Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 31:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಡುವಿನ ಬಲವೆಂಬ ಪಟ್ಟಿಯನ್ನು ಕಟ್ಟಿಕೊಂಡು, ತೋಳುಗಳನ್ನು ಶಕ್ತಿಗೊಳಿಸುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನಡುಕಟ್ಟಿ ಕೆಲಸಕ್ಕೆ ನಿಲ್ಲುತ್ತಾಳೆ, ದುಡಿಮೆಯಲ್ಲಿ ತೋಳ್ಬಲವನ್ನು ತೋರ್ಪಡಿಸುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನಡುವಿಗೆ ಬಲವೆಂಬ ಪಟ್ಟಿಯನ್ನು ಕಟ್ಟಿಕೊಂಡು ತೋಳುಗಳನ್ನು ಶಕ್ತಿಗೊಳಿಸುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆಕೆ ತುಂಬ ಕಷ್ಟಪಟ್ಟು ಕೆಲಸಮಾಡುವಳು. ಬಲವಾಗಿದ್ದಾಳೆ; ತನ್ನ ಕೆಲಸಗಳನ್ನೆಲ್ಲಾ ಮಾಡಲು ಶಕ್ತಳಾಗಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಕೆಯು ನಡುಕಟ್ಟಿ ಆಸಕ್ತಿಯಿಂದ ಕೆಲಸ ಮಾಡುತ್ತಾಳೆ. ತನ್ನ ಶಕ್ತಿಯುತ ತೋಳುಗಳಿಂದ ಕೆಲಸ ಮಾಡುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 31:17
12 ತಿಳಿವುಗಳ ಹೋಲಿಕೆ  

ಶೂರನಂತೆ ನಡುಕಟ್ಟಿಕೋ; ನಾನು ಪ್ರಶ್ನೆಮಾಡುವೆನು, ನೀನೇ ನನಗೆ ಉಪದೇಶಿಸು.


ಆದ್ದರಿಂದ ನೀವು ನಿಮ್ಮ ಮನಸ್ಸನ್ನು ದೃಢಪಡಿಸಿಕೊಂಡು, ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನಿರೀಕ್ಷೆಯನ್ನು ಸಂಪೂರ್ಣವಾಗಿ ಇಡಿರಿ.


ಕಡೆಯದಾಗಿ, ನೀವು ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ.


ಸತ್ಯವೆಂಬ ನಡುಕಟ್ಟನ್ನು ಸೊಂಟಕ್ಕೆ ಕಟ್ಟಿಕೊಂಡು, ನೀತಿಯೆಂಬ ಎದೆಕವಚವನ್ನು ಧರಿಸಿಕೊಂಡು,


“ನಿಮ್ಮ ನಡುಗಳು ಕಟ್ಟಿರಲಿ. ನಿಮ್ಮ ದೀಪಗಳು ಆರದಂತೆ ಉರಿಯುತ್ತಾ ಇರಲಿ.


ಯೆಹೋವನ ಹಸ್ತವು ಎಲೀಯನ ಸಂಗಡ ಇದ್ದುದರಿಂದ ಅವನು ನಡುಕಟ್ಟಿಕೊಂಡು ಅಹಾಬನ ಮುಂದೆ ಓಡುತ್ತಾ ಇಜ್ರೇಲನ್ನು ಸೇರಿದನು.


ಅವರಿಗೆ ಯುದ್ಧವನ್ನು ಕಲಿಸಿ, ತೋಳುಗಳನ್ನು ಬಲಪಡಿಸಿದ ನನಗೂ ವಿರುದ್ಧವಾಗಿ ಕೇಡನ್ನು ಕಲ್ಪಿಸುತ್ತಾರೆ.


ಕಮ್ಮಾರನು ತನ್ನ ಸಲಕರಣೆಗಳನ್ನು ತೆಗೆದುಕೊಂಡು ಕೆಂಡದಲ್ಲಿ ಕೆಲಸಮಾಡುತ್ತಾ, ಚಮಟಿಕೆಗಳಿಂದ ಬಡಿದು ತೋಳಿನ ಬಲದಿಂದ ವಿಗ್ರಹವನ್ನು ರೂಪಿಸುವನು. ಅವನು ಹಸಿದು ಬಳಲುವನು, ನೀರಿಲ್ಲದೆ ದಣಿಯುವನು.


ಆಗ ಎಲೀಷನು ಗೇಹಜಿಗೆ, “ನೀನು ನಡುಕಟ್ಟಿಕೊಂಡು, ನನ್ನ ಕೋಲನ್ನು ತೆಗೆದುಕೊಂಡು ಹೋಗಿ ಹುಡುಗನ ಮುಖದ ಮೇಲಿಡು, ಹೋಗುವಾಗ ದಾರಿಯಲ್ಲಿ ಯಾರನ್ನೂ ವಂದಿಸಬೇಡ, ಯಾರ ಅವರ ವಂದನೆಯನ್ನು ಸ್ವೀಕರಿಸಬೇಡ” ಎಂದು ಹೇಳಿ ಕಳುಹಿಸಿದನು.


ಆದರೂ ಯಾಕೋಬನ ವಂಶಸ್ಥರನ್ನು ರಕ್ಷಿಸುವ ಪರಾಕ್ರಮಿಯ ಭುಜಬಲದಿಂದಲೂ, ಇಸ್ರಾಯೇಲನಿಗೆ ಪಾಲಕನೂ ಬಂಡೆಯೂ ಆಗಿರುವಾತನಿಂದಲೂ ಅವನ ಕೈಗಳ ಬಿಲ್ಲು ಸ್ಥಿರವಾಗಿ ನಿಂತಿರುವುದು. ಅವನ ಕೈಗಳು ಯಾಕೋಬನ ಒಡೆಯನಿಂದ ಬಲಗೊಂಡಿವೆ.


ಹೊಲವನ್ನು ನೋಡಿ ಯೋಚಿಸಿ ಕೊಂಡುಕೊಳ್ಳುವಳು, ತನ್ನ ಕೈಗೆಲಸದ ಲಾಭದಿಂದ ದ್ರಾಕ್ಷಿತೋಟವನ್ನು ಮಾಡಿಸುವಳು.


ವಿವೇಚಿಸಿ ಬಹುಲಾಭವಾಯಿತೆಂದು ತಿಳುಕೊಳ್ಳುವಳು, ಆಕೆಯ ದೀಪವು ರಾತ್ರಿಯಲ್ಲೆಲ್ಲಾ ಆರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು