Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 30:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆತನ ಮಾತುಗಳಿಗೆ ಯಾವುದನ್ನೂ ಸೇರಿಸಬೇಡ, ಆತನು ನಿನ್ನನ್ನು ಖಂಡಿಸುವಾಗ ನೀನು ಸುಳ್ಳುಗಾರನೆಂದು ತೋರಿಬಂದೀಯೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆತನ ಮಾತುಗಳಿಗೆ ಯಾವುದನ್ನೂ ಸೇರಿಸಬೇಡ, ಇಲ್ಲವಾದರೆ ಆತ ನಿನ್ನನ್ನು ಖಂಡಿಸಿಯಾನು, ನೀನು ಸುಳ್ಳುಗಾರನಾಗಿ ತೋರಿಬಂದೀಯೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆತನ ಮಾತುಗಳಿಗೆ ಯಾವದನ್ನೂ ಸೇರಿಸಬೇಡ; ಆತನು ನಿನ್ನನ್ನು ಖಂಡಿಸುವಾಗ ನೀನು ಸುಳ್ಳುಗಾರನೆಂದು ತೋರಿಬಂದೀಯೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದ್ದರಿಂದ ದೇವರು ಹೇಳುವ ಸಂಗತಿಗಳಿಗೆ ಏನನ್ನೂ ಸೇರಿಸಬೇಡ. ನೀನು ಬದಲಾಯಿಸಿದರೆ, ಆತನು ನಿನ್ನನ್ನು ಶಿಕ್ಷಿಸುವನು ಮತ್ತು ನಿನ್ನನ್ನು ಸುಳ್ಳುಗಾರನೆಂದು ರುಜುವಾತು ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ದೇವರ ಮಾತುಗಳಿಗೆ ಯಾವುದನ್ನೂ ಸೇರಿಸಬೇಡ. ಇಲ್ಲವಾದರೆ ದೇವರು ನಿನ್ನನ್ನು ಗದರಿಸಿ ನಿನ್ನನ್ನು ಸುಳ್ಳುಗಾರನೆಂದು ಸಾಬೀತುಪಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 30:6
7 ತಿಳಿವುಗಳ ಹೋಲಿಕೆ  

ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ನೀವು ಅನುಸರಿಸಲೇಬೇಕು; ಅದಕ್ಕೆ ಏನೂ ಸೇರಿಸಬಾರದು; ಅದರಿಂದ ಏನೂ ತೆಗೆದುಬಿಡಬಾರದು.


ನಿಮ್ಮ ದೇವರಾದ ಯೆಹೋವನು ಕೊಟ್ಟ ಆಜ್ಞೆಗಳನ್ನೇ ನಾನು ನಿಮಗೆ ತಿಳಿಸುತ್ತಾ ಇದ್ದೇನೆ. ಈ ಮಾತುಗಳನ್ನು ನೀವು ಕೈಕೊಳ್ಳಬೇಕೇ ಹೊರತು ಅವುಗಳಿಗೆ ಯಾವುದನ್ನೂ ಕೂಡಿಸಬಾರದು, ಅವುಗಳಿಂದ ಯಾವುದನ್ನೂ ತೆಗೆಯಬಾರದು.


ಇದಲ್ಲದೆ ಸತ್ತವರು ಎದ್ದುಬರುವುದಿಲ್ಲವೆಂಬುದು ನಿಜವಾಗಿದ್ದ ಪಕ್ಷದಲ್ಲಿ ದೇವರು ಕ್ರಿಸ್ತನನ್ನು ಎಬ್ಬಿಸಲೇ ಇಲ್ಲ; ಎಬ್ಬಿಸಿದನೆಂದು ಸಾಕ್ಷಿಕೊಟ್ಟ ನಾವು ದೇವರ ವಿಷಯವಾಗಿ ಸುಳ್ಳುಸಾಕ್ಷಿ ಹೇಳಿದವರಾಗಿ ಕಂಡುಬಂದೆವು.


ನಿನ್ನಿಂದ ಎರಡು ವರಗಳನ್ನು ಬೇಡಿಕೊಂಡಿದ್ದೇನೆ, ಅನುಗ್ರಹಿಸದಿರಬೇಡ, ನಾನು ಸಾಯುವುದರೊಳಗಾಗಿ ಅವುಗಳನ್ನು ಕೈಗೂಡಿಸು.


ಯಾವ ಪ್ರವಾದಿಯಾಗಲಿ ಅಥವಾ ಕನಸುಗಾರನೇ ಆಗಲಿ ನಿಮ್ಮ ಮಧ್ಯದಲ್ಲಿ ಬಂದು, ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ತೋರಿಸಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು