Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 30:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಖಡ್ಗದಂತಿರುವ ಹಲ್ಲುಗಳೂ ಕತ್ತಿಯಂತಿರುವ ಕೋರೆಗಳೂ ಉಳ್ಳವರಾಗಿ ಭೂಮಿಯೊಳಗಿಂದ ಬಡವರನ್ನೂ, ಮನುಷ್ಯರ ಮಧ್ಯದೊಳಗಿಂದ ದಿಕ್ಕಿಲ್ಲದವರನ್ನೂ, ಅಗೆದು ನುಂಗಿಬಿಡುವ ಮತ್ತೊಂದು ತರದವರು ಉಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಖಡ್ಗದಂಥ ಹಲ್ಲುಗಳು, ಕತ್ತಿಯಂಥ ಕೋರೆಗಳೂ ಉಳ್ಳವರಿದ್ದಾರೆ. ನಾಡಿನ ಬಡವರನ್ನು ಇವರು ತಿಂದುಬಿಡುವರು; ಜನರಲ್ಲಿ ದಿಕ್ಕಿಲ್ಲದವರನ್ನು ಇವರು ನುಂಗಿಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಖಡ್ಗದಂತಿರುವ ಹಲ್ಲುಗಳೂ ಕತ್ತಿಯಂತಿರುವ ಕೋರೆಗಳೂ ಉಳ್ಳವರಾಗಿ ಭೂವಿುಯೊಳಗಿಂದ ಬಡವರನ್ನೂ ಮನುಷ್ಯರ ಮಧ್ಯದೊಳಗಿಂದ ದಿಕ್ಕಿಲ್ಲದವರನ್ನೂ ಅಗಿದು ನುಂಗಿಬಿಡುವ ಮತ್ತೊಂದು ತರದವರುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಖಡ್ಗಗಳಂತಿರುವ ಹಲ್ಲುಗಳನ್ನು ಹೊಂದಿರುವ ಜನರಿದ್ದಾರೆ. ಅವರ ಕೋರೆಗಳು ಕತ್ತಿಗಳಂತಿವೆ. ಅವರು ಬಡಜನರಲ್ಲಿ ಇರುವುದನ್ನೆಲ್ಲಾ ತಮ್ಮಿಂದಾದಷ್ಟು ದೋಚಿಕೊಳ್ಳಲು ತಮ್ಮ ಸಮಯವನ್ನು ಉಪಯೋಗಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಖಡ್ಗಗಳಂತೆ ಹಲ್ಲುಗಳುಳ್ಳವರೂ ಚೂರಿಗಳಂತೆ ದವಡೆಗಳುಳ್ಳವರೂ ಬಡವರನ್ನು ಭೂಮಿಯಿಂದಲೂ ದಿಕ್ಕಿಲ್ಲದವರನ್ನು ಮಾನವಕುಲದಿಂದಲೂ ಕಬಳಿಸುವವರೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 30:14
33 ತಿಳಿವುಗಳ ಹೋಲಿಕೆ  

ನಾನು ಸಿಂಹಗಳಂತಿರುವ ಶತ್ರುಗಳ ಮಧ್ಯದಲ್ಲಿ ಸಿಕ್ಕಿದ್ದೇನೆ; ದುರಾಶೆಯಿಂದ ಕಬಳಿಸುವಂತಹ ಮನುಷ್ಯರ ನಡುವೆ ಬಿದ್ದಿದ್ದೇನೆ. ಅವರ ಹಲ್ಲುಗಳು ಈಟಿ ಮತ್ತು ಬಾಣಗಳಂತಿವೆ, ನಾಲಿಗೆಗಳು ಹದವಾದ ಕತ್ತಿಗಳೇ.


ಯೆಹೋವನೇ, ನನ್ನ ದೇವರೇ, ನನ್ನ ಎಲ್ಲಾ ಶತ್ರುಗಳ ದವಡೆಯನ್ನು ಬಡಿದು ಅವರ ಹಲ್ಲುಗಳನ್ನು ಉದುರಿಸಿಬಿಟ್ಟವನೇ, ಎದ್ದು ಬಂದು ನನ್ನನ್ನು ರಕ್ಷಿಸು.


ದುಷ್ಟತ್ವವನ್ನು ನಡೆಸುವವರೆಲ್ಲರು ತಿಳಿಯುವುದಿಲ್ಲವೋ? ಅವರು ನನ್ನ ಜನರನ್ನು ಆಹಾರವನ್ನೋ ಎಂಬಂತೆ ನುಂಗಿಬಿಡುತ್ತಾರೆ; ಯೆಹೋವನನ್ನು ಸ್ಮರಿಸುವುದಿಲ್ಲ.


ಅನ್ಯಾಯಗಾರನ ಕೋರೆಗಳನ್ನು ಮುರಿದು, ಅವನ ಹಲ್ಲುಗಳಿಂದ ಬೇಟೆಯನ್ನು ಕಿತ್ತು ತರುತ್ತಿದ್ದೆನು.


ಅವುಗಳ ಕೂದಲು ಸ್ತ್ರೀಯರ ಕೂದಲಿನಂತೆಯೂ ಹಲ್ಲುಗಳು ಸಿಂಹದ ಹಲ್ಲುಗಳಂತೆಯೂ ಇದ್ದವು.


“ಎಷ್ಟು ಹೊತ್ತಿಗೆ ಅಮಾವಾಸ್ಯೆಯು ತೀರುವುದು? ಧಾನ್ಯವನ್ನು ಮಾರಬೇಕಲ್ಲಾ; ಸಬ್ಬತ್ತು ಇನ್ನೆಷ್ಟು ಹೊತ್ತು ಇರುವುದು? ಗೋದಿಯನ್ನು ಅಂಗಡಿಯಲ್ಲಿ ಇಡಬೇಕಲ್ಲಾ; ಕೊಳಗವನ್ನು ಕಿರಿದುಮಾಡೋಣ; ಬಡವರನ್ನು ನುಂಗುವವರೇ, ತೊಲವನ್ನು ಹೆಚ್ಚಿಸೋಣ; ಸುಳ್ಳು ತಕ್ಕಡಿಯಿಂದ ಮೋಸಮಾಡೋಣ; ದೇಶದ ಬಡವರನ್ನು ಮುಗಿಸಬೇಕೆಂದಿರುವವರೇ ಇದನ್ನು ಕೇಳಿರಿ.


ಆ ಮೇಲೆ ಪುನಃ ದೃಷ್ಟಿಸಿ ಸೂರ್ಯನ ಕೆಳಗೆ ನಡೆಯುತ್ತಿರುವ ಹಿಂಸೆಗಳನ್ನೆಲ್ಲಾ ನೋಡಿದೆನು. ಆಹಾ! ಹಿಂಸೆಗೊಂಡವರ ಕಣ್ಣೀರನ್ನು ನೋಡು. ಅವರನ್ನು ಸಂತೈಸುವವರು ಯಾರೂ ಇಲ್ಲ. ಅವರನ್ನು ಹಿಂಸಿಸುವವರಿಗೆ ಬಹಳ ಬಲ ಇದೆ. ಹಿಂಸೆಗೊಂಡವರನ್ನು ಸಂತೈಸುವವರು ಒಬ್ಬರೂ ಇಲ್ಲ.


ದೇವರೇ, ಅವರ ಹಲ್ಲುಗಳನ್ನು ಮುರಿದುಬಿಡು; ಯೆಹೋವನೇ, ಪ್ರಾಯದ ಸಿಂಹಗಳ ಕೋರೆ ಹಲ್ಲುಗಳನ್ನು ಕಿತ್ತುಹಾಕು.


ಯೆಹೋವನು, “ಕುಗ್ಗಿದವರ ಬಾಧೆಯನ್ನು ನೋಡಿದ್ದೇನೆ; ಗತಿಯಿಲ್ಲದವರ ನರಳುವಿಕೆಯು ನನಗೆ ಕೇಳಿಸಿತು. ಈಗ ಎದ್ದು ಬಂದು ಅವರ ಇಷ್ಟಾರ್ಥವನ್ನು ನೆರವೇರಿಸುವೆನು. ಅವರು ಬಯಸಿದಂತೆ ಅವರನ್ನು ಸುರಕ್ಷಿತವಾಗಿ ಇರಿಸುವೆನು” ಎಂದು ಹೇಳುತ್ತಾನೆ.


“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕ ರಾಜ್ಯದ ಬಾಗಿಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ. ನೀವಂತೂ ಒಳಕ್ಕೆ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಬೇಕೆಂದಿರುವವರನ್ನೂ ಪ್ರವೇಶಿಸಗೊಡಿಸುವುದೂ ಇಲ್ಲ.


ಅವರೊಳಗಿನ ಮುಖ್ಯಾಧಿಕಾರಿಗಳು ಗರ್ಜಿಸುವ ಸಿಂಹಗಳು; ಅದರ ನ್ಯಾಯಾಧಿಪತಿಗಳು ಸಂಜೆಯ ತೋಳಗಳು; ಮರುದಿನ ಬೆಳಗ್ಗೆ ಕಡಿಯುವುದಕ್ಕೆ ಎಲುಬು ಸಹಾ ಬಿಡದ ಕ್ರೂರರು.


ದಿಕ್ಕಿಲ್ಲದವರನ್ನು ಮರೆಯಲ್ಲಿ ನುಂಗಲು ಹೆಚ್ಚಳಪಡುವವರಾಗಿ ನನ್ನನ್ನು ಚದುರಿಸಬೇಕೆಂದು ನನ್ನ ಮೇಲೆ ಬಿರುಗಾಳಿಯಂತೆ ನುಗ್ಗಿದ ಅವನ ಭಟರ ತಲೆಯನ್ನು ಅವನ ದೊಣ್ಣೆಗಳಿಂದಲೇ ಒಡೆದಿದ್ದೀ


ಸಮಾರ್ಯ ಬೆಟ್ಟದಲ್ಲಿನ, ಬಾಷಾನಿನ ಕೊಬ್ಬಿದ ಹಸುಗಳಂತಿರುವ ಸ್ತ್ರೀಯರೇ, ಬಡವರನ್ನು ಹಿಂಸಿಸಿ, ದಿಕ್ಕಿಲ್ಲದವರನ್ನು ಜಜ್ಜಿ, ನೀವು ನಿಮ್ಮ ಪತಿಗಳಿಗೆ, “ಪಾನಗಳನ್ನು ತರಿಸಿ, ಕುಡಿಯೋಣ” ಎಂದು ಹೇಳುವವರೇ, ಈ ಮಾತನ್ನು ಕೇಳಿರಿ.


ಬಡವರ ತಲೆಗಳನ್ನು ನೆಲದ ಧೂಳಿನಂತೆ ತುಳಿದು ಬಿಡುತ್ತಾರೆ, ದೀನರ ದಾರಿಗೆ ಅಡ್ಡ ಹಾಕುತ್ತಾರೆ. ಮಗನೂ ಮತ್ತು ತಂದೆಯೂ ಒಬ್ಬಳಲ್ಲಿ ಹೋಗಿ ನನ್ನ ಪವಿತ್ರ ನಾಮವನ್ನು ಅಪಕೀರ್ತಿಗೆ ಗುರಿಮಾಡುತ್ತಾರೆ.


ಮೋಸಗಾರನ ಆಯುಧಗಳು ಕೆಟ್ಟವುಗಳೇ, ದೀನದರಿದ್ರನು ನ್ಯಾಯವಾದದ್ದನ್ನು ಮಾತನಾಡಿದರೂ, ಅವರನ್ನು ಸುಳ್ಳುಮಾತುಗಳಿಂದ ಕೆಡಿಸುವುದಕ್ಕೆ ಕುಯುಕ್ತಿಗಳನ್ನು ಕಲ್ಪಿಸುವನು.


ಬಡವರನ್ನು ಹಿಂಸಿಸುವ ದರಿದ್ರನು, ಒಂದು ಕಾಳೂ ಉಳಿಯದಂತೆ ಪೈರನ್ನು ಬಡಿಯುವ ಮಳೆಯ ಹಾಗೆ.


ಸ್ವಂತ ಲಾಭಕ್ಕಾಗಿ ಬಡವರನ್ನು ಹಿಂಸಿಸುವವನಿಗೂ, ಸಿರಿವಂತರಿಗೆ ಲಂಚಕೊಡುವವನಿಗೂ ಕೊರತೆಯೇ ಗತಿ.


ಕತ್ತಿ ತಿವಿದ ಹಾಗೆ ದುಡುಕಿ ಮಾತನಾಡುವವರುಂಟು, ಜ್ಞಾನವಂತರ ಮಾತು ಸ್ವಸ್ಥತೆಯನ್ನು ತರುವುದು.


ಮೋಸಗಾರನೇ, ನಿನ್ನ ನಾಲಿಗೆಯು ಹರಿತವಾದ ಕ್ಷೌರಕತ್ತಿಯಂತೆ ಅಪಾಯಗಳನ್ನೇ ಕಲ್ಪಿಸುತ್ತದೆ.


ಯೆಹೋವನಿಗೆ ಕೊಂಡಾಟವಾಗಲಿ; ಆತನು ನಮ್ಮನ್ನು ಅವರ ಹಲ್ಲುಗಳಿಗೆ ಸೀಳಿಬಿಡಲು ಕೊಡಲಿಲ್ಲ.


ಕೊಡು, ಕೊಡು ಅನ್ನುವ ಎರಡು ಹೆಣ್ಣು ಮಕ್ಕಳು ಜಿಗಣೆಗೆ ಉಂಟು. ತೃಪ್ತಿಪಡದವುಗಳು ಮೂರು ಉಂಟು, ಹೌದು, ಸಾಕೆನ್ನದವುಗಳು ನಾಲ್ಕು ಉಂಟು.


ಯೆಹೋವನು ತನ್ನ ಜನರ ಹಿರಿಯರನ್ನು, ಅಧಿಕಾರಿಗಳನ್ನೂ ನ್ಯಾಯವಿಚಾರಣೆಗೆ ತರುವನು. ಏಕೆಂದರೆ, “ನೀವು ದ್ರಾಕ್ಷಿಯ ತೋಟವನ್ನು ನುಂಗಿಬಿಟ್ಟಿದ್ದೀರಿ. ಬಡವರಿಂದ ಕೊಳ್ಳೆಹೊಡೆದದ್ದು ನಿಮ್ಮ ಮನೆಗಳಲ್ಲಿ ಇದೆ.


ಮುಖದ ಕದಗಳನ್ನು ಯಾರು ತೆರೆದಾರು? ಭಯವು ಅದರ ಹಲ್ಲುಗಳನ್ನು ಆವರಿಸಿಕೊಂಡಿದೆ.


ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ; ಭೂಮಂಡಲದ ಮೇಲೆಲ್ಲಾ ನಿನ್ನ ಮಹತ್ವವು ಹಬ್ಬಲಿ.


ನೀವು ನನ್ನ ಜನರನ್ನು ಜಜ್ಜಿ, ಬಡವರನ್ನು ದುಃಖದಿಂದ ಹಿಂಸಿಸುವುದೇಕೆ?” ಎಂದು ಕರ್ತನಾದ ಸೇನಾಧೀಶ್ವರ ಯೆಹೋವನು ವಾದಿಸುವನು.


ಬಡವರನ್ನು ನ್ಯಾಯಸ್ಥಾನದಿಂದ ತಳ್ಳಿ, ದಿಕ್ಕಿಲ್ಲದವರಿಗೆ ನ್ಯಾಯವನ್ನು ತಪ್ಪಿಸಿ, ಅನಾಥರನ್ನು ಕೊಳ್ಳೆಹೊಡೆದು, ವಿಧವೆಯರನ್ನು ಸೂರೆಮಾಡಬೇಕೆಂದಿದ್ದಾರೆ.


“‘ಇಗೋ, ಇಸ್ರಾಯೇಲಿನ ಪ್ರಭುಗಳು ತಮ್ಮ ತಮ್ಮ ಶಕ್ತ್ಯಾನುಸಾರ ನಿನ್ನಲ್ಲಿ ರಕ್ತ ಸುರಿಸುತ್ತಲೇ ಇದ್ದಾರೆ.


ನೀವು ಕೊಬ್ಬಿನ ಮಾಂಸವನ್ನು ತಿನ್ನುತ್ತೀರಿ, ಉಣ್ಣೆಯ ಬಟ್ಟೆಯನ್ನು ಹಾಕುತ್ತೀರಿ, ಕೊಬ್ಬಿದ ಕುರಿಗಳನ್ನು ಕೊಲ್ಲುತ್ತೀರಿ; ಆದರೆ ಕುರಿಗಳನ್ನು ಮೇಯಿಸುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು