Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 4:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಎಡಕ್ಕಾಗಲಿ ಅಥವಾ ಬಲಕ್ಕಾಗಲಿ ತಿರುಗಬೇಡ, ನಿನ್ನ ಕಾಲನ್ನು ಕೇಡಿಗೆ ದೂರಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ತಿರುಗಬೇಡ ಎಡಕ್ಕಾಗಲಿ, ಬಲಕ್ಕಾಗಲಿ; ಕೇಡಿನಿಂದ ನಿನ್ನ ಕಾಲು ದೂರವಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಎಡಕ್ಕಾಗಲಿ ಬಲಕ್ಕಾಗಲಿ ತಿರುಗಬೇಡ; ನಿನ್ನ ಕಾಲನ್ನು ಕೇಡಿಗೆ ದೂರಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಒಳ್ಳೆಯ ಮಾರ್ಗವನ್ನು ಬಿಟ್ಟು ಹೋಗಬೇಡ; ಆದರೆ ಕೆಡುಕಿಗೆ ಯಾವಾಗಲೂ ದೂರವಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ನಿನ್ನ ಬಲಕ್ಕಾಗಲಿ, ಎಡಕ್ಕಾಗಲಿ ತಿರುಗಬೇಡ; ಕೇಡಿನಿಂದ ನಿನ್ನ ಕಾಲುಗಳು ದೂರವಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 4:27
8 ತಿಳಿವುಗಳ ಹೋಲಿಕೆ  

ಆದುದರಿಂದ ನೀವು ಬಲಕ್ಕಾಗಲಿ ಎಡಕ್ಕಾಗಲಿ ತಿರುಗಿಕೊಳ್ಳದೆ ತಪ್ಪಿ ನಡೆಯದೆ ನಿಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆಯೇ ನಡೆದುಕೊಳ್ಳಬೇಕು.


ನನ್ನ ಸೇವಕನಾದ ಮೋಶೆಯು ನಿನಗೆ ಬೋಧಿಸಿ ಆಜ್ಞಾಪಿಸಿದ ಧರ್ಮೋಪದೇಶವನ್ನೆಲ್ಲಾ ಕೈಕೊಂಡು ನಡೆಯುವುದರಲ್ಲಿ ಸ್ಥಿರಚಿತ್ತನಾಗಿರು, ಪೂರ್ಣಧೈರ್ಯದಿಂದಿರು. ಅದನ್ನು ಬಿಟ್ಟು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಬೇಡ, ಆಗ ನೀನು ಸಫಲನಾಗುವಿ.


ನಾನು ಈಗ ನಿಮಗೆ ಬೋಧಿಸುವ ಮಾತುಗಳನ್ನು ಬಿಟ್ಟು ಎಡಕ್ಕಾಗಲಿ ಅಥವಾ ಬಲಕ್ಕಾಗಲಿ ತಿರುಗದೆ, ಬೇರೆ ದೇವರುಗಳನ್ನು ಅವಲಂಬಿಸದೆ, ಅವುಗಳನ್ನೇ ಅನುಸರಿಸಿ ನಡೆದರೆ ಆತನು ಇತರರಿಗೆ ನಿಮ್ಮನ್ನು ಅಧೀನಮಾಡದೆ ಎಲ್ಲರಿಗೂ ಶಿರಸ್ಸನ್ನಾಗಿಯೇ ಮಾಡುವನು.


ಸತ್ಯವಂತನ ರಾಜಮಾರ್ಗ ಹಾನಿಗೆ ದೂರ, ತನ್ನ ನಡತೆಯನ್ನು ಗಮನಿಸುವವನು ತನ್ನ ಆತ್ಮವನ್ನು ಕಾಯುವನು.


ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ನೀವು ಅನುಸರಿಸಲೇಬೇಕು; ಅದಕ್ಕೆ ಏನೂ ಸೇರಿಸಬಾರದು; ಅದರಿಂದ ಏನೂ ತೆಗೆದುಬಿಡಬಾರದು.


ನಿಮ್ಮನ್ನು ತೊಳೆದು ಶುದ್ಧರಾಗಿ, ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಕೃತ್ಯಗಳನ್ನು ತೊಲಗಿಸಿರಿ, ದುರಾಚಾರವನ್ನು ಬಿಡಿ,


ನಿಮ್ಮ ಪ್ರೀತಿಯು ನಿಷ್ಕಪಟವಾಗಿರಲಿ. ಕೆಟ್ಟತನವನ್ನು ತಿರಸ್ಕರಿಸಿರಿ, ಒಳ್ಳೆಯದನ್ನು ಬಿಗಿಯಾಗಿ ಹಿಡಿದುಕೊಳ್ಳಿರಿ.


ಮಗನೇ, ಅವರೊಡನೆ ದಾರಿಯಲ್ಲಿ ನಡೆಯಬಾರದು, ಅವರ ಮಾರ್ಗದಲ್ಲಿ ನೀನು ಹೆಜ್ಜೆಯಿಡಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು