Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 4:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಗ ತಂದೆಯು ನನಗೆ ಬೋಧಕನಾಗಿ ಹೀಗೆಂದನು, “ನಿನ್ನ ಮನಸ್ಸು ನನ್ನ ಮಾತುಗಳನ್ನು ಹಿಡಿದುಕೊಳ್ಳಲಿ, ನನ್ನ ಆಜ್ಞೆಯನ್ನು ಕೈಕೊಂಡು ಸುಖವಾಗಿ ಬಾಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ತಂದೆ ನನಗೆ ಹೀಗೆಂದು ಬೋಧನೆ ಮಾಡಿದ: “ನನ್ನ ಮಾತುಗಳು ಭದ್ರವಾಗಿರಲಿ ನಿನ್ನ ಮನದಲ್ಲಿ; ನನ್ನ ಆಜ್ಞೆಗಳನ್ನು ಕೈಗೊಂಡು ಬಾಳು ಸುಖದಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ತಂದೆಯು ನನಗೆ ಬೋಧಕನಾಗಿ ಹೀಗೆಂದನು - ನಿನ್ನ ಮನಸ್ಸು ನನ್ನ ಮಾತುಗಳನ್ನು ಹಿಡಿದುಕೊಳ್ಳಲಿ, ನನ್ನ ಆಜ್ಞೆಯನ್ನು ಕೈಕೊಂಡು ಸುಖವಾಗಿ ಬಾಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನನ್ನ ತಂದೆ ನನಗೆ ಉಪದೇಶ ಮಾಡಿದ್ದೇನೆಂದರೆ: “ನನ್ನ ಮಾತುಗಳನ್ನು ನೆನಪುಮಾಡಿಕೊ; ನನ್ನ ಆಜ್ಞೆಗಳಿಗೆ ವಿಧೇಯನಾಗು, ಆಗ ನೀನು ಬದುಕುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನನ್ನ ತಂದೆ ನನಗೆ ಬೋಧಿಸಿ ಹೇಳಿದ್ದೇನೆಂದರೆ, “ನನ್ನ ಮಾತುಗಳನ್ನು ಮನಃಪೂರ್ವಕವಾಗಿ ಪಾಲಿಸು; ನನ್ನ ಆಜ್ಞೆಗಳನ್ನು ಕೈಗೊಳ್ಳು, ಆಗ ನೀನು ಬಾಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 4:4
22 ತಿಳಿವುಗಳ ಹೋಲಿಕೆ  

ಕಂದಾ, ನನ್ನ ಉಪದೇಶವನ್ನು ಮರೆಯಬೇಡ, ನನ್ನ ಆಜ್ಞೆಗಳನ್ನು ಮನಃಪೂರ್ವಕವಾಗಿ ಕೈಗೊಳ್ಳು.


ಆತನ ಆಜ್ಞೆಯು ನಿತ್ಯಜೀವವಾಗಿದೆ ಎಂದು ನಾನು ಬಲ್ಲೆನು; ಆದುದರಿಂದ ನಾನು ಮಾತನಾಡುವುದನ್ನೆಲ್ಲಾ ತಂದೆ ನನಗೆ ಹೇಳಿದ ಮೇರೆಗೆ ಮಾತನಾಡುತ್ತಿದ್ದೇನೆ” ಎಂದನು.


ನನ್ನ ಉಪದೇಶವನ್ನು ಕಣ್ಣುಗುಡ್ಡೆಯಂತೆ ಪಾಲಿಸು, ನನ್ನ ಆಜ್ಞೆಗಳನ್ನು ಕೈಕೊಂಡು ಬಾಳು.


ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ, ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು. ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ, ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವುದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಕಡೆಗಣಿಸಿದರೆ ಆತನು ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.


ಚಿಕ್ಕಂದಿನಿಂದಲೂ ನಿನಗೆ ಪರಿಶುದ್ಧ ಗ್ರಂಥಗಳ ಪರಿಚಯವಾಗಿದೆಯಲ್ಲಾ. ಆ ಗ್ರಂಥಗಳು ಕ್ರಿಸ್ತಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆಹೊಂದುವ ಜ್ಞಾನವನ್ನು ನಿನಗೆ ಕೊಡುವುದಕ್ಕೆ ಶಕ್ತವಾಗಿವೆ.


ತಂದೆಗಳೇ, ನಿಮ್ಮ ಮಕ್ಕಳಿಗೆ ಕೋಪವನ್ನೆಬ್ಬಿಸದೆ, ಕರ್ತನಿಗೆ ಮೆಚ್ಚಿಗೆಯಾಗುವ ರೀತಿಯಲ್ಲಿ ಅವರನ್ನು ಶಿಸ್ತಿನಲ್ಲಿಯೂ ಉಪದೇಶದಲ್ಲಿಯೂ ಸಾಕಿ ಸಲಹಿರಿ.


ನಾನು ಈಗ ನಿಮಗೆ ತಿಳಿಸುವ ಮಾತುಗಳು ನಿಮ್ಮ ಹೃದಯದಲ್ಲಿರಬೇಕು.


ಇದಲ್ಲದೆ ಆತನು ಪರಿಪೂರ್ಣನಾಗಿ, ತನಗೆ ವಿಧೇಯರಾಗಿರುವ ಎಲ್ಲರಿಗೂ ನಿತ್ಯ ರಕ್ಷಣೆಗೆ ಕಾರಣನಾದನು.


ಕಿವಿಯನ್ನು ನನ್ನ ಕಡೆಗೆ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ; ಆಲಿಸಿದರೆ ಬದುಕಿ ಬಾಳುವಿರಿ. ನಾನು ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆ” ಎಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು.


ನಿನ್ನಲ್ಲಿರುವ ಯಥಾರ್ಥವಾದ ನಂಬಿಕೆಯು ನನ್ನ ನೆನಪಿಗೆ ಬಂದಿತು. ಆ ನಂಬಿಕೆಯು ನಿನ್ನ ಅಜ್ಜಿಯಾದ ಲೋವಿಯಳಲ್ಲಿಯೂ ನಿನ್ನ ತಾಯಿಯಾದ ಯೂನೀಕೆಯಲ್ಲಿಯೂ ವಾಸವಾಗಿತ್ತು. ಹಾಗೆಯೇ ಅದು ನಿನ್ನಲ್ಲಿಯೂ ವಾಸವಾಗಿದೆ ಎಂದು ದೃಢವಾಗಿ ನಂಬಿದ್ದೇನೆ.


ನಡೆಯಬೇಕಾದ ಮಾರ್ಗಕ್ಕೆ ತಕ್ಕಂತೆ ಮಕ್ಕಳನ್ನು ಶಿಕ್ಷಿಸು, ಮುಪ್ಪಿನಲ್ಲಿಯೂ ಓರೆಯಾಗರು.


ನಿನಗೆ ವಿರುದ್ಧವಾಗಿ ಪಾಪಮಾಡದಂತೆ, ನಿನ್ನ ನುಡಿಗಳನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡಿದ್ದೇನೆ.


ಹೀಗಿರುವುದರಿಂದ ನೀವು ಬಹು ಜಾಗರೂಕತೆಯಿಂದ ನಿಮ್ಮ ನಿಮ್ಮ ಮನಸ್ಸುಗಳನ್ನು ಕಾಪಾಡಿಕೊಳ್ಳುವವರಾಗಿ, ನೀವು ನೋಡಿದ ಸಂಗತಿಗಳನ್ನು ಎಷ್ಟು ಮಾತ್ರವೂ ಮರೆಯದೆ ಜೀವದಿಂದಿರುವ ವರೆಗೂ ಅವುಗಳನ್ನು ನೆನಪಿನಲ್ಲಿಟ್ಟುಕೊಂಡು ನಿಮ್ಮ ಮಕ್ಕಳಿಗೂ ಮತ್ತು ಮೊಮ್ಮಕ್ಕಳಿಗೂ ತಿಳಿಸುತ್ತಾ ಹೋಗಬೇಕು.


ಅವನು ತನ್ನ ಮಕ್ಕಳಿಗೂ ಮನೆಯವರಿಗೂ ನ್ಯಾಯ ನೀತಿಗಳನ್ನು ತಿಳಿಸಿ ಯೆಹೋವನ ಮಾರ್ಗವನ್ನು ಅನುಸರಿಸಬೇಕೆಂದು ಬೋಧಿಸುವಂತೆ ಅವನನ್ನು ನಾನು ಆರಿಸಿಕೊಂಡೆನಲ್ಲಾ; ಅವನು ಹೀಗೆ ಮಾಡುವುದರಿಂದ ಯೆಹೋವನಾದ ನನ್ನ ವಾಗ್ದಾನವು ನೆರವೇರುವುದು” ಅಂದುಕೊಂಡನು.


ನಿನ್ನ ನಿಯಮಗಳನ್ನೂ, ಕಟ್ಟಳೆಗಳನ್ನೂ ಅನುಸರಿಸಿದ್ದೇನೆ, ನನ್ನ ನಡತೆಯೆಲ್ಲಾ ನಿನಗೆ ಗೋಚರವಾಗಿದೆ. ತಾವ್.


ಕಂದಾ, ನಿನ್ನ ಹೃದಯವನ್ನು ನನಗೆ ಕೊಡು, ನಿನ್ನ ಕಣ್ಣುಗಳು ನನ್ನ ಮಾರ್ಗಗಳಲ್ಲಿ ಆನಂದಿಸಲಿ.


ಆಗ ಮಾನೋಹನು, “ನೀನು ಹೇಳಿದ್ದು ನೆರವೇರಿದಾಗ ನಾವು ಆ ಮಗುವಿಗೋಸ್ಕರ ಮಾಡತಕ್ಕದ್ದೇನು? ಅವನನ್ನು ಹೇಗೆ ಬೆಳೆಸಬೇಕು” ಎಂದು ಕೇಳಲು


ನಿನ್ನ ಕಟ್ಟಳೆಗಳು ಸದಾಕಾಲವೂ ನೀತಿಯುಳ್ಳವುಗಳು, ನನಗೆ ವಿವೇಕವನ್ನು ದಯಪಾಲಿಸು, ಆಗ ಬದುಕುವೆನು. ಖೋಫ್.


ಅವು ನಿನ್ನ ದಿನಗಳನ್ನು ಹೆಚ್ಚಿಸಿ, ನಿನ್ನ ಆಯುಷ್ಯವನ್ನು ವೃದ್ಧಿಗೊಳಿಸಿ, ನಿನಗೆ ಸುಕ್ಷೇಮವನ್ನು ಉಂಟುಮಾಡುವವು.


ಅದಕ್ಕೆ ಯೆರೆಮೀಯನು, “ನಿನ್ನನ್ನು ಒಪ್ಪಿಸರು; ಪ್ರಭುವೇ, ನಾನು ನಿನಗೆ ಹೇಳಿರುವ ಯೆಹೋವನ ಮಾತನ್ನು ಕೈಗೊಳ್ಳು; ಕೈಗೊಂಡರೆ ಪ್ರಾಣ ಉಳಿಯುವುದು, ಸುಖವೂ ಆಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು