Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 5:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಕಂದಾ, ನನ್ನ ಜ್ಞಾನೋಪದೇಶವನ್ನು ಆಲಿಸು, ವಿವೇಕದಿಂದ ಕೂಡಿದ ನನ್ನ ಬೋಧನೆಗೆ ಕಿವಿಗೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಮಗನೇ, ನನ್ನ ಜ್ಞಾನೋಪದೇಶವನ್ನು ಆಲಿಸು; ವಿವೇಕದಿಂದ ಕೂಡಿ ನನ್ನ ಬೋಧೆಗೆ ಕಿವಿಗೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಕಂದಾ, ನನ್ನ ಜ್ಞಾನೋಪದೇಶವನ್ನು ಆಲಿಸು, ನನ್ನ ವಿವೇಕಬೋಧೆಗೆ ಕಿವಿಗೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನನ್ನ ಮಗನೇ, ನನ್ನ ಜ್ಞಾನೋಪದೇಶವನ್ನು ಕೇಳು. ನನ್ನ ವಿವೇಕದ ಮಾತುಗಳಿಗೆ ಗಮನಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಮಗನೇ, ನನ್ನ ಜ್ಞಾನಕ್ಕೆ ಗಮನಕೊಡು; ನನ್ನ ಒಳನೋಟದ ಮಾತುಗಳಿಗೆ ಕಿವಿಗೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 5:1
16 ತಿಳಿವುಗಳ ಹೋಲಿಕೆ  

ಕಿವಿಗೊಟ್ಟು ಜ್ಞಾನಿಗಳ ಮಾತುಗಳನ್ನು ಕೇಳು, ನನ್ನ ಜ್ಞಾನಬೋಧೆಗೆ ಮನಸ್ಸು ಕೊಡು.


ಕಂದಾ, ನನ್ನ ಮಾತುಗಳನ್ನು ಆಲಿಸು, ನನ್ನ ನುಡಿಗಳಿಗೆ ಕಿವಿಗೊಡು.


ಕಂದಾ, ನನ್ನ ಮಾತುಗಳನ್ನು ಅಂಗೀಕರಿಸಿ, ನನ್ನ ವಿಧಿಗಳನ್ನು ನಿಧಿಯಂತೆ ಕಾಪಾಡಿಕೋ,


ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.


ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ಬಚ್ಚಿಟ್ಟಿರುವ ಮನ್ನವೆಂಬ ಆಹಾರವನ್ನು ಕೊಡುವೆನು. ಇದಲ್ಲದೆ ಅವನಿಗೆ ಬಿಳೀಕಲ್ಲನ್ನೂ ಆ ಕಲ್ಲಿನ ಮೇಲೆ ಕೆತ್ತಿದ ಹೊಸ ಹೆಸರನ್ನೂ ಕೊಡುವೆನು. ಆ ಹೆಸರನ್ನು ಹೊಂದಿದವನಿಗೇ ಹೊರತು ಅದು ಮತ್ತಾರಿಗೂ ತಿಳಿಯದು.


ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಜಯಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವುದೇ ಇಲ್ಲ.


ನನ್ನ ಪ್ರಿಯ ಸಹೋದರರೇ, ನೀವು ಇದನ್ನು ಚೆನ್ನಾಗಿ ತಿಳಿದುಕೊಳ್ಳಿರಿ, ಪ್ರತಿಯೊಬ್ಬನೂ ಕಿವಿಗೊಡುವುದರಲ್ಲಿ ಚುರುಕಾಗಿಯೂ, ಮಾತನಾಡುವುದರಲ್ಲಿ ನಿಧಾನವಾಗಿಯೂ ಮತ್ತು ಕೋಪಿಸುವುದರಲ್ಲಿ ನಿಧಾನವಾಗಿಯೂ ಇರಲಿ.


ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ” ಎಂದು ಹೇಳಿದನು.


ಮಕ್ಕಳೇ, ತಂದೆಯ ಉಪದೇಶವನ್ನು ಕೇಳಿರಿ, ವಿವೇಕವನ್ನು ಗ್ರಹಿಸುವಂತೆ ಕಿವಿಗೊಡಿರಿ.


ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.


ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.


ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನಲ್ಲಿರುವ ಜೀವದಾಯಕ ವೃಕ್ಷದ ಹಣ್ಣನ್ನು ತಿನ್ನುವುದಕ್ಕೆ ಅನುಮತಿ ಕೊಡುವೆನು.


ಅಬ್ರಹಾಮನು ನಮ್ಮ ತಂದೆ ಎಂದು ನಿಮ್ಮೊಳಗೆ ಅಂದುಕೊಳ್ಳಬೇಡಿರಿ. ದೇವರು ಅಬ್ರಹಾಮನಿಗಾಗಿ ಈ ಕಲ್ಲುಗಳಿಂದಲೂ ಮಕ್ಕಳನ್ನು ಸೃಷ್ಟಿಮಾಡಬಲ್ಲನೆಂದು ನಿಮಗೆ ಹೇಳುತ್ತೇನೆ.


ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.”


ಕಂದಾ, ತಂದೆಯ ಆಜ್ಞೆಯನ್ನು ಕೈಕೊಳ್ಳು, ತಾಯಿಯ ಉಪದೇಶವನ್ನು ಬಿಡಬೇಡ.


ಅಲ್ಪಬುದ್ಧಿಯುಳ್ಳ ಅನೇಕ ಯುವಕರು ಕಾಣಿಸಿದರು. ಅವರಲ್ಲಿ ಜ್ಞಾನಹೀನನಾದ ಒಬ್ಬ ಯೌವನಸ್ಥನನ್ನು ಕಂಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು