Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 3:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ನೆರೆಯವನಿಗೆ ಕೇಡನ್ನು ಕಲ್ಪಿಸಬಾರದು, ಅವನು ನಿನ್ನ ಪಕ್ಕದಲ್ಲಿ ನಂಬಿಕೆಯಿಂದ ವಾಸಮಾಡುತ್ತಾನಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಕೇಡನ್ನು ಬಗೆಯಬೇಡ ನೆರೆಯವನಿಗೆ, ಪಕ್ಕದಲ್ಲೆ ನಂಬಿಕೆಯಿಂದ ವಾಸಿಸುವವನಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ನೆರೆಯವನಿಗೆ ಕೇಡನ್ನು ಕಲ್ಪಿಸಬಾರದು, ಅವನು ನಿನ್ನ ಪಕ್ಕದಲ್ಲಿ ನಂಬಿಕೆಯಿಂದ ವಾಸಮಾಡುತ್ತಾನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ನಿನ್ನ ನೆರೆಯವನಿಗೆ ಕೇಡನ್ನು ಕಲ್ಪಿಸಬೇಡ. ನಿನ್ನ ಸುರಕ್ಷತೆಗಾಗಿಯೇ ನಿನ್ನ ನೆರೆಯವನ ಸಮೀಪದಲ್ಲಿ ವಾಸಿಸುತ್ತಿದ್ದೀಯಲ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ನಿನ್ನ ನೆರೆಯವನು ಭರವಸೆಯಿಂದ ನಿನ್ನ ಪಕ್ಕದಲ್ಲಿ ವಾಸಮಾಡುತ್ತಿರುವಾಗ, ಅವನಿಗೆ ವಿರೋಧವಾಗಿ ಕೇಡನ್ನು ಕಲ್ಪಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 3:29
11 ತಿಳಿವುಗಳ ಹೋಲಿಕೆ  

ಅವನ ಮನಸ್ಸಿನಲ್ಲಿರುವುದು ದ್ರೋಹವೇ; ಯಾವಾಗಲೂ ಕೇಡನ್ನು ಕಲ್ಪಿಸುತ್ತಾನೆ, ಜಗಳದ ಬೀಜವನ್ನು ಬಿತ್ತುತ್ತಾನೆ.


ದುರಾಲೋಚನೆಗಳನ್ನು ಕಲ್ಪಿಸುವ ಹೃದಯ, ಕೇಡುಮಾಡಲು ತ್ವರೆಪಡುವ ಕಾಲು,


ಇಗೋ, ಅವರು ನನ್ನ ಜೀವಕ್ಕೆ ಹೊಂಚುಹಾಕುತ್ತಾರೆ; ಬಲಿಷ್ಠರು ನನಗೆ ವಿರುದ್ಧವಾಗಿ ಗುಂಪುಕೂಡಿದ್ದಾರೆ. ಯೆಹೋವನೇ, ನಾನು ನಿರ್ದೋಷಿಯೂ ನಿರಪರಾಧಿಯೂ ಅಲ್ಲವೇ!


ಆ ದ್ರೋಹಿಯಾದರೋ ತನ್ನೊಡನೆ ಸಮಾಧಾನದಿಂದಿದ್ದವರ ಮೇಲೆ ವಿರುದ್ಧವಾಗಿ ಕೈಯೆತ್ತಿ ತಾನು ಮಾಡಿಕೊಂಡ ಒಡಂಬಡಿಕೆಯನ್ನು ಭಂಗಪಡಿಸಿದ್ದಾನೆ.


ಅವರ ಮಾತುಗಳು ಸಮಾಧಾನಕರವಾದವುಗಳಲ್ಲ; ದೇಶದ ಸಾಧುಜನರನ್ನು ಕೆಡಿಸುವುದಕ್ಕೆ ಮೋಸವನ್ನು ಕಲ್ಪಿಸುತ್ತಾರೆ.


ಕುಯುಕ್ತಿಯುಳ್ಳವರು ದಾರಿತಪ್ಪಿದವರೇ ಸರಿ, ಒಳ್ಳೆಯದನ್ನು ಕಲ್ಪಿಸುವವರು ಪ್ರೀತಿಸತ್ಯತೆಗಳಿಗೆ ಪಾತ್ರರು.


ನಿಮ್ಮಲ್ಲಿ ಯಾವನೂ ತನ್ನ ಹೃದಯದಲ್ಲಿ ನೆರೆಯವನಿಗೆ ಕೇಡನ್ನು ಬಗೆಯದಿರಲಿ; ಸುಳ್ಳು ಸಾಕ್ಷಿಗೆ ಎಂದೂ ಸಂತೋಷಪಡಬೇಡಿರಿ; ನಾನು ಇವುಗಳನ್ನೆಲ್ಲಾ ದ್ವೇಷಿಸುವವನಾಗಿದ್ದೇನೆ; ಇದು ಯೆಹೋವನ ನುಡಿ.”


ಒಬ್ಬರಿಗೊಬ್ಬರು ಪ್ರೀತಿ, ಕರುಣೆಗಳನ್ನು ತೋರಿಸಿರಿ; ವಿಧವೆ, ಅನಾಥ, ವಿದೇಶಿ, ದರಿದ್ರರಿಗೂ ಅನ್ಯಾಯಮಾಡಬೇಡಿರಿ; ನಿಮ್ಮಲ್ಲಿ ಯಾವನೂ ತನ್ನ ಸಹೋದರನಿಗೆ ಕೇಡನ್ನು ಬಗೆಯದಿರಲಿ.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು