Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 30:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ತಾಯಿಗೆ ಶುಭವನ್ನು ಕೋರದೆ, ತಂದೆಯನ್ನು ಶಪಿಸುವ ಒಂದು ತರದವರು ಉಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ತಂದೆಯನ್ನೇ ಶಪಿಸುವ, ತಾಯಿಗು ಮರ್ಯಾದೆಯನ್ನೂ ತರದ ಮಕ್ಕಳುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ತಾಯಿಗೆ ಶುಭವನ್ನು ಕೋರದೆ ತಂದೆಯನ್ನು ಶಪಿಸುವ ಒಂದು ತರದವರುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಕೆಲವರು ತಮ್ಮ ತಂದೆಗಳನ್ನು ಶಪಿಸುವರು. ತಮ್ಮ ತಾಯಂದಿರನ್ನು ಆಶೀರ್ವದಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ತಮ್ಮ ತಂದೆಯನ್ನು ಶಪಿಸಿ, ತಮ್ಮ ತಾಯಿಗೆ ಶುಭವನ್ನು ಕೋರದೆ ಇರುವವರು ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 30:11
15 ತಿಳಿವುಗಳ ಹೋಲಿಕೆ  

ತಂದೆಯನ್ನಾಗಲಿ ಅಥವಾ ತಾಯಿಯನ್ನಾಗಲಿ ಶಪಿಸುವವನ ದೀಪವು, ಮಧ್ಯರಾತ್ರಿಯ ಅಂಧಕಾರದಲ್ಲಿ ಆರಿಹೋಗುವುದು.


ತಂದೆಯನ್ನು ಹಾಸ್ಯಮಾಡಿ ತಾಯಿಯ ಅಪ್ಪಣೆಯನ್ನು, ಧಿಕ್ಕರಿಸುವವನ ಕಣ್ಣನ್ನು, ಹಳ್ಳಕೊಳ್ಳದ ಕಾಗೆಗಳು ಕುಕ್ಕುವವು, ರಣಹದ್ದುಗಳು ತಿಂದುಬಿಡುವವು.


“ಲೇವಿಯರು, ತಂದೆತಾಯಿಗಳನ್ನು ಅವಮಾನಪಡಿಸಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.


ತಂದೆಯನ್ನಾಗಲಿ ತಾಯಿಯನ್ನಾಗಲಿ ಶಪಿಸುವವನಿಗೆ ಮರಣಶಿಕ್ಷೆಯಾಗಬೇಕು.


“‘ತಂದೆಯನ್ನಾಗಲಿ ಅಥವಾ ತಾಯಿಯನ್ನಾಗಲಿ ದೂಷಿಸುವವನಿಗೆ ಮರಣಶಿಕ್ಷೆಯಾಗಬೇಕು. ತಂದೆತಾಯಿಗಳನ್ನು ದೂಷಿಸುವುದರಿಂದ ಅವನಿಗೆ ಸಂಭವಿಸಿದ ಮರಣಶಿಕ್ಷೆಗೆ ಅವನೇ ಕಾರಣನು.


ಯಾವನಾದರೂ ಸ್ವಂತ ಜನರನ್ನು, ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ಕ್ರಿಸ್ತ ನಂಬಿಕೆಯನ್ನು ತಿರಸ್ಕರಿಸಿದವನೂ ನಂಬದವನಿಗಿಂತ ಕೀಳಾದವನೂ ಆಗಿದ್ದಾನೆ.


ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ವಕೀಯ ಜನರೂ ಆಗಿದ್ದೀರಿ.


ಆದರೆ ಯೋಹಾನನು ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ದೀಕ್ಷಾಸ್ನಾನಮಾಡಿಸಿಕೊಳ್ಳುವುದಕ್ಕೆ ಬರುವುದನ್ನು ಕಂಡು ಅವರಿಗೆ, “ಎಲೈ ಸರ್ಪಸಂತತಿಯವರೇ, ಮುಂದೆ ಬರಲಿರುವ ದೈವಕೋಪದಿಂದ ತಪ್ಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಚ್ಚರಿಸಿದವರಾರು?


“ನನ್ನ ನಾಮವನ್ನು ಧಿಕ್ಕರಿಸುವ ಯಾಜಕರೇ, ಮಗನು ತಂದೆಗೆ ಸನ್ಮಾನ ಸಲ್ಲಿಸುತ್ತಾನಲ್ಲಾ, ಆಳು ಧಣಿಗೆ ಭಯಭಕ್ತಿ ತೋರಿಸುತ್ತಾನಷ್ಟೇ; ನಾನು ತಂದೆಯಾಗಿರಲು ನನಗೆ ಸಲ್ಲುವ ಸನ್ಮಾನವೆಲ್ಲಿ? ನಾನು ದಣಿಯಾಗಿರಲು ನನಗೆ ತೋರಿಸುವ ಭಯಭಕ್ತಿಯೆಲ್ಲಿ?” ಎಂದು ಸೇನಾಧೀಶ್ವರನಾದ ಯೆಹೋವನು ನಿಮಗೇ ನುಡಿಯುತ್ತಾನೆ. ಆದರೆ ನೀವು, “ಯಾವ ವಿಷಯದಲ್ಲಿ ನಿನ್ನ ನಾಮವನ್ನು ಧಿಕ್ಕರಿಸಿದ್ದೇವೆ?” ಅನ್ನುತ್ತೀರಿ.


ಹೆತ್ತ ತಂದೆಯ ಮಾತಿಗೆ ಕಿವಿಗೊಡು, ಮುಪ್ಪಿನಲ್ಲಿಯೂ ತಾಯಿಯನ್ನು ಅಸಡ್ಡೆಮಾಡಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು