Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 30:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಕಾಶಕ್ಕೆ ಏರಿ ಇಳಿದಿರುವವನಾರು? ಮುಷ್ಠಿಯಲ್ಲಿ ಗಾಳಿಯನ್ನು ಕೂಡಿಸಿರುವವರು ಯಾರು? ತನ್ನ ಬಟ್ಟೆಯಲ್ಲಿ ನೀರನ್ನು ಮೂಟೆಕಟ್ಟಿರುವವರು ಯಾರು? ಭೂಮಿಯ ಎಲ್ಲೆಗಳನ್ನೆಲ್ಲಾ ಸ್ಥಾಪಿಸಿರುವವರು ಯಾರು? ಅವನ ಹೆಸರೇನು? ಅವನ ಮಗನ ಹೆಸರೇನು? ನೀನೇ ಬಲ್ಲವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆಕಾಶಕ್ಕೆ ಏರಿ ಮರಳಿದವನು ಯಾರು? ಮುಷ್ಟಿಯಲ್ಲಿ ಗಾಳಿಯನ್ನು ಹಿಡಿದಿಟ್ಟವನು ಯಾರು? ಬಟ್ಟೆಯಲ್ಲಿ ನೀರನ್ನು ಮೂಟೆಕಟ್ಟಿದವನು ಯಾರು? ಭೂಮಿಗೆ ಎಲ್ಲೆಮೇರೆಗಳನ್ನು ನಿಗದಿಮಾಡಿದವನು ಯಾರು? ಆತನ ಹೆಸರೇನು? ಆತನ ಮಗನ ಹೆಸರೇನು? ಬಲ್ಲೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆಕಾಶಕ್ಕೆ ಏರಿ ಇಳಿದಿರುವವನಾರು? ಮುಷ್ಟಿಯಲ್ಲಿ ಗಾಳಿಯನ್ನು ಕೂಡಿಸಿರುವವರು ಯಾರು? ತನ್ನ ಬಟ್ಟೆಯಲ್ಲಿ ನೀರನ್ನು ಮೂಟೆಕಟ್ಟಿರುವವರು ಯಾರು? ಭೂವಿುಯ ಎಲ್ಲೆಗಳನ್ನೆಲ್ಲಾ ಸ್ಥಾಪಿಸಿರುವವರು ಯಾರು? ಅವನ ಹೆಸರೇನು? ಅವನ ಮಗನ ಹೆಸರೇನು? ನೀನೇ ಬಲ್ಲವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಎಂದಾದರೂ ಪರಲೋಕಕ್ಕೆ ಏರಿಹೋಗಿ ಇಳಿದುಬಂದವನು ಯಾರು? ಗಾಳಿಯನ್ನು ತನ್ನ ಕೈಯಲ್ಲಿ ಹಿಡಿದವನು ಯಾರು? ತನ್ನ ಉಡುಪಿನಲ್ಲಿ ಸಮುದ್ರವನ್ನು ಮೂಟೆಕಟ್ಟಿದವನು ಯಾರು? ಭೂಮಿಗೆ ಮೇರೆಗಳನ್ನು ಹಾಕಿದವನು ಯಾರು? ಈ ಕಾರ್ಯಗಳನ್ನು ಯಾವನಾದರೂ ಮಾಡಿದ್ದರೆ, ಅವನು ಯಾರು? ಅವನು ಕುಟುಂಬ ಎಲ್ಲಿದೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯಾರು ಸ್ವರ್ಗಕ್ಕೆ ಹೋಗಿ ಕೆಳಗಿಳಿದು ಬಂದಿದ್ದಾರೆ? ಯಾರ ಕೈಗಳು ಗಾಳಿಯನ್ನು ಒಟ್ಟುಗೂಡಿಸಿವೆ? ಯಾರು ತಮ್ಮ ವಸ್ತ್ರದಲ್ಲಿ ಸಾಗರಗಳನ್ನು ಮೂಟೆಕಟ್ಟಿಕೊಂಡಿದ್ದಾರೆ? ಭೂಮಿಯ ಎಲ್ಲೆಗಳನ್ನೆಲ್ಲಾ ಸ್ಥಾಪಿಸಿದವರು ಯಾರು? ಅವರ ಹೆಸರೇನು? ಅವರ ಮಗನ ಹೆಸರೇನು? ಖಂಡಿತವಾಗಿಯೂ ನಿಮಗೆ ಗೊತ್ತಿರಬೇಕು!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 30:4
31 ತಿಳಿವುಗಳ ಹೋಲಿಕೆ  

ಪರಲೋಕದಿಂದ ಇಳಿದು ಬಂದವನೇ, ಅಂದರೆ, ಮನುಷ್ಯಕುಮಾರನೇ ಹೊರತು ಮತ್ತಾರು ಪರಲೋಕಕ್ಕೆ ಏರಿ ಹೋದವರಿಲ್ಲ.


ತನ್ನ ಮೇಘಗಳೊಳಗೆ ನೀರನ್ನು ತುಂಬಿ ಕಟ್ಟುವನು, ಯಾವ ಮೋಡವೂ ಅದರ ಭಾರದಿಂದ ಒಡೆದು ಹೋಗದು.


ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವುದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರೂ, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬುದು ಆತನ ಹೆಸರು.


ಆದಕಾರಣ ಕರ್ತನು ತಾನೇ ನಿಮಗೆ ಒಂದು ಗುರುತನ್ನು ಕೊಡುವನು. ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆದು ಅವನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು.


ಇದು ಮೇಲಣ ಲೋಕದಲ್ಲಿರುವ ಮಾತಲ್ಲ. “ನಮಗೋಸ್ಕರ ಮೇಲಣ ಲೋಕವನ್ನು ಏರಿ ಅದನ್ನು ತಿಳಿದುಕೊಂಡು ಬಂದು ನಮಗೆ ತಿಳಿಸುವಷ್ಟು ಶಕ್ತರು ಯಾರಿದ್ದಾರೆ? ಇದ್ದರೆ ನಾವು ಕೇಳಿ ಕೈಕೊಂಡೇವು” ಅಂದುಕೊಳ್ಳುವುದಕ್ಕೆ ಅವಕಾಶವೇನೂ ಇಲ್ಲ.


ಆತನ ಕಣ್ಣುಗಳು ಬೆಂಕಿಯ ಜ್ವಾಲೆಯಂತಿವೆ, ಆತನ ತಲೆಯ ಮೇಲೆ ಅನೇಕ ಕಿರೀಟಗಳುಂಟು, ಆತನಿಗೆ ಒಂದು ಹೆಸರು ಬರೆದುಕೊಡಲ್ಪಟ್ಟಿದೆ, ಅದು ಆತನಿಗೇ ಹೊರತು ಮತ್ತಾರಿಗೂ ತಿಳಿಯದು.


ಆದರೆ ನಂಬಿಕೆಯಿಂದುಂಟಾಗುವ ನೀತಿಯು ಈ ರೀತಿಯಾಗಿ ಹೇಳುತ್ತದೆ. “‘ಕ್ರಿಸ್ತನನ್ನು ಭೂಮಿಗಿಳಿಸಿಕೊಂಡು ಬರುವುದಕ್ಕಾಗಿ ಮೇಲಣ ಲೋಕಕ್ಕೆ ಏರಿಹೋದವರಾರು?’


ಈ ಗ್ರಂಥದಲ್ಲಿ ಬರೆದಿರುವ ಧರ್ಮಶಾಸ್ತ್ರವಾಕ್ಯಗಳನ್ನೆಲ್ಲಾ ನೀವು ಅನುಸರಿಸದೆ ನಿಮ್ಮ ದೇವರಾದ ಯೆಹೋವನೆಂಬ ಮಹಾಮಹಿಮೆಯುಳ್ಳ ಅದ್ಭುತ ನಾಮದಲ್ಲಿ ನೀವು ಭಯಭಕ್ತಿಯುಳ್ಳವರಾಗಿ ನಡೆಯದೆ ಹೋದರೆ,


ಹಿಂಸೆಯ ನ್ಯಾಯದಿಂದ ಕೊಲ್ಲಲ್ಪಟ್ಟನು, ಆಹಾ, ಇವನು ಜೀವಲೋಕದಿಂದ ತೆಗೆದುಹಾಕಲ್ಪಟ್ಟಿದ್ದಾನೆ. ನಮ್ಮ ಜನಗಳ ದ್ರೋಹಗಳ ದೆಸೆಯಿಂದ ಈ ಪೆಟ್ಟು ಅವನ ಮೇಲೆ ಬಿತ್ತಲ್ಲಾ ಎಂದು ಅವನ ಕಾಲದವರಲ್ಲಿ ಯಾರು ಮನಮುಟ್ಟಿ ಮರುಗಿದರು?


ನೀನು ಜಯಿಸಿದ ಬಹು ಜನರನ್ನು ಸೆರೆಹಿಡಿದುಕೊಂಡು ಹೋಗಿ, ನಿನಗೆ ದ್ರೋಹಿಗಳಾದ ಮನುಷ್ಯರಿಂದಲೇ ಕಪ್ಪಗಳನ್ನು ಸಂಗ್ರಹಿಸಿ, ದೇವನಾದ ಯಾಹುವು ಅಲ್ಲೇ ವಾಸಿಸುವಂತೆ, ಉನ್ನತಸ್ಥಾನಕ್ಕೆ ಏರಿದ್ದೀ.


ನಾನು ಯೆಹೋವನ ಆಜ್ಞೆಯನ್ನು ತಿಳಿಸುತ್ತೇನೆ, ಕೇಳಿರಿ; ಆತನು ನನಗೆ, “ನನಗೆ ನೀನು ಮಗನು; ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.


ನಾನು ಅಬ್ರಹಾಮನಿಗೂ, ಇಸಾಕನಿಗೂ, ಯಾಕೋಬನಿಗೂ ಸರ್ವಶಕ್ತನಾದ ದೇವರಾಗಿ ಕಾಣಿಸಿಕೊಂಡಿದ್ದೆನು. ಆದರೆ ಯೆಹೋವನೆಂಬ ನನ್ನ ಹೆಸರಿನಲ್ಲಿ ಅವರಿಗೆ ಗೋಚರವಾಗಿರಲಿಲ್ಲ.


ಯೆಹೋವನ ದೂತನು, “ನನ್ನ ಹೆಸರನ್ನು ಕೇಳುವುದೇಕೆ? ಅದು ಆಶ್ಚರ್ಯಕರವಾದದ್ದು” ಅಂದನು.


ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ಮಗನು ಎಂಥವನೆಂದು ತಂದೆಯ ಹೊರತು ಮತ್ತಾರೂ ತಿಳಿದಿರುವುದಿಲ್ಲ, ತಂದೆ ಎಂಥವನೆಂದು ಮಗನ ಹೊರತು ಇನ್ನಾರು ತಿಳಿದಿರುವುದಿಲ್ಲ ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಮನಸ್ಸುಳ್ಳವನಾಗಿದ್ದಾನೋ, ಅವನೂ ಆತನನ್ನು ತಿಳಿದವನಾಗಿದ್ದಾನೆ” ಅಂದನು.


ನನ್ನ ತಂದೆಯು ಎಲ್ಲವನ್ನು ನನಗೆ ಒಪ್ಪಿಸಿದ್ದಾನೆ. ತಂದೆಯ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ. ಮಗನ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ. ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಇಚ್ಛಿಸುತ್ತಾನೋ ಅವನು ಆತನನ್ನು ತಿಳಿದವನಾಗಿದ್ದಾನೆ.


ಅವನ ಕಾಲದಲ್ಲಿ ಯೆಹೂದ್ಯರು ಸುರಕ್ಷಿತರಾಗಿರುವರು, ಇಸ್ರಾಯೇಲರು ನೆಮ್ಮದಿಯಾಗಿ ವಾಸಿಸುವರು; ‘ಯೆಹೋವ ಚಿದ್ಕೇನು’ ಅಂದರೆ ಯೆಹೋವನೇ ನಮ್ಮ ಸದ್ಧರ್ಮ ಎಂಬ ಹೆಸರು ಅವನಿಗಾಗುವುದು” ಎಂದು ನುಡಿಯುತ್ತಾನೆ.


ಆತನೇ ಅದರ ಅಸ್ತಿವಾರವನ್ನು ಸಾಗರದ ಮೇಲೆ ಹಾಕಿದವನು; ಅದನ್ನು ಜಲರಾಶಿಗಳ ಮೇಲೆ ಸ್ಥಿರಪಡಿಸಿದವನು ಆತನೇ.


ಭೂಮಂಡಲದವರೆಲ್ಲರೂ ಎಚ್ಚರಗೊಂಡು ಯೆಹೋವನ ಕಡೆಗೆ ತಿರುಗಿಕೊಳ್ಳುವರು; ಯೆಹೋವನೇ, ಎಲ್ಲಾ ಜನಾಂಗಗಳವರು ನಿನಗೆ ಅಡ್ಡಬೀಳುವರು.


ಯಾಕೋಬನು, “ನೀನು ನಿನ್ನ ಹೆಸರನ್ನು ನನಗೆ ತಿಳಿಸಬೇಕು” ಎಂದು ಅವನನ್ನು ಕೇಳಿಕೊಂಡಾಗ ಆತನು, “ನನ್ನ ಹೆಸರನ್ನು ವಿಚಾರಿಸುವುದೇಕೆ?” ಎಂದು ಹೇಳಿ ಅಲ್ಲಿ ಅವನನ್ನು ಆಶೀರ್ವದಿಸಿದನು.


ಆದರೆ ನೀನು ಗಾಳಿಯನ್ನು ಊದಿದಾಗ, ಸಮುದ್ರವು ಅವರನ್ನು ಮುಚ್ಚಿಕೊಂಡಿತು; ಅವರು ಮಹಾಸಾಗರದೊಳಗೆ ಸೀಸದ ಗುಂಡಿನಂತೆ ಮುಳುಗಿಹೋದರು.


ಆತನು ಭೂಮಿಯ ಕಟ್ಟಕಡೆಯಿಂದ ಮೋಡಗಳನ್ನು ಮೇಲೇರುವಂತೆ ಮಾಡುತ್ತಾನೆ; ಮಳೆಗೋಸ್ಕರ ಮಿಂಚನ್ನು ಹೊಳೆಯುವಂತೆ ಮಾಡುತ್ತಾನೆ; ತನ್ನ ಉಗ್ರಾಣದಿಂದ ಗಾಳಿಯನ್ನು ಬೀಸುವಂತೆ ಮಾಡುತ್ತಾನೆ.


ಆಕಾಶಮಂಡಲವನ್ನು ಸೃಷ್ಟಿಸಿದ ಯೆಹೋವನ ಮಾತನ್ನು ಕೇಳಿರಿ, ಆತನೇ ದೇವರು. ಭೂಲೋಕವನ್ನು ನಿರ್ಮಿಸಿ ರೂಪಿಸಿ ಸ್ಥಾಪಿಸಿದನು. ಅದನ್ನು ಶೂನ್ಯಸ್ಥಾನವಾಗಿರಲೆಂದು ಸೃಷ್ಟಿಸದೆ ಜನನಿವಾಸಕ್ಕಾಗಿಯೇ ರೂಪಿಸಿದನು. ಈತನು ಹೀಗೆನ್ನುತ್ತಾನೆ, “ನಾನೇ ಯೆಹೋವನು, ಇನ್ನು ಯಾರೂ ಇಲ್ಲ.


ದೇವರ ಅಗಾಧಗಳನ್ನು ಕಂಡುಕೊಳ್ಳಬಲ್ಲೆಯಾ? ಸರ್ವಶಕ್ತನಾದ ದೇವರನ್ನು ಸಂಪೂರ್ಣವಾಗಿ ಗ್ರಹಿಸಿಕೊಳ್ಳಬಹುದೋ?


ಆಹಾ, (ಆತನ ಜ್ಞಾನವು) ಆಕಾಶದ ಹಾಗೆ ಉನ್ನತವಾಗಿದೆ; ನೀನು ಮಾಡುವುದೇನು? ಪಾತಾಳಕ್ಕಿಂತ ಆಳವಾಗಿದೆ; ನೀನು ತಿಳಿದುಕೊಳ್ಳುವುದೇನು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು