Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 30:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಳಿನ ಮೇಲೆ ದಣಿಗೆ ದೂರನ್ನು ಹೇಳಬೇಡ, ಅವನು ಶಪಿಸಾನು, ನಿನ್ನಲ್ಲೇ ದೋಷವು ಕಂಡು ಬಂದೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ದಾಸನ ವಿರುದ್ಧ ದಣಿಗೆ ದೂರು ಹೇಳಬೇಡ; ಅವನು ನಿನ್ನನ್ನು ಶಪಿಸಾನು, ನಿನ್ನಲ್ಲೆ ದೋಷ ಕಂಡುಬಂದೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆಳಿನ ಮೇಲೆ ದಣಿಗೆ ದೂರನ್ನು ಹೇಳಬೇಡ; ಅವನು ಶಪಿಸಾನು; ನಿನ್ನಲ್ಲೇ ದೋಷವು ಕಂಡುಬಂದೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಸೇವಕನ ಬಗ್ಗೆ ಯಜಮಾನನಿಗೆ ಚಾಡಿ ಹೇಳಬೇಡ. ನೀನು ಹೇಳಿದರೆ, ಅವನು ನಿನ್ನನ್ನು ಶಪಿಸುವನು; ಆ ಶಾಪದಿಂದ ನೀನು ಸಂಕಟಪಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ಕೆಲಸಗಾರರ ವಿಷಯವಾಗಿ ಅವನ ಯಜಮಾನನಿಗೆ ದೂರು ಹೇಳಬೇಡ; ಇದರಿಂದ ಆ ಕೆಲಸಗಾರ ನಿನ್ನನ್ನು ಶಪಿಸಾನು, ಆಗ ನೀನು ದೋಷಿಯಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 30:10
18 ತಿಳಿವುಗಳ ಹೋಲಿಕೆ  

ಮತ್ತೊಬ್ಬನ ಸೇವಕನ ವಿಷಯವಾಗಿ ತೀರ್ಪುಮಾಡುವುದಕ್ಕೆ ನೀನು ಯಾರು? ಅವನು ನಿರ್ದೋಷಿಯಾಗಿ ನಿಂತರೂ, ದೋಷಿಯಾಗಿ ಬಿದ್ದರೂ ಅದು ಅವನ ಯಜಮಾನನಿಗೇ ಸೇರಿದ್ದು. ಅವನು ನಿರ್ದೊಷಿಯಾಗಿ ನಿಲ್ಲಿಸಲ್ಪಡುವನು; ಅವನನ್ನು ನಿಲ್ಲಿಸುವುದಕ್ಕೆ ಕರ್ತನು ಶಕ್ತನಾಗಿದ್ದಾನೆ.


ಆಡುವ ಮಾತುಗಳನ್ನೆಲ್ಲಾ ಲಕ್ಷ್ಯಕ್ಕೆ ತಾರದಿರು, ನಿನ್ನ ಆಳು ನಿನ್ನನ್ನು ಶಪಿಸುವುದು ಕಿವಿಗೆ ಬಿದ್ದೀತು.


ಅನಂತರ ರಾಜನು ಆಜ್ಞಾಪಿಸಲು ದಾನಿಯೇಲನ ಮೇಲೆ ದೂರು ಹೊರಿಸಿದವರನ್ನು ತಂದು ಅವರನ್ನೂ, ಅವರ ಹೆಂಡತಿ ಮಕ್ಕಳನ್ನು ಸಿಂಹಗಳ ಗವಿಯಲ್ಲಿ ಹಾಕಿಬಿಟ್ಟರು. ಅವರು ಗವಿಯ ತಳವನ್ನು ಮುಟ್ಟುವುದರೊಳಗೆ ಸಿಂಹಗಳು ಅವರ ಮೇಲೆ ಹಾರಿ, ಅವರ ಎಲ್ಲಾ ಎಲುಬುಗಳನ್ನು ಚೂರುಚೂರು ಮಾಡಿದವು.


ಆಗ ಅವರು ರಾಜನ ಸನ್ನಿಧಿಯಲ್ಲಿ, “ರಾಜನೇ, ಯೆಹೂದದಿಂದ ಸೆರೆಯಾಗಿ ತಂದವರಲ್ಲಿ ಒಬ್ಬನಾದ ಆ ದಾನಿಯೇಲನು ನಿನ್ನನ್ನಾಗಲಿ, ನಿನ್ನ ಹಸ್ತಾಕ್ಷರದ ನಿಬಂಧನೆಯನ್ನಾಗಲಿ, ಲಕ್ಷ್ಯಕ್ಕೆ ತಾರದೆ ದಿನಕ್ಕೆ ಮೂರಾವರ್ತಿ ಅವನ ದೇವರಿಗೆ ಪ್ರಾರ್ಥನೆ ಮಾಡುತ್ತಿದ್ದಾನೆ” ಎಂದು ಅರಿಕೆ ಮಾಡಿದರು.


ಬಡವರಿಗೆ ದಾನಮಾಡುವವನು ಕೊರತೆಪಡನು, ಅವರನ್ನು ಕಂಡು ಕಾಣದಂತೆ ಇರುವವನು ಬಹುಶಾಪಕ್ಕೆ ಒಳಗಾಗುವನು.


ಧಾನ್ಯವನ್ನು ಬಿಗಿಹಿಡಿಯುವವನ ಮೇಲೆ ಜನರ ಶಾಪ, ಮಾರುವವನ ತಲೆಯ ಮೇಲೆ ಆಶೀರ್ವಾದ.


ಅನಂತರ ದಾವೀದನು, “ನೀನು ನನ್ನನ್ನು ಆ ಗುಂಪು ಇರುವ ಸ್ಥಳಕ್ಕೆ ಕರೆದುಕೊಂಡು ಹೋಗುವಿಯೋ?” ಎಂದು ಕೇಳಿದ್ದಕ್ಕೆ ಅವನು, “ನೀನು ನನ್ನನ್ನು ಕೊಲ್ಲುವುದಿಲ್ಲವೆಂದೂ ದೇವರ ಹೆಸರಿನಲ್ಲಿ ಪ್ರಮಾಣ ಮಾಡಿದರೆ ನಿನ್ನನ್ನು ಆ ಗುಂಪಿನವರ ಬಳಿಗೆ ಕರಕೊಂಡು ಹೋಗುವೆನು” ಅಂದನು.


ಯಾವ ಪಾಪಕ್ಕೆ ಕೈಹಾಕಿದೆನು? ನನ್ನ ಅರಸನಾದ ಒಡೆಯನು ದಯವಿಟ್ಟು ತನ್ನ ಸೇವಕನ ಮಾತುಗಳನ್ನು ಲಾಲಿಸಬೇಕು. ನಿನ್ನನ್ನು ನನಗೆ ವಿರೋಧವಾಗಿ ಎಬ್ಬಿಸಿದವನು ಯೆಹೋವನೇ ಆಗಿರುವ ಪಕ್ಷದಲ್ಲಿ, ಆತನಿಗೆ ಘಮಘಮಿಸುವ ನೈವೇದ್ಯವನ್ನು ಅಂಗೀಕರಿಸಬೇಕು. ಮನುಷ್ಯರಾಗಿದ್ದರೆ ಯೆಹೋವನ ದೃಷ್ಟಿಯಲ್ಲಿ ಅವರು ಶಾಪಗ್ರಸ್ತರಾಗಿರಲಿ ಯಾಕೆಂದರೆ ಯೆಹೋವನ ಸ್ವತ್ತಿನಲ್ಲಿ ನನಗೆ ಪಾಲು ಸಿಕ್ಕದಂತೆ ‘ಹೋಗಿ ಅನ್ಯದೇವತೆಗಳನ್ನು ಸೇವಿಸು’ ಎಂದು ನನ್ನನ್ನು ತಳ್ಳಿಬಿಟ್ಟರು.


“ದಾವೀದನು ನಿನಗೆ ಕೇಡುಮಾಡಬೇಕೆಂದಿರುತ್ತಾನೆಂದು ಹೇಳುವವರ ಮಾತಿಗೆ ನೀನೇಕೆ ಕಿವಿಗೊಡುತ್ತೀ?


ತಪ್ಪಿಸಿಕೊಂಡ ಗುಲಾಮನು ನಿಮ್ಮಲ್ಲಿರುವುದಕ್ಕೆ ಬಂದರೆ ಅವನನ್ನು ಅವನ ದಣಿಗೆ ಪುನಃ ವಶಪಡಿಸಬಾರದು.


ನೀವು “ಬಿಡುಗಡೆಯುಂಟಾಗುವ ಏಳನೆಯ ವರ್ಷವು ಸಮೀಪವಾಯಿತು” ಎಂಬ ನೀಚವಾದ ಆಲೋಚನೆಯನ್ನು ಮಾಡಿ, ಆ ಬಡ ಸಹೋದರನಿಗೆ ಏನೂ ಕೊಡದೆ ಇರಬಾರದು, ಎಚ್ಚರಿಕೆ! ಹಾಗೆ ಧಿಕ್ಕರಿಸಿದರೆ ಅವನು ಒಂದು ವೇಳೆ ನಿಮ್ಮ ವಿಷಯದಲ್ಲಿ ಯೆಹೋವನಿಗೆ ಮೊರೆಯಿಟ್ಟಾನು, ನೀವು ದೋಷಿಗಳಾಗಿ ಕಂಡುಬರುವಿರಿ.


ಅದರ ಸುವಾಸನೆಯು ಯೆಹೋವನಿಗೆ ಗಮಗಮಿಸಲು ಆತನು ಹೃದಯದೊಳಗೆ, “ಮನುಷ್ಯರ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದ್ದು, ಆದರೂ ನಾನು ಇನ್ನು ಮೇಲೆ ಅವರ ನಿಮಿತ್ತವಾಗಿ ಭೂಮಿಯನ್ನು ಶಪಿಸುವುದಿಲ್ಲ. ನಾನು ಎಲ್ಲಾ ಜೀವಿಗಳನ್ನೂ ಈಗ ನಾಶಮಾಡಿದಂತೆ ಇನ್ನು ಮೇಲೆ ನಾಶ ಮಾಡುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು