Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 3:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆಕೆಯ ದಾರಿಗಳು ಸುಖಕರವಾಗಿವೆ, ಆಕೆಯ ಮಾರ್ಗಗಳೆಲ್ಲಾ ಸಮಾಧಾನವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆಕೆಯ ದಾರಿ ಸುಖಕರ, ಆಕೆಯ ಮಾರ್ಗ ಕ್ಷೇಮಕರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆಕೆಯ ದಾರಿಗಳು ಸುಖಕರವಾಗಿವೆ, ಆಕೆಯ ಮಾರ್ಗಗಳೆಲ್ಲಾ ಸಮಾಧಾನವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಜ್ಞಾನವು ನಿನ್ನ ಜೀವನವನ್ನು ಸುಖಕರವನ್ನಾಗಿ ಮಾಡುತ್ತದೆ; ಸಮಾಧಾನವನ್ನು ಬರಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಜ್ಞಾನದ ಮಾರ್ಗಗಳು ಸಂತೋಷಕರ; ಅದರ ದಾರಿಗಳೆಲ್ಲಾ ಶಾಂತಿಯ ದಾರಿಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 3:17
19 ತಿಳಿವುಗಳ ಹೋಲಿಕೆ  

ಅದು ಕತ್ತಲಲ್ಲಿಯೂ, ಮರಣಾಂಧಕಾರದಲ್ಲಿಯೂ ವಾಸಿಸುತ್ತಿದ್ದ ನಮಗೆ ಬೆಳಕನ್ನು ಕೊಟ್ಟು ನಮ್ಮ ಕಾಲುಗಳನ್ನು ಸಮಾಧಾನದ ಮಾರ್ಗದಲ್ಲಿ ಸೇರಿಸಿ ನಡಿಸುವುದು.”


ಸ್ಥಿರಚಿತ್ತನನ್ನು ಶಾಂತಿಯಲ್ಲಿ ನೆಲೆಗೊಳಿಸಿ ಕಾಯುವಿ; ಅವನಿಗೆ ನಿನ್ನಲ್ಲಿ ಭರವಸವಿದೆ.


ಜ್ಞಾನವು ನಿನ್ನ ಹೃದಯದೊಳಗೆ ಪ್ರವೇಶಿಸುವುದು, ತಿಳಿವಳಿಕೆಯು ನಿನ್ನ ಆತ್ಮಕ್ಕೆ ಹಿತಕರವಾಗಿರುವುದು.


ನಿನ್ನ ಧರ್ಮಶಾಸ್ತ್ರವನ್ನು ಪ್ರೀತಿಸುವವರಿಗೆ, ಸಂಪೂರ್ಣ ಸಮಾಧಾನವಿರುತ್ತದೆ, ಅಂಥವರಿಗೆ ವಿಘ್ನಕರವಾದದ್ದೇನೂ ಇರುವುದಿಲ್ಲ.


ನೀನು ಆ ಮಾತುಗಳನ್ನು ಅಂತರಂಗದಲ್ಲಿ ಕಾಪಾಡುತ್ತಾ, ತುಟಿಗಳಲ್ಲಿ ಸಿದ್ಧಪಡಿಸಿಕೊಂಡಿದ್ದರೆ ಎಷ್ಟೋ ರಮ್ಯ.


ಸರ್ವಸಂಪತ್ತಿನಲ್ಲಿ ಹೇಗೋ, ಹಾಗೆಯೇ ನಿನ್ನ ಕಟ್ಟಳೆಯ ಮಾರ್ಗದಲ್ಲಿ ಆನಂದಿಸುತ್ತೇನೆ.


ಯೆಹೋವನಿಗೆ ಸ್ತೋತ್ರ! ಯಾರು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ, ಆತನ ಆಜ್ಞೆಗಳಲ್ಲಿ ಅತ್ಯಾನಂದಪಡುವನೋ ಅವನೇ ಧನ್ಯನು.


ಯೆಹೋವನು ಮನುಷ್ಯರ ಬಾಯಿಯ ಯೋಗ್ಯಫಲವಾಗಿರುವ ಸ್ತೋತ್ರವನ್ನು ಉಂಟುಮಾಡುವವನಾಗಿ, “ದೂರದವನಿಗೂ ಸಮೀಪದವನಿಗೂ ಕ್ಷೇಮವಿರಲಿ, ಸುಕ್ಷೇಮವಿರಲಿ, ನಾನು ಅವರನ್ನು ಸ್ವಸ್ಥಮಾಡುವೆನು” ಎಂದು ಹೇಳುತ್ತಾನೆ.


ಯೆಹೋವನು ಒಬ್ಬನ ನಡತೆಗೆ ಮೆಚ್ಚಿದರೆ, ಅವನ ಶತ್ರುಗಳನ್ನೂ ಮಿತ್ರರನ್ನಾಗಿ ಮಾಡುವನು.


ಯೆಹೋವನೇ, ನಿನ್ನಿಂದುಂಟಾಗುವ ರಕ್ಷಣೆಯನ್ನು ಕೋರುತ್ತೇನೆ, ನಿನ್ನ ಧರ್ಮಶಾಸ್ತ್ರವೇ ನನ್ನ ಆನಂದವು.


ನಿನ್ನ ನುಡಿಗಳು ನನ್ನ ನಾಲಿಗೆಗೆ ಎಷ್ಟೋ ರುಚಿಯಾಗಿವೆ, ಅವು ನನ್ನ ಬಾಯಿಗೆ ಜೇನು ತುಪ್ಪಕ್ಕಿಂತಲೂ ಸಿಹಿಯಾಗಿವೆ.


ನಿನ್ನ ಆಜ್ಞೆಗಳಲ್ಲಿ ಆನಂದಪಡುತ್ತೇನೆ, ಅವು ನನಗೆ ಇಷ್ಟವಾಗಿವೆ.


ಆದರೆ ದೀನರು ದೇಶವನ್ನು ಅನುಭವಿಸುವರು; ಅವರು ಮಹಾಸೌಖ್ಯದಿಂದ ಆನಂದಿಸುವರು.


ಯೆಹೋವನ ನಿಬಂಧನೆ ಮತ್ತು ಆಜ್ಞೆಗಳನ್ನು ಕೈಕೊಂಡು ನಡೆಯುವವರಿಗೆ, ಆತನ ಎಲ್ಲಾ ಮಾರ್ಗಗಳು ಕೃಪೆಯೂ, ಸತ್ಯತೆಯುಳ್ಳವು.


ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರೊಂದಿಗೆ ನಮಗೆ ಸಮಾಧಾನವುಂಟು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು