Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 31:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಬಡವರಿಗಾಗಿ ಕೈ ಬಿಚ್ಚಿ, ದಿಕ್ಕಿಲ್ಲದವರಿಗೆ ಕೈ ನೀಡುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಬಡವರಿಗೆ ಕೈಬಿಚ್ಚಿ ಕೊಡುತ್ತಾಳೆ; ದಿಕ್ಕಿಲ್ಲದವರಿಗೆ ಕೈಚಾಚಿ ನೀಡುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಬಡವರಿಗಾಗಿ ಕೈ ಬಿಚ್ಚಿ ದಿಕ್ಕಿಲ್ಲದವರಿಗೆ ಕೈ ನೀಡುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆಕೆ ಯಾವಾಗಲೂ ಬಡವರಿಗೆ ಕೊಡುವಳು; ಕೊರತೆಯಲ್ಲಿರುವ ಜನರಿಗೆ ಸಹಾಯ ಮಾಡುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆಕೆಯು ಬಡವರಿಗಾಗಿ ಕೈ ಬಿಚ್ಚಿ ಕೊಡುತ್ತಾಳೆ. ಹೌದು, ದಿಕ್ಕಿಲ್ಲದವರಿಗೆ ದಾನ ಮಾಡುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 31:20
17 ತಿಳಿವುಗಳ ಹೋಲಿಕೆ  

ಕಳವು ಮಾಡುವವನು ಇನ್ನು ಮುಂದೆ ಕಳವು ಮಾಡದೇ ಸ್ವಂತ ಕೈಯಿಂದ ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ. ಆಗ ಕೊರತೆಯಲ್ಲಿರುವವರಿಗೆ ಕೊಡುವುದಕ್ಕೆ ಅವನಿಂದಾಗುವದು.


ಇದಲ್ಲದೆ ಪರೋಪಕಾರ ಮಾಡುವುದನ್ನು, ಬೇರೆಯವರಿಗೆ ಸಹಾಯ ಮಾಡುವುದನ್ನು ಮರೆಯಬೇಡಿರಿ. ಇವೇ ದೇವರಿಗೆ ಮೆಚ್ಚಿಕೆಯಾದ ಯಜ್ಞಗಳು.


ದಯಾದೃಷ್ಟಿಯವನು ಆಶೀರ್ವಾದವನ್ನು ಪಡೆಯುವನು, ತನ್ನ ಆಹಾರವನ್ನು ಬಡವರಿಗೆ ಕೊಡುತ್ತಾನಲ್ಲವೆ.


ಬಡವರಿಗೆ ದಯೆತೋರಿಸುವವನು ಯೆಹೋವನಿಗೆ ಸಾಲಕೊಡುವವನು, ಆ ಉಪಕಾರಕ್ಕೆ ಯೆಹೋವನೇ ಪ್ರತ್ಯುಪಕಾರ ಮಾಡುವನು.


ದೇವಜನರಿಗೆ ಕೊರತೆ ಬಂದಾಗ ಸಹಾಯ ಮಾಡಿರಿ. ಅತಿಥಿಸತ್ಕಾರವನ್ನು ಆಚರಿಸಿರಿ.


ದಿಕ್ಕಿಲ್ಲದವನನ್ನು ಪರಾಂಬರಿಸುವವನು ಧನ್ಯನು; ಯೆಹೋವನು ಅವನನ್ನು ಆಪತ್ಕಾಲದಲ್ಲಿ ರಕ್ಷಿಸುವನು.


ದೇಶದಲ್ಲಿ ಯಾವಾಗಲೂ ಬಡವರು ಇರುವರಷ್ಟೆ; ಆದುದರಿಂದ, “ನೀವು ಸ್ವದೇಶದವರಾದ ನಿಮ್ಮ ಸಹೋದರರಿಗೂ, ಬಡವರಿಗೂ ಮತ್ತು ಗತಿಯಿಲ್ಲದವರಿಗೂ ಕೈನೀಡಿ ಸಹಾಯಮಾಡಬೇಕು” ಎಂದು ನಾನು ನಿಮಗೆ ಆಜ್ಞಾಪಿಸಿದ್ದೇನೆ.


ಬಡವರಿಗೆ ಉದಾರವಾಗಿ ಕೊಡುತ್ತಾನೆ; ಅವನ ನೀತಿಯ ಫಲವು ಸದಾಕಾಲವೂ ಇರುವುದು. ಮಹಿಮೆಯೊಡನೆ ಅವನ ಕೊಂಬು ಎತ್ತಲ್ಪಡುವುದು.


ಆದರೆ ಅವನು ಇಸ್ರಾಯೇಲ್ಯರನ್ನು ಕುರಿತು, “ನನ್ನ ಮಾತಿಗೆ ಅವಿಧೇಯರಾಗಿ ಎದುರುಮಾತನಾಡುವ ಜನರನ್ನು ನಾನು ದಿನವೆಲ್ಲಾ ಎಡೆಬಿಡದೆ ಕೈ ಚಾಚಿ ಕರೆದೆನೆಂದು” ಆತನು ಹೇಳುತ್ತಾನೆ.


ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ. ನಿಮಗೆ ಮನಸ್ಸು ಬಂದಾಗ ನೀವು ಅವರಿಗೆ ಯಾವಾಗಲಾದರೂ ಉಪಕಾರ ಮಾಡಬಹುದು. ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವುದಿಲ್ಲ.


ನಾನು ಕರೆದಾಗ ನೀವು ತಿರಸ್ಕರಿಸಿದಿರಿ. ಕೈ ಚಾಚಿದರೂ ಯಾರೂ ನನ್ನನ್ನು ಗಮನಿಸಲಿಲ್ಲ;


ರಾಟೆಯ ಮೇಲೆ ಕೈ ಹಾಕಿ, ಕದರನ್ನು ಹಿಡಿಯುವಳು.


ಯೆಹೋವನು ಅವನ ಪ್ರಾಣವನ್ನು ಕಾಪಾಡಿ ಉಳಿಸುವನು; ಅವನು ದೇಶದಲ್ಲಿ ಧನ್ಯನೆನಿಸಿಕೊಳ್ಳುವನು; ಯೆಹೋವನು ಅವನನ್ನು ಶತ್ರುಗಳ ಅಧೀನಕ್ಕೆ ಕೊಡುವುದಿಲ್ಲ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು