್ಯಾಯದೊರಕಿಸುವ ರಾಜನು ಬಹುಕಾಲ ಆಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅರಸನು ಬಡವರಿಗೆ ಪಕ್ಷಪಾತವಿಲ್ಲದೆ ನ್ಯಾಯತೀರಿಸಿದರೆ, ಅವನ ಸಿಂಹಾಸನವು ಎಂದೆಂದಿಗೂ ಸ್ಥಿರಗೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 29:14
18 ತಿಳಿವುಗಳ ಹೋಲಿಕೆ  

ರಾಜರು ಸಿಂಹಾಸನಕ್ಕೆ ಧರ್ಮವೇ ಆಧಾರವೆಂದು ತಿಳಿದು, ಅಧರ್ಮವನ್ನಾಚರಿಸಲು ಅಸಹ್ಯಪಡುವರು.


ಆದರೆ ಬಡವರಿಗೋಸ್ಕರ ನ್ಯಾಯವಾಗಿ ತೀರ್ಪುಮಾಡುವನು. ಲೋಕದ ದೀನರಿಗಾಗಿ ಧರ್ಮವನ್ನು ನಿರ್ಣಯಿಸುವನು. ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ದಂಡಿಸುವನು. ದುಷ್ಟನನ್ನು ತನ್ನ ತುಟಿಗಳ ಉಸಿರಿನಿಂದ ಕೊಲ್ಲುವನು.


ನ್ಯಾಯಪಾಲಕನಾದ ರಾಜನು ದೇಶವನ್ನು ವೃದ್ಧಿಗೆ ತರುವನು, ಅನ್ಯಾಯವಾಗಿ ತೆರಿಗೆಯನ್ನು ಕಸಕೊಳ್ಳುವವನು ದೇಶವನ್ನು ನಾಶಮಾಡುವನು.


ರಾಜನ ಕೃಪಾಸತ್ಯತೆಗಳು ಅವನನ್ನು ಕಾಯುವವು, ಅವನ ಕರುಣೆಯೇ ಅವನ ಸಿಂಹಾಸನಕ್ಕೆ ಆಧಾರ.


ವಿವೇಕಶೂನ್ಯನಾದ ಒಡೆಯನು ಮಹಾ ಹಿಂಸಕನು, ದೋಚಿಕೊಳ್ಳದವನು ದೀರ್ಘಾಯುಷ್ಯನು.


ರಾಜನ ಸಮ್ಮುಖದಿಂದ ದುಷ್ಟರನ್ನು ತೆಗೆದುಹಾಕಿದರೆ, ಅವನ ಸಿಂಹಾಸನವು ಧರ್ಮದಿಂದ ಸ್ಥಿರವಾಗುವುದು.


ನಿನ್ನ ಪ್ರೀತಿಸಂಕಲ್ಪವು ನಿತ್ಯವು ಸಿದ್ಧಿಗೆ ಬರುತ್ತಲೇ ಇರುವುದು; ಆಕಾಶದಲ್ಲಿ ನಿನ್ನ ಸತ್ಯತೆಯನ್ನು ಸ್ಥಾಪಿಸುವಿ ಎಂದು ತಿಳಿದುಕೊಂಡಿದ್ದೇನೆ.


ಆದಕಾರಣ, ಅರಸನೇ, ಈ ನನ್ನ ಬುದ್ಧಿವಾದವು ನಿನಗೆ ಒಪ್ಪಿಗೆಯಾಗಲಿ, ನೀನು ಧರ್ಮವನ್ನು ಆಚರಿಸಿ ನಿನ್ನ ಪಾಪಗಳನ್ನು ನಾಶಗೊಳಿಸು, ಬಡವರಿಗೆ ಕರುಣೆಯನ್ನು ತೋರಿಸಿ ನಿನ್ನ ಅಪರಾಧಗಳನ್ನು ಧ್ವಂಸಮಾಡು; ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾದೀತು” ಎಂದು ಅರಿಕೆ ಮಾಡಿದನು.


ದೀನದರಿದ್ರರ ವ್ಯಾಜ್ಯವನ್ನು ತೀರಿಸುತ್ತಿದ್ದನು; ಆಗ ಸುಖವಾಗಿತ್ತು. ನನ್ನನ್ನು ಅರಿಯುವುದೆಂದರೆ ಇದೇ ಎಂಬುದು ಯೆಹೋವನ ನುಡಿ.


ಕೊಬ್ಬಿ ಢಾಂಭಿಕರಾಗಿದ್ದಾರೆ; ಇದಲ್ಲದೆ ದುಷ್ಕೃತ್ಯಗಳಲ್ಲಿ ನಿಸ್ಸೀಮರಾಗಿದ್ದಾರೆ. ಅನಾಥರ ವೃದ್ಧಿಗಾಗಿ ಅವರ ಪರವಾಗಿ ವ್ಯಾಜ್ಯ ನಡೆಸರು, ದಿಕ್ಕಿಲ್ಲದವರಿಗೆ ನ್ಯಾಯದೊರಕಿಸರು.


ಸದಾಚಾರವನ್ನು ಅಭ್ಯಾಸ ಮಾಡಿಕೊಳ್ಳಲು ಕಲಿಯಿರಿ, ನ್ಯಾಯವನ್ನು ಅನುಸರಿಸಿ ನಡೆಯಿರಿ. ಹಿಂಸೆಗೆ ಒಳಗಾದವನಿಗೆ ಸಹಾಯಮಾಡಿರಿ. ಅನಾಥನಿಗೆ ನ್ಯಾಯತೀರಿಸಿರಿ. ವಿಧವೆಯ ಪಕ್ಷವಾಗಿ ವಾದಿಸಿರಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು