Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 30:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನನ್ನಿಂದ ಕಪಟವನ್ನೂ, ಸುಳ್ಳುಮಾತನ್ನೂ ತೊಲಗಿಸು, ಬಡತನವನ್ನಾಗಲಿ, ಐಶ್ವರ್ಯವನ್ನಾಗಲಿ ಕೊಡದೆ ನನಗೆ ತಕ್ಕಷ್ಟು ಆಹಾರವನ್ನು ಭೋಜನಮಾಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಕಪಟವಾದುದನ್ನು, ಮಿಥ್ಯವಾದುದನ್ನು ನನ್ನಿಂದ ತೊಲಗಿಸು; ನನಗೆ ಬಡತನ ಬೇಡ, ಐಶ್ವರ್ಯವೂ ಬೇಡ, ಸಾಕಷ್ಟು ಆಹಾರವನ್ನು ಮಾತ್ರ ನೀಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನನ್ನಿಂದ ಕಪಟವನ್ನೂ ಸುಳ್ಳುಮಾತನ್ನೂ ತೊಲಗಿಸು, ಬಡತನವನ್ನಾಗಲಿ ಐಶ್ವರ್ಯವನ್ನಾಗಲಿ ಕೊಡದೆ ನನಗೆ ತಕ್ಕಷ್ಟು ಆಹಾರವನ್ನು ಭೋಜನಮಾಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಸುಳ್ಳುಹೇಳದಂತೆ ನನಗೆ ಸಹಾಯಮಾಡು. ನನ್ನನ್ನು ತುಂಬ ಐಶ್ವರ್ಯವಂತನನ್ನಾಗಿಯೂ ಮಾಡಬೇಡ; ತುಂಬ ಬಡವನನ್ನಾಗಿಯೂ ಮಾಡಬೇಡ; ಅನುದಿನಕ್ಕೆ ಬೇಕಾದವುಗಳನ್ನು ಮಾತ್ರ ಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ವಂಚನೆ ಸುಳ್ಳನ್ನು ನನ್ನಿಂದ ದೂರಮಾಡಿರಿ. ಬಡತನವನ್ನಾಗಲಿ, ಐಶ್ವರ್ಯವನ್ನಾಗಲಿ ನನಗೆ ಕೊಡಬೇಡಿರಿ. ನನಗೆ ಅನುದಿನದ ಆಹಾರವನ್ನು ದಯಪಾಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 30:8
28 ತಿಳಿವುಗಳ ಹೋಲಿಕೆ  

ಹೀಗಿರುವುದರಿಂದ, ನೀವು ಮೊದಲು ದೇವರ ರಾಜ್ಯವನ್ನೂ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.


ನಮ್ಮ ಅನುದಿನದ ಆಹಾರವನ್ನು ಪ್ರತಿದಿನವೂ ದಯಪಾಲಿಸು.


ವ್ಯರ್ಥಕಾರ್ಯಗಳಲ್ಲಿ ದೃಷ್ಟಿಯಿಡದಂತೆ ನನ್ನನ್ನು ಕಾಪಾಡು, ನಿನ್ನ ಮಾರ್ಗದಲ್ಲಿ ನಡೆಯುವಂತೆ ನನ್ನನ್ನು ಚೈತನ್ಯಗೊಳಿಸು.


ತಪ್ಪಾದ ಮಾರ್ಗವನ್ನು ನನ್ನಿಂದ ದೂರಮಾಡು, ನಿನ್ನ ಧರ್ಮಶಾಸ್ತ್ರವನ್ನು ನನಗೆ ಅನುಗ್ರಹಿಸು.


ಆತನ ತುಟಿಗಳಿಂದ ಹೊರಟ ನಿಯಮಗಳಿಗೆ ನಾನು ಹಿಂದೆಗೆಯಲಿಲ್ಲ, ಆತನ ಬಾಯಿಂದ ಬಂದ ಮಾತುಗಳನ್ನು ಎದೆಯಲ್ಲಿ ನಿಧಿಯನ್ನಾಗಿ ಬಚ್ಚಿಟ್ಟುಕೊಂಡಿದ್ದೇನೆ.


ಸುಳ್ಳಿನಿಂದ ಸಿಕ್ಕಿದ ಸಂಪತ್ತು ಹಬೆಯಂತೆ ಅಸ್ಥಿರ, ಮೃತ್ಯುಪಾಶದಂತೆ ನಾಶಕರ.


ನಮ್ಮ ಅನುದಿನದ ಆಹಾರವನ್ನು ಈ ಹೊತ್ತು ನಮಗೆ ದಯಪಾಲಿಸು.


ಕೆಟ್ಟತನವನ್ನು ಬಿತ್ತುವವನು ಕೇಡನ್ನೇ ಕೊಯ್ಯುವನು, ಹೆಮ್ಮೆಯಿಂದ ಹಿಡಿದ ದಂಡವು ಅವನ ಕೈಯಿಂದ ಬಿದ್ದುಹೋಗುವುದು.


ಅವನು ಬದುಕಿರುವವರೆಗೂ ಅವನಿಗೆ ಬೇಕಾಗುವ ಎಲ್ಲಾ ಪದಾರ್ಥಗಳು ಪ್ರತಿನಿತ್ಯವೂ ಅರಸನಿಂದಲೇ ಅವನಿಗೆ ಕೊಡಲಾಗುತ್ತಿತ್ತು.


ಇಸ್ರಾಯೇಲರು ತಾವು ವಾಸಮಾಡಲಿರುವ ಪ್ರದೇಶಕ್ಕೆ ಬರುವವರೆಗೆ ಅಂದರೆ ಕಾನಾನ್ ದೇಶವನ್ನು ಬಂದು ಸೇರುವವರೆಗೆ ನಲ್ವತ್ತು ವರ್ಷ ಮನ್ನವನ್ನೇ ಊಟಮಾಡಿದರು.


“ಜನರೇ, ನೀವು ಹೀಗೇಕೆ ಮಾಡುತ್ತೀರೀ? ನಾವೂ ಮನುಷ್ಯರೇ, ನಿಮ್ಮಂಥ ಸ್ವಭಾವವುಳ್ಳವರು. ನೀವು ಈ ವ್ಯರ್ಥವಾದ ಕೆಲಸಗಳನ್ನು ಬಿಟ್ಟುಬಿಟ್ಟು ಭೂಮ್ಯಾಕಾಶಗಳನ್ನೂ, ಸಮುದ್ರವನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಮಾಡಿದ ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಸುವಾರ್ತೆಯನ್ನು ನಿಮಗೆ ಸಾರಿಹೇಳುವವರಾಗಿದ್ದೇವೆ.


ಅಯ್ಯೋ, ವ್ಯರ್ಥವಾದ ಹಗ್ಗಗಳಿಂದ ಅಪರಾಧ ದಂಡನೆಯನ್ನು, ರಥವನ್ನು ಹಗ್ಗಗಳಿಂದಲೋ ಎಂಬಂತೆ ಪಾಪವನ್ನು ಎಳೆದುಕೊಳ್ಳುತ್ತಾ,


ಪ್ರಸಂಗಿಯು ಹೀಗೆ ಹೇಳುತ್ತಾನೆ. “ವ್ಯರ್ಥವೇ ವ್ಯರ್ಥ, ವ್ಯರ್ಥವೇ ವ್ಯರ್ಥ, ಸಮಸ್ತವೂ ವ್ಯರ್ಥ.


ಅವರು ಅದನ್ನು ಸೇರಿನಿಂದ ಅಳತೆಮಾಡಿದರು. ಬಹಳ ಕೂಡಿಸಿದವನಿಗೆ ಏನೂ ಹೆಚ್ಚಾಗಲಿಲ್ಲ, ಸ್ವಲ್ಪವಾಗಿ ಕೂಡಿಸಿದವನಿಗೆ ಏನೂ ಕಡಿಮೆಯಾಗಲಿಲ್ಲ. ಪ್ರತಿಯೊಬ್ಬನೂ ತನ್ನ ಭೋಜನಕ್ಕೆ ಸರಿಯಾಗುವಷ್ಟನ್ನು ಕೂಡಿಸಿಕೊಂಡಿದ್ದನು.


ಇಸ್ರಾಯೇಲರು ಅದನ್ನು ಕಂಡು ಒಬ್ಬರಿಗೊಬ್ಬರು, “ಇದೇನಿರಬಹುದು?” ಎಂದು ಅಂದುಕೊಂಡರು. ಅದು ಏನೆಂದು ಅವರಿಗೆ ತಿಳಿಯಲಿಲ್ಲ. ಮೋಶೆ ಅವರಿಗೆ, “ಇದು ಯೆಹೋವನು ನಿಮಗಾಗಿ ತಿನ್ನುವುದಕ್ಕೆ ಕೊಟ್ಟಿರುವ ರೊಟ್ಟಿಯಾಗಿದೆ.


ಅವನು ಸಾಯುವ ತನಕ ಅವನಿಗೆ ಬೇಕಾಗುವ ಎಲ್ಲಾ ಪದಾರ್ಥಗಳು ಪ್ರತಿನಿತ್ಯವೂ ಬಾಬೆಲಿನ ಅರಸನಿಂದಲೇ ದೊರಕುತ್ತಿದ್ದವು.


ಅರಸನಾದ ಚಿದ್ಕೀಯನು ಇದನ್ನು ಕೇಳಿ ಅಪ್ಪಣೆ ಕೊಡಲು ಯೆರೆಮೀಯನನ್ನು ಕಾರಾಗೃಹದ ಅಂಗಳದಲ್ಲಿಟ್ಟು, ಪಟ್ಟಣದ ರೊಟ್ಟಿಯೆಲ್ಲಾ ತೀರುವ ತನಕ ರೊಟ್ಟಿಯ ಪೇಟೆಯಿಂದ ಪ್ರತಿದಿನ ಒಂದೊಂದು ರೊಟ್ಟಿಯನ್ನು ಅವನಿಗೆ ತಂದು ಕೊಡುತ್ತಿದ್ದರು. ಹೀಗೆ ಯೆರೆಮೀಯನು ಕಾರಾಗೃಹದ ಅಂಗಳದಲ್ಲೇ ವಾಸಿಸುತ್ತಿದ್ದನು.


ನಿನ್ನ ದೃಷ್ಟಿಯು ಐಶ್ವರ್ಯದ ಮೇಲೆ ಎರಗುತ್ತದೋ? ಐಶ್ವರ್ಯವು ಅಷ್ಟರೊಳಗೆ ಮಾಯವಾಗುವುದು, ಆಕಾಶದ ಕಡೆಗೆ ಹಾರುವ ಹದ್ದಿನಂತೆ, ಅದು ರೆಕ್ಕೆಗಳನ್ನು ಕಟ್ಟಿಕೊಂಡಿದೆ.


ನೋಡಿರಿ, ಯೆಹೋವನು ನಿಮಗೆ ಸಬ್ಬತ್ ದಿನವನ್ನು ಆಚರಿಸಬೇಕೆಂದು ಅಪ್ಪಣೆಕೊಟ್ಟಿರುವುದರಿಂದಲೇ ಆರನೆಯ ದಿನದಲ್ಲಿ ಎರಡು ದಿನದ ಆಹಾರವು ನಿಮಗೆ ದೊರಕುವಂತೆ ಅನುಗ್ರಹಿಸಿದ್ದಾನೆ. ನಿಮ್ಮಲ್ಲಿ ಪ್ರತಿಯೊಬ್ಬನು ತಾನಿರುವ ಸ್ಥಳದಲ್ಲಿ ಇರಬೇಕು. ಏಳನೆಯ ದಿನದಲ್ಲಿ ಒಬ್ಬನೂ ತನ್ನ ಸ್ಥಳವನ್ನು ಬಿಟ್ಟು ಹೊರಗೆ ಹೋಗಬಾರದು” ಎಂದು ಹೇಳಿದನು.


ಯಾಕೋಬನು ಅಲ್ಲಿ ಪ್ರಮಾಣ ಮಾಡಿ, “ದೇವರು ನನ್ನ ಸಂಗಡ ಇದ್ದು ನಾನು ಹೋಗುವ ಈ ಮಾರ್ಗದಲ್ಲಿ ನನ್ನನ್ನು ಕಾಪಾಡಿ ಉಣ್ಣುವುದಕ್ಕೆ ಆಹಾರವನ್ನೂ, ಉಡುವುದಕ್ಕೆ ವಸ್ತ್ರವನ್ನೂ, ನನಗೆ ಕೊಟ್ಟು,


ಅನಂತರ ಆತನು ಸೇವಕರಿಗೆ, “ಈಗ ಇದನ್ನು ತೆಗೆದುಕೊಂಡು ಹೋಗಿ ಔತಣದ ಮೇಲ್ವಿಚಾರಕನಿಗೆ ಕೊಡಿರಿ” ಎಂದು ಹೇಳಿದಾಗ, ಅವರು ತೆಗೆದುಕೊಂಡು ಹೋಗಿ ಕೊಟ್ಟರು.


ಇವರಲ್ಲಿ ಯಾರೂ ನ್ಯಾಯಸ್ಥಾನಕ್ಕೆ ನ್ಯಾಯವಾಗಿ ಹೋಗುವುದಿಲ್ಲ, ಯಾರೂ ಸತ್ಯವಾಗಿ ವಾದಿಸುವುದಿಲ್ಲ; ಇವರು ಶೂನ್ಯವಾಗಿರುವುದನ್ನು ನಂಬಿಕೊಂಡು ಸುಳ್ಳನ್ನಾಡುತ್ತಾರೆ; ಹಿಂಸೆಯನ್ನು ಗರ್ಭಧರಿಸಿ ಶ್ರಮೆಯನ್ನು ಹೆರುತ್ತಾರೆ.


ನಿನ್ನಿಂದ ಎರಡು ವರಗಳನ್ನು ಬೇಡಿಕೊಂಡಿದ್ದೇನೆ, ಅನುಗ್ರಹಿಸದಿರಬೇಡ, ನಾನು ಸಾಯುವುದರೊಳಗಾಗಿ ಅವುಗಳನ್ನು ಕೈಗೂಡಿಸು.


ಶಿಷ್ಟನು ಮೋಸಕ್ಕೆ ಅಸಹ್ಯಪಟ್ಟು ಅದನ್ನು ಮಾಡಲಾರನು, ದುಷ್ಟನ ನಡತೆಯು ಹೇಸಿಕೆಗೂ, ನಾಚಿಕೆಗೂ ಆಸ್ಪದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು