Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 30:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ತಂದೆಯನ್ನು ಹಾಸ್ಯಮಾಡಿ ತಾಯಿಯ ಅಪ್ಪಣೆಯನ್ನು, ಧಿಕ್ಕರಿಸುವವನ ಕಣ್ಣನ್ನು, ಹಳ್ಳಕೊಳ್ಳದ ಕಾಗೆಗಳು ಕುಕ್ಕುವವು, ರಣಹದ್ದುಗಳು ತಿಂದುಬಿಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ತಂದೆಯನ್ನು ಪರಿಹಾಸ್ಯಮಾಡುವ ಕಣ್ಣನ್ನು, ತಾಯಿಯ ಆಜ್ಞೆಯನ್ನು ಧಿಕ್ಕರಿಸುವ ನೇತ್ರವನ್ನು ಹಳ್ಳಕೊಳ್ಳದ ಕಾಗೆಗಳು ಕುಕ್ಕುವುವು, ರಣಹದ್ದುಗಳು ತಿಂದುಬಿಡುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ತಂದೆಯನ್ನು ಹಾಸ್ಯಮಾಡಿ ತಾಯಿಯ ಅಪ್ಪಣೆಯನ್ನು ಧಿಕ್ಕರಿಸುವವನ ಕಣ್ಣನ್ನು ಹಳ್ಳಕೊಳ್ಳದ ಕಾಗೆಗಳು ಕುಕ್ಕುವವು, ರಣಹದ್ದುಗಳು ತಿಂದುಬಿಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ತನ್ನ ತಂದೆಯನ್ನು ಗೇಲಿಮಾಡುವವನಾಗಲಿ ವೃದ್ಧ ತಾಯಿಯನ್ನು ಕಡೆಗಣಿಸುವವನಾಗಲಿ ದಂಡನೆ ಹೊಂದುವನು. ಕಾಗೆಗಳೂ ಕ್ರೂರಪಕ್ಷಿಗಳೂ ಅವನ ಕಣ್ಣುಗಳನ್ನು ತಿನ್ನುವಂತಿರುವುದು ಆ ದಂಡನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ತನ್ನ ತಂದೆಯನ್ನು ಹಾಸ್ಯಮಾಡಿ, ತನ್ನ ತಾಯಿಯನ್ನು ಧಿಕ್ಕರಿಸುವ ಕಣ್ಣನ್ನು, ಕಣಿವೆಯ ಕಾಗೆಗಳು ಕಿತ್ತು ಕಕ್ಕುವವು. ರಣಹದ್ದುಗಳು ಅದನ್ನು ತಿಂದುಬಿಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 30:17
14 ತಿಳಿವುಗಳ ಹೋಲಿಕೆ  

ಹೆತ್ತ ತಂದೆಯ ಮಾತಿಗೆ ಕಿವಿಗೊಡು, ಮುಪ್ಪಿನಲ್ಲಿಯೂ ತಾಯಿಯನ್ನು ಅಸಡ್ಡೆಮಾಡಬೇಡ.


ತಾಯಿಗೆ ಶುಭವನ್ನು ಕೋರದೆ, ತಂದೆಯನ್ನು ಶಪಿಸುವ ಒಂದು ತರದವರು ಉಂಟು.


“‘ತಂದೆಯನ್ನಾಗಲಿ ಅಥವಾ ತಾಯಿಯನ್ನಾಗಲಿ ದೂಷಿಸುವವನಿಗೆ ಮರಣಶಿಕ್ಷೆಯಾಗಬೇಕು. ತಂದೆತಾಯಿಗಳನ್ನು ದೂಷಿಸುವುದರಿಂದ ಅವನಿಗೆ ಸಂಭವಿಸಿದ ಮರಣಶಿಕ್ಷೆಗೆ ಅವನೇ ಕಾರಣನು.


ತಂದೆಯನ್ನಾಗಲಿ ಅಥವಾ ತಾಯಿಯನ್ನಾಗಲಿ ಶಪಿಸುವವನ ದೀಪವು, ಮಧ್ಯರಾತ್ರಿಯ ಅಂಧಕಾರದಲ್ಲಿ ಆರಿಹೋಗುವುದು.


ಆಗ ಅಯ್ಯಾಹನ ಮಗಳಾದ ರಿಚ್ಪಳು ಒಂದು ಗೋಣಿತಟ್ಟನ್ನು ತೆಗೆದುಕೊಂಡು, ಅದನ್ನು ಬಂಡೆಯ ಮೇಲೆ ಹಾಸಿ, ಸುಗ್ಗಿಯ ಆರಂಭದಿಂದ ಶವಗಳ ಮೇಲೆ ಮಳೆ ಬೀಳುವ ತನಕ ಅದರ ಮೇಲೆ ಕುಳಿತುಕೊಂಡು, ಹಗಲಿನಲ್ಲಿ ಆಕಾಶದ ಪಕ್ಷಿಗಳೂ, ರಾತ್ರಿಯಲ್ಲಿ ಕಾಡು ಮೃಗಗಳೂ ಅವುಗಳನ್ನು ತಿನ್ನದಂತೆ ಕಾಯುತ್ತಿದ್ದಳು.


“ಇಲ್ಲಿ ಬಾ, ನಿನ್ನ ಮಾಂಸವನ್ನು ಮೃಗ ಪಕ್ಷಿಗಳಿಗೆ ಹಂಚಿಕೊಡುತ್ತೇನೆ” ಅಂದನು.


ನಿಮ್ಮ ಹೆಣಗಳು ಪಕ್ಷಿಗಳಿಗೂ ಮತ್ತು ಕಾಡು ಮೃಗಗಳಿಗೂ ಆಹಾರವಾಗುವವು; ಅವುಗಳನ್ನು ಬೆದರಿಸುವವರು ಯಾರೂ ಇರುವುದಿಲ್ಲ.


ಜ್ಞಾನವಂತನಾದ ಮಗನು ತಂದೆಯನ್ನು ಉಲ್ಲಾಸಗೊಳಿಸುವನು, ಜ್ಞಾನಹೀನನು ತಾಯಿಯನ್ನು ತಿರಸ್ಕರಿಸುವನು.


ಮೂರು ವಿಷಯಗಳು ನನ್ನ ಬುದ್ಧಿಯನ್ನು ಮೀರಿವೆ, ಹೌದು, ನಾಲ್ಕನ್ನು ಗ್ರಹಿಸಲಾರೆನು;


“ನನ್ನ ನಾಮವನ್ನು ಧಿಕ್ಕರಿಸುವ ಯಾಜಕರೇ, ಮಗನು ತಂದೆಗೆ ಸನ್ಮಾನ ಸಲ್ಲಿಸುತ್ತಾನಲ್ಲಾ, ಆಳು ಧಣಿಗೆ ಭಯಭಕ್ತಿ ತೋರಿಸುತ್ತಾನಷ್ಟೇ; ನಾನು ತಂದೆಯಾಗಿರಲು ನನಗೆ ಸಲ್ಲುವ ಸನ್ಮಾನವೆಲ್ಲಿ? ನಾನು ದಣಿಯಾಗಿರಲು ನನಗೆ ತೋರಿಸುವ ಭಯಭಕ್ತಿಯೆಲ್ಲಿ?” ಎಂದು ಸೇನಾಧೀಶ್ವರನಾದ ಯೆಹೋವನು ನಿಮಗೇ ನುಡಿಯುತ್ತಾನೆ. ಆದರೆ ನೀವು, “ಯಾವ ವಿಷಯದಲ್ಲಿ ನಿನ್ನ ನಾಮವನ್ನು ಧಿಕ್ಕರಿಸಿದ್ದೇವೆ?” ಅನ್ನುತ್ತೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು