Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 4:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅದಕ್ಕೆ ದೂರವಾಗಿರು, ಅದರಲ್ಲಿ ನಡೆಯಬೇಡ, ಅದರಿಂದ ಹಿಂತಿರುಗಿ ಮುಂದೆ ನಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆ ದುರ್ಮಾರ್ಗದಿಂದ ಓರೆಯಾಗು, ದೂರವಾಗು; ಅದರಲ್ಲಿ ನಡೆಯದೆ ಮುಂದಕ್ಕೆ ಸಾಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅದಕ್ಕೆ ದೂರವಾಗಿರು, ಅದರಲ್ಲಿ ನಡೆಯದೆ ಓರೆಯಾಗು; ಮುಂದೆ ಮುಂದೆ ನಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ದುಷ್ಟತನಕ್ಕೆ ದೂರವಾಗಿರು. ಅದರ ಬಳಿಗೆ ಹೋಗಬೇಡ. ನೇರವಾಗಿ ನಡೆದು ಅದರಿಂದ ದೂರವಾಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆ ದಾರಿಯಿಂದ ತೊಲಗು, ಅದರ ಪಕ್ಕದಲ್ಲಿ ಹಾದು ಹೋಗಬೇಡ; ಅದರಿಂದ ತಪ್ಪಿಸಿಕೊಂಡು, ನಿನ್ನ ಮಾರ್ಗದಲ್ಲಿ ಮುಂದೆ ನಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 4:15
12 ತಿಳಿವುಗಳ ಹೋಲಿಕೆ  

ನಿಷ್ಪ್ರಯೋಜಕವಾದ ಕತ್ತಲೆಯ ಕೃತ್ಯಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಬಯಲಿಗೆಳೆದು ಖಂಡಿಸಿರಿ.


ಸಕಲವಿಧವಾದ ಕೆಟ್ಟತನಕ್ಕೆ ದೂರವಾಗಿರಿ.


ನೀನು ಸರ್ವಶಕ್ತನಾದ ದೇವರ ಕಡೆಗೆ ತಿರುಗಿಕೊಂಡು, ನಿನ್ನ ಗುಡಾರಗಳಿಂದ ಅನ್ಯಾಯವನ್ನು ದೂರಮಾಡಿದರೆ ಉದ್ಧಾರವಾಗುವಿ.


ಅಧರ್ಮವು ನಿನ್ನ ಕೈಯಲ್ಲಿದ್ದರೆ ಅದನ್ನು ದೂರಮಾಡಿಬಿಡು; ಅನ್ಯಾಯವು ನಿನ್ನ ಗುಡಾರಗಳಲ್ಲಿ ವಾಸಿಸದಿರಲಿ.


ಮೋಸದ ಕಾರ್ಯಕ್ಕೆ ದೂರವಾಗಿರಬೇಕು. ನಿರಪರಾಧಿಯೂ, ನೀತಿವಂತನಾಗಿಯೂ ಇರುವ ಮನುಷ್ಯನಿಗೆ ಮರಣದಂಡನೆಯನ್ನು ವಿಧಿಸಲೇಬಾರದು. ಅಂಥ ದುಷ್ಟನಿಗೆ ನಾನು ಶಿಕ್ಷೆಯನ್ನು ವಿಧಿಸದೇ ಬಿಡುವುದಿಲ್ಲ.


ಸನ್ಮಾರ್ಗದಲ್ಲಿ ನಡೆದು, ಯಥಾರ್ಥವಾಗಿ ನುಡಿದು, ದೋಚಿಕೊಂಡ ಲಾಭ ಬೇಡವೆಂದು, ಲಂಚಮುಟ್ಟದಂತೆ ಕೈ ಒದರಿ, ಕೊಲೆಯ ಮಾತಿಗೆ ಕಿವಿಗೊಡದೆ, ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತಸನ್ನಿಧಾನದಲ್ಲಿ ವಾಸಿಸುವನು.


ಬೇಟೆಗಾರನ ಕೈಯಿಂದ ಜಿಂಕೆಯು ಓಡುವಂತೆಯೂ, ಪಕ್ಷಿಯು ಹಾರಿ ಹೋಗುವ ಹಾಗೂ ತಪ್ಪಿಸಿಕೋ.


ನಿನ್ನ ಮಾರ್ಗವು ಅವಳಿಗೆ ದೂರವಾಗಿರಲಿ ಅವಳ ಮನೆಬಾಗಿಲ ಹತ್ತಿರ ಹೋದೆಯಾ, ಎಚ್ಚರಿಕೆ!


ದುಷ್ಟರ ಮಾರ್ಗದಲ್ಲಿ ಸೇರಬೇಡ, ಕೆಟ್ಟವರ ದಾರಿಯಲ್ಲಿ ನಡೆಯಬೇಡ.


ಕೇಡುಮಾಡದಿದ್ದರೆ ಅವರಿಗೆ ನಿದ್ರೆಬಾರದು; ಯಾರನ್ನಾದರೂ ಎಡವಿಬೀಳಿಸದಿದ್ದರೆ ಅವರ ನಿದ್ರೆಗೆ ಭಂಗವಾಗುವುದು.


ಮಗನೇ, ಅವರೊಡನೆ ದಾರಿಯಲ್ಲಿ ನಡೆಯಬಾರದು, ಅವರ ಮಾರ್ಗದಲ್ಲಿ ನೀನು ಹೆಜ್ಜೆಯಿಡಬೇಡ.


ಕೆಟ್ಟವರನ್ನು ನೋಡಿ ಹೊಟ್ಟೆಕಿಚ್ಚುಪಡಬೇಡ, ಅವರ ಸಹವಾಸವನ್ನು ಬಯಸಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು