Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 29:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಜ್ಞಾನವನ್ನು ಪ್ರೀತಿಸುವವನು ತಂದೆಯನ್ನು ಹರ್ಷಗೊಳಿಸುವನು, ವೇಶ್ಯೆಯ ಸಂಗಡಿಗನು ಆಸ್ತಿಯನ್ನು ಹಾಳುಮಾಡಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಜ್ಞಾನಪ್ರಿಯ ಮಗನಿಂದ ತಂದೆಗೆ ಸಂತೋಷ; ವೇಶ್ಯೆಯರ ಸಂಗದಿಂದ ಆಸ್ತಿ ವಿನಾಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಜ್ಞಾನಾಸಕ್ತನು ತಂದೆಯನ್ನು ಹರ್ಷಗೊಳಿಸುವನು; ವೇಶ್ಯಾಸಂಗಿಯು ಆಸ್ತಿಯನ್ನು ಹಾಳುಮಾಡಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಜ್ಞಾನವನ್ನು ಪ್ರೀತಿಸುವವನ ತಂದೆ ಬಹು ಸಂತೋಷವಾಗಿರುವನು. ಆದರೆ ಸೂಳೆಯರ ಸಹವಾಸ ಮಾಡುವವನು ತನ್ನ ಐಶ್ವರ್ಯವನ್ನು ಕಳೆದುಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಜ್ಞಾನಪ್ರಿಯನು ತಂದೆಗೆ ಆನಂದ ಆದರೆ ವೇಶ್ಯೆಯರ ಸಹವಾಸದಿಂದ ಆಸ್ತಿಯ ವಿನಾಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 29:3
14 ತಿಳಿವುಗಳ ಹೋಲಿಕೆ  

ಮಗನೇ, ಜ್ಞಾನವನ್ನು ಪಡೆದುಕೊಂಡು ನನ್ನ ಹೃದಯವನ್ನು ಸಂತೋಷಪಡಿಸು, ಹಾಗಾದರೆ, ನನ್ನನ್ನು ದೂರುವವನಿಗೆ ನಾನು ಉತ್ತರ ಕೊಡಲಾಗುವುದು.


ಆದರೆ ಸೂಳೆಯರನ್ನು ಕಟ್ಟಿಕೊಂಡು ನಿನ್ನ ಬದುಕನ್ನು ಹಾಳುಮಾಡಿದ ಈ ನಿನ್ನ ಮಗನು ಬಂದಾಗ ಕೊಬ್ಬಿದ ಕರುವನ್ನು ಇವನಿಗೆ ಕೊಯ್ಸಿದಿಯಲ್ಲಾ’ ಎಂದು ಉತ್ತರಕೊಟ್ಟನು.


ಜ್ಞಾನವಂತನಾದ ಮಗನು ತಂದೆಯನ್ನು ಉಲ್ಲಾಸಗೊಳಿಸುವನು, ಜ್ಞಾನಹೀನನು ತಾಯಿಯನ್ನು ತಿರಸ್ಕರಿಸುವನು.


ಜ್ಞಾನಿಯಾದ ಮಗನಿಂದ ತಂದೆಗೆ ಆನಂದ, ಅಜ್ಞಾನಿಯಾದ ಮಗನಿಂದ ತಾಯಿಗೆ ದುಃಖ.


ಸ್ವಲ್ಪ ದಿನದ ಮೇಲೆ ಆ ಕಿರಿಯ ಮಗನು ತನ್ನ ಪಾಲನ್ನೆಲ್ಲಾ ಕೂಡಿಸಿಕೊಂಡು ದೂರದೇಶಕ್ಕೆ ಹೊರಟುಹೋಗಿ ಅಲ್ಲಿ ಪಟಿಂಗನಾಗಿ ಬದುಕಿ ತನ್ನ ಆಸ್ತಿಯನ್ನು ಹಾಳುಮಾಡಿಕೊಂಡನು.


ಧರ್ಮೋಪದೇಶವನ್ನು ಕೈಕೊಳ್ಳುವವನು ವಿವೇಕಿಯಾದ ಮಗನು, ಹೊಟ್ಟೆಬಾಕರ ಗೆಳೆಯನು ತಂದೆಯ ಮಾನವನ್ನು ಕಳೆಯುವನು.


ವೇಶ್ಯೆಯಿಂದ ಯಾವನಿಗಾದರೂ ಒಂದು ರೊಟ್ಟಿ ಮಾತ್ರ ಗತಿಯಾಗುವುದು, ಪರಸ್ತ್ರೀಯೋ ಅಮೂಲ್ಯವಾದ ಜೀವವನ್ನು ಬೇಟೆಯಾಡುವಳು.


ಭೋಗಾಸಕ್ತನು ಕೊರತೆಪಡುವನು, ದ್ರಾಕ್ಷಾರಸವನ್ನು ಮತ್ತು ಸುಗಂಧ ತೈಲವನ್ನು ಆಶಿಸುವವನು ನಿರ್ಭಾಗ್ಯನಾಗುವನು.


ದುಡಿದು ಹೊಲಗೇಯುವವನಿಗೆ ಹೊಟ್ಟೆ ತುಂಬಾ ಅನ್ನ, ವ್ಯರ್ಥ ಕಾರ್ಯಾಸಕ್ತನಿಗೆ ಹೊಟ್ಟೆತುಂಬಾ ಬಡತನ.


ಕಂದಾ, ನಿನ್ನ ಮನಸ್ಸಿಗೆ ಜ್ಞಾನವುಂಟಾದರೆ ನನ್ನ ಮನಸ್ಸಿಗೂ ಉಲ್ಲಾಸವಾಗುವುದು.


ಜ್ಞಾನಿಯ ನಿವಾಸದಲ್ಲಿ ಎಣ್ಣೆಯು ಮತ್ತು ಶ್ರೇಷ್ಠ ಸಂಪತ್ತು ಇರುವವು, ಜ್ಞಾನಹೀನನು ಇದ್ದದ್ದನ್ನೆಲ್ಲಾ ನುಂಗಿಬಿಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು