Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 31:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಸೌಂದರ್ಯವು ನೆಚ್ಚತಕ್ಕದ್ದಲ್ಲ, ಲಾವಣ್ಯವು ನೆಲೆಯಲ್ಲ, ಯೆಹೋವನಲ್ಲಿ ಭಯಭಕ್ತಿಯುಳ್ಳವಳೇ ಸ್ತೋತ್ರಪಾತ್ರಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಆಕರ್ಷಣೆ ನೆಚ್ಚತಕ್ಕದಲ್ಲ. ಅಲಂಕಾರ ನೆಲೆಯಾದುದಲ್ಲ; ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವಳೆ ಸ್ತುತ್ಯಾರ್ಹಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಸೌಂದರ್ಯವು ನೆಚ್ಚತಕ್ಕದ್ದಲ್ಲ, ಲಾವಣ್ಯವು ನೆಲೆಯಲ್ಲ; ಯೆಹೋವನಲ್ಲಿ ಭಯಭಕ್ತಿಯುಳ್ಳವಳೇ ಸ್ತೋತ್ರಪಾತ್ರಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಲಾವಣ್ಯ ನಿನ್ನನ್ನು ಮೋಸಗೊಳಿಸಬಲ್ಲದು; ಸೌಂದರ್ಯ ತಾತ್ಕಾಲಿಕವಾದದ್ದು. ಆದರೆ ಯೆಹೋವನಲ್ಲಿ ಭಯಭಕ್ತಿಯುಳ್ಳ ಹೆಂಗಸೇ, ಹೊಗಳಿಕೆಗೆ ಪಾತ್ರಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಸೌಂದರ್ಯವು ಮೋಸಕರವಾದದ್ದು, ಸೌಂದರ್ಯವು ಶಾಶ್ವತವಲ್ಲ. ಆದರೆ ಯೆಹೋವ ದೇವರಿಗೆ ಭಯಪಡುವವಳೇ ಪ್ರಶಂಸನೀಯಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 31:30
24 ತಿಳಿವುಗಳ ಹೋಲಿಕೆ  

ಯೆಹೋವನ ಭಯವೇ ತಿಳಿವಳಿಕೆಗೆ ಮೂಲವು, ಮೂರ್ಖರಾದರೋ ಜ್ಞಾನವನ್ನು ಮತ್ತು ಶಿಕ್ಷಣವನ್ನು ತಿರಸ್ಕರಿಸುವರು.


ಹಂದಿಯ ಮೂಗಿಗೆ ಚಿನ್ನದ ಮೂಗುತಿಯು ಹೇಗೋ, ಅವಿವೇಕಳಿಗೆ ಸೌಂದರ್ಯವು ಹಾಗೆ.


ಏಕೆಂದರೆ ಪವಿತ್ರಗ್ರಂಥದಲ್ಲಿ ಬರೆದಿರುವಂತೆ: “ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಅದರ ಮಹಿಮೆಯೆಲ್ಲಾ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿ ಹೋಗುವುದು. ಅದರ ಹೂವು ಉದುರಿ ಹೋಗುವುದು.


ಯೆಹೋವನ ಭಯವು ಪಾಪದ್ವೇಷವನ್ನು ಹುಟ್ಟಿಸುತ್ತದೆ; ಗರ್ವ, ಅಹಂಭಾವ, ದುರ್ಮಾರ್ಗತನ, ಕುಟಿಲ ಭಾಷಣ ಇವುಗಳನ್ನು ಹಗೆಮಾಡುತ್ತೇನೆ.


ಆದ್ದರಿಂದ ಕರ್ತನು ಬರುವ ಕಾಲಕ್ಕಿಂತ ಮುಂಚೆ ಯಾವುದನ್ನು ಕುರಿತು ನ್ಯಾಯತೀರ್ಪುಮಾಡಬೇಡಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು. ಹೃದಯದ ಆಲೋಚನೆಗಳನ್ನು ಪ್ರಕಟಪಡಿಸುವನು. ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ದೊರಕುವುದು.


ನಾಶವಾಗುವಂತಹದ್ದೂ, ಬೆಂಕಿಯಿಂದ ಶೋಧಿಸುವಂತಹದ್ದೂ ಆಗಿರುವ ಬಂಗಾರಕ್ಕಿಂತಲೂ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವಂತಹದ್ದಾಗಿದೆ.


ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ, ನೇಮನಿಷ್ಠೆಗಳನ್ನೂ ಕೈಕೊಂಡು ತಪ್ಪಿಲ್ಲದೆ ನಡೆದುಕೊಳ್ಳುತ್ತಾ ದೇವರ ದೃಷ್ಟಿಯಲ್ಲಿ ನೀತಿವಂತರಾಗಿದ್ದರು.


ಯೆಹೋವನು ಆನಂದಿಸುವುದು ತನ್ನ ಕೃಪೆಯನ್ನು ನಿರೀಕ್ಷಿಸುವ ಭಕ್ತರಲ್ಲೇ.


ನಿನ್ನ ಹೃದಯವು ಅವಳ ಸೌಂದರ್ಯವನ್ನು ಮೋಹಿಸದಿರಲಿ, ಅವಳು ತನ್ನ ಕಣ್ಣುರೆಪ್ಪೆಗಳಿಂದ ನಿನ್ನನ್ನು ವಶಮಾಡಿಕೊಂಡಾಳು, ನೋಡಿಕೋ.


ಸೌಂದರ್ಯದಲ್ಲಿ ಅಬ್ಷಾಲೋಮನಂತೆ ಹೆಸರುಗೊಂಡ ಪುರುಷನು ಇಸ್ರಾಯೇಲರಲ್ಲಿ ಒಬ್ಬನೂ ಇರಲಿಲ್ಲ. ಅವನಲ್ಲಿ ಅಂಗಾಲಿನಿಂದ ನಡುನೆತ್ತಿಯ ವರೆಗೂ ಒಂದು ದೋಷವಾದರೂ ಇರಲಿಲ್ಲ.


ಸೂರ್ಯನು ಉದಯಿಸಿದ ಮೇಲೆ ಸುಡುವ ಬಿಸಿಲಿಗೆ ಹುಲ್ಲು ಬಾಡಿ, ಹೂವು ಉದುರಿ ಅದರ ರೂಪದ ಸೊಗಸು ನಾಶವಾಗುತ್ತದೆ; ಹಾಗೆಯೇ ಐಶ್ವರ್ಯವಂತನು ತನ್ನ ಪ್ರಯತ್ನಗಳಲ್ಲಿ ಕುಂದಿಹೋಗುವನು.


ವಿಷಯವು ತೀರಿತು, ಎಲ್ಲವೂ ಕೇಳಿ ಮುಗಿಯಿತು, ದೇವರಿಗೆ ಭಯಪಟ್ಟು ಆತನ ಆಜ್ಞೆಗಳನ್ನು ಕೈಕೊಳ್ಳು, ಮನುಷ್ಯರೆಲ್ಲರ ಕರ್ತವ್ಯವು ಇದೇ.


ಆದರೆ ಆಂತರಿಕವಾಗಿ ಯೆಹೂದ್ಯನಾಗಿರುವವನೇ ಯೆಹೂದ್ಯನು; ಮತ್ತು ಸುನ್ನತಿಯನ್ನು ಹೃದಯದಲ್ಲಿ ಹೊಂದಿರುವವನೇ ಸುನ್ನತಿಯುಳ್ಳವನು. ಇದು ಬಾಹ್ಯಾಚಾರಕ್ಕೆ ಸಂಬಂಧಪಟ್ಟದ್ದಲ್ಲ, ಆತ್ಮಸಂಬಂಧಪಟ್ಟದ್ದೇ; ಇಂಥ ಮನುಷ್ಯನಿಗೆ ಬರುವ ಪ್ರಶಂಸೆಯು, ದೇವರಿಂದಲೇ ಹೊರತು ಮನುಷ್ಯರಿಂದ ಬರುವುದಿಲ್ಲ.


“ಆದರೆ ನೀನು ನಿನ್ನ ಸೌಂದರ್ಯದಲ್ಲಿಯೇ ನಂಬಿಕೆಯಿಟ್ಟು, ನಾನು ಪ್ರಸಿದ್ಧಳಾಗಿದ್ದೇನಲ್ಲಾ ಎಂದು ಉಬ್ಬಿಕೊಂಡು ವ್ಯಭಿಚಾರಮಾಡಿದಿ; ಹಾದುಹೋಗುವ ಪ್ರತಿಯೊಬ್ಬನ ಸಂಗಡ ಮಿತಿಮೀರಿ ವ್ಯಭಿಚಾರಮಾಡಿದೆ, ಪ್ರತಿಯೊಬ್ಬನ ಸಂಗಡ ವ್ಯಭಿಚಾರಕ್ಕೆ ಒಳಗಾದೆ.


ನೀನು ಇದನ್ನು ಹಿಡಿದುಕೊಳ್ಳುವುದು ಒಳ್ಳೆಯದು, ಅದರಿಂದ ಕೈಯನ್ನು ಹಿಂತೆಗೆಯಬೇಡ. ದೇವರಿಗೆ ಭಯಪಡುವವನು ಅವೆಲ್ಲವುಗಳಿಂದ ಪಾರಾಗುವನು.


ಯೆಹೋವನಿಗೆ ಸ್ತೋತ್ರ! ಯಾರು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ, ಆತನ ಆಜ್ಞೆಗಳಲ್ಲಿ ಅತ್ಯಾನಂದಪಡುವನೋ ಅವನೇ ಧನ್ಯನು.


ದಯಾಳುವಾದ ಹೆಂಗಸು ಗೌರವವನ್ನು ಪಡೆಯುವಳು, ಬಲಾತ್ಕಾರಿಗಳು ಧನವನ್ನು ಮಾತ್ರ ಕೂಡಿಸಿಕೊಳ್ಳುವರು.


ಧನ, ಮಾನ ಮತ್ತು ಜೀವಗಳು ದೀನಭಾವಕ್ಕೂ, ಯೆಹೋವನ ಭಯಕ್ಕೂ ಫಲ.


ಪತಿಯು ಸಹ, “ಬಹುಮಂದಿ ಸ್ತ್ರೀಯರು ಗುಣವತಿಯರಾಗಿ ನಡೆದಿದ್ದಾರೆ, ಅವರೆಲ್ಲರಿಗಿಂತಲೂ ನೀನೇ ಶ್ರೇಷ್ಠಳು” ಎಂದು ಆಕೆಯನ್ನು ಕೊಂಡಾಡುವನು.


ಆಕೆಯ ಕೈಕೆಲಸಕ್ಕೆ ಪ್ರತಿಫಲವನ್ನು ಸಲ್ಲಿಸಿರಿ, ಆಕೆಯ ಕಾರ್ಯಗಳೇ ಪುರದ್ವಾರಗಳಲ್ಲಿ ಆಕೆಯನ್ನು ಪ್ರಶಂಸಿಸಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು