Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 3:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಿನ್ನ ಆದಾಯದಿಂದಲೂ, ಬೆಳೆಯ ಪ್ರಥಮಫಲದಿಂದಲೂ ಯೆಹೋವನನ್ನು ಸನ್ಮಾನಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಿನ್ನ ಆಸ್ತಿಯನ್ನರ್ಪಿಸಿ ಸರ್ವೇಶ್ವರನನ್ನು ಸನ್ಮಾನಿಸು, ನಿನ್ನ ಬೆಳೆಯ ಪ್ರಥಮ ಫಲವನ್ನು ಕಾಣಿಕೆಯಾಗಿಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಿನ್ನ ಆದಾಯದಿಂದಲೂ ಬೆಳೆಯ ಪ್ರಥಮಫಲದಿಂದಲೂ ಯೆಹೋವನನ್ನು ಸನ್ಮಾನಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಿನಗೆ ಬರುವ ಆದಾಯದಿಂದಲೂ ಬೆಳೆಯ ಪ್ರಥಮ ಫಲದಿಂದಲೂ ಯೆಹೋವನನ್ನು ಸನ್ಮಾನಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಿನ್ನ ಆಸ್ತಿಯಿಂದಲೂ ನಿನ್ನ ಎಲ್ಲಾ ಬೆಳೆಯ ಪ್ರಥಮ ಫಲದಿಂದಲೂ ಯೆಹೋವ ದೇವರನ್ನು ಸನ್ಮಾನಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 3:9
30 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿ ಪ್ರತಿಯೊಬ್ಬನು ತನಗೆ ಬಂದಂಥ ಸಂಪಾದನೆಯಲ್ಲಿ ಸಾಧ್ಯವಾದಷ್ಟನ್ನು ವಾರದ ಮೊದಲನೆಯ ದಿನದಲ್ಲಿ ಸಂಗ್ರಹಿಸಿ ತನ್ನ ಮನೆಯಲ್ಲಿಟ್ಟುಕೊಂಡಿರಬೇಕು. ಇದರಿಂದ ನಾನು ಬಂದಾಗ ಹಣ ಸಂಗ್ರಹಣೆ ಮಾಡುವ ಅಗತ್ಯವಿರುವುದಿಲ್ಲ.


ನಿಮ್ಮ ಬೆಳೆಯ ಪ್ರಥಮಫಲದಲ್ಲಿ ಅತಿ ಶ್ರೇಷ್ಠವಾದದ್ದನ್ನು ನಿಮ್ಮ ದೇವರಾದ ಯೆಹೋವನ ಮಂದಿರಕ್ಕೆ ತರಬೇಕು. ಹೋತ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.


ಬಡವರನ್ನು ಹಿಂಸಿಸುವವನು ಸೃಷ್ಟಿಕರ್ತನನ್ನು ಹೀನೈಸುವನು, ಗತಿಯಿಲ್ಲದವರನ್ನು ಕರುಣಿಸುವವನು ಆತನನ್ನು ಘನಪಡಿಸುವನು.


ನಿಮ್ಮ ಕಣದಿಂದ ಹಾಗೂ ದ್ರಾಕ್ಷಾಲತೆಯಿಂದ ನನಗೆ ಸಲ್ಲಿಸತಕ್ಕದ್ದನ್ನು ಸಮರ್ಪಿಸುವುದಕ್ಕೆ ತಡಮಾಡಬಾರದು. ನಿಮ್ಮ ಚೊಚ್ಚಲು ಗಂಡು ಮಕ್ಕಳನ್ನು ನನಗೆ ಸಮರ್ಪಿಸಬೇಕು.


ಭೂಮಿಯ ಪ್ರಥಮ ಫಲಗಳಲ್ಲಿ ಶ್ರೇಷ್ಠವಾದುದನ್ನು ನಿಮ್ಮ ದೇವರಾದ ಯೆಹೋವನ ಮಂದಿರಕ್ಕೆ ತರಬೇಕು. ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಕೂಡದು.”


ಇದಲ್ಲದೆ ನಾನು ಸ್ತಂಭವಾಗಿ ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗುವುದು. ಆಗ ನೀನು ನನಗೆ ಕೊಡುವುದರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ನಿನಗೆ ನಾನು ಖಂಡಿತವಾಗಿ ಕೊಡುವೆನು” ಎಂದು ಹರಕೆಮಾಡಿಕೊಂಡನು.


ಅವನು ತನ್ನ ದೇವರ ಒಲುಮೆಯನ್ನು ಪಡೆದುಕೊಳ್ಳುವುದಕ್ಕಾಗಿ ದೇವಾಲಯದ ಸೇವೆ ಮಾಡುವ, ಕಾರ್ಯದಲ್ಲಿಯೂ ಧರ್ಮಶಾಸ್ತ್ರವಿಧಿಗಳ ಸಂಬಂಧದಲ್ಲಿಯೂ, ತಾನು ಪ್ರಾರಂಭಿಸಿದ ಎಲ್ಲಾ ಕಾರ್ಯಗಳನ್ನು ಯಥಾರ್ಥಚಿತ್ತದಿಂದಲೂ ಪ್ರಾಮಾಣಿಕನಾಗಿಯೂ ನಡೆದುಕೊಂಡು ಕೃತಾರ್ಥನಾದನು.


ನಮ್ಮ ಕಣಜಗಳು ಸಕಲವಿಧವಾದ ಧಾನ್ಯಗಳಿಂದ ತುಂಬಿರುವವು, ನಮ್ಮ ಹೊಲಗಳಲ್ಲಿರುವ ಕುರಿಗಳು ಸಾವಿರಾರು ಮರಿಗಳನ್ನು ಈಯುವವು.


ಉದಾರಿಯು ಪುಷ್ಟನಾಗುವನು, ನೀರು ಹಾಯಿಸುವವನಿಗೆ ನೀರು ಸಿಕ್ಕುವುದು.


ನೀನು ನನಗೆ ಹೋಮಕ್ಕಾಗಿ ಕುರಿ ಮೇಕೆಗಳನ್ನು ತಂದು ಯಜ್ಞಗಳಿಂದ ನನ್ನನ್ನು ಘನಪಡಿಸಲಿಲ್ಲ. ಕಾಣಿಕೆಗಳನ್ನು ಕೇಳಿ ನಿನ್ನನ್ನು ನಾನು ತೊಂದರೆಪಡಿಸಲಿಲ್ಲ, ಧೂಪಕ್ಕಾಗಿ ನಿನ್ನನ್ನು ಬೇಸರಗೊಳಿಸಲಿಲ್ಲ.


ಅದಲ್ಲದೆ ನೀವು ಬಿತ್ತಿದ ಹೊಲದಲ್ಲಿ ಪ್ರಥಮಫಲವು ದೊರೆತಾಗ ಸುಗ್ಗಿಯ ಹಬ್ಬವನ್ನು ಆಚರಿಸಬೇಕು. ಹೊಲ ತೋಟಗಳ ಬೆಳೆಯನ್ನೂ ಕೂಡಿಸುವಾಗ ಅಂದರೆ ವರ್ಷದ ಕೊನೆಯಲ್ಲಿ ಸುಗ್ಗಿ ಹಬ್ಬವನ್ನು ಆಚರಿಸಬೇಕು.


ಐದನೆಯ ವರ್ಷದಲ್ಲಿ ಅದರಿಂದ ಉಂಟಾಗುವ ಆದಾಯವು ನಿಮ್ಮದೇ ಆಗಿರುವುದು; ಅದರ ಫಲಗಳನ್ನು ನೀವು ತಿನ್ನಬಹುದು. ನಾನು ನಿಮ್ಮ ದೇವರಾದ ಯೆಹೋವನು.


ನೀವು ಕಣದಲ್ಲಿ ತುಳಿಸಿದ ದವಸದಲ್ಲಿ ಸ್ವಲ್ಪವನ್ನು ಯೆಹೋವನದೆಂದು ಪ್ರತ್ಯೇಕಿಸುವ ಪ್ರಕಾರವೇ ಕಣಕದಿಂದ ಮಾಡುವ ಮೊದಲನೆಯ ರೊಟ್ಟಿಯನ್ನೂ ಕಾಣಿಕೆಯಾಗಿ ಪ್ರತ್ಯೇಕಿಸಬೇಕು.


ಆಗ ಊರಿನಲ್ಲಿರುವ ಅನ್ಯದೇಶದವರೂ, ಅನಾಥರು, ವಿಧವೆಯರೂ ಮತ್ತು ನಿಮ್ಮೊಡನೆ ಸ್ವತ್ತನ್ನು ಹೊಂದದೆಹೋದ ಲೇವಿಯರೂ ಊಟಮಾಡಿ ಸಂತೋಷವಾಗಿರಲಿ. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಮಾಡುವನು.


ಚಾದೋಕ್ ಸಂತಾನದ ಮಹಾಯಾಜಕನಾದ ಅಜರ್ಯನು ಅವನಿಗೆ, “ಜನರು ದೇವರಾದ ಯೆಹೋವನಿಗೋಸ್ಕರ ನೈವೇದ್ಯಕ್ಕಾಗಿ ಪ್ರತ್ಯೇಕಿಸತಕ್ಕದ್ದನ್ನು ಆತನ ಆಲಯಕ್ಕೆ ತಂದಂದಿನಿಂದ ಯೆಹೋವನು ತನ್ನ ಪ್ರಜೆಗಳಿಗೆ ಸಮೃದ್ಧಿಯಾಗಿ ಅನುಗ್ರಹಿಸಿದ್ದಾನೆ. ನಾವು ಉಂಡು ತೃಪ್ತರಾಗಿ ಇನ್ನೂ ಇಷ್ಟು ದೊಡ್ಡ ರಾಶಿಯನ್ನು ಉಳಿಸಿಕೊಂಡಿರುತ್ತಾರೆ” ಎಂದನು.


ಹಾಗೆಯೇ ಎರಡು ತಲಾಂತು ಹೊಂದಿದವನು ಇನ್ನೂ ಎರಡು ಸಂಪಾದಿಸಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು