Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 5:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆಕೆ ಮನೋಹರವಾದ ಜಿಂಕೆಯಂತೆಯೂ, ಅಂದವಾದ ದುಪ್ಪಿಯ ಹಾಗೂ ಇರುವಳಲ್ಲಾ, ಆಕೆಯ ಸ್ತನಗಳು ನಿನ್ನನ್ನು ಸರ್ವದಾ ತೃಪ್ತಿಪಡಿಸಲಿ, ಆಕೆಯ ಪ್ರೀತಿಯಲ್ಲೇ ನಿರಂತರವಾಗಿ ಲೀನವಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆಕೆ ಮನೋಹರವಾದ ಹರಿಣಿ, ಸುಂದರವಾದ ಜಿಂಕೆಮರಿ, ಆಕೆಯ ಸ್ತನಗಳು ನಿನ್ನನ್ನು ಸರ್ವದಾ ತೃಪ್ತಿಪಡಿಸಲಿ, ಆಕೆಯ ಒಲವಿನಲ್ಲೇ ಸದಾ ತಲ್ಲೀನನಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆಕೆ ಮನೋಹರವಾದ ಜಿಂಕೆಯಂತೆಯೂ ಅಂದವಾದ ದುಪ್ಪಿಯ ಹಾಗೂ ಇರುವಳಲ್ಲಾ; ಆಕೆಯ ಸ್ತನಗಳು ನಿನ್ನನ್ನು ಸರ್ವದಾ ತೃಪ್ತಿಪಡಿಸಲಿ, ಆಕೆಯ ಪ್ರೀತಿಯಲ್ಲೇ ನಿರಂತರ ಲೀನವಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆಕೆ ಸುಂದರವಾದ ಜಿಂಕೆಯಂತೆಯೂ ಅಂದವಾದ ಕಾಡುಮೇಕೆಯಂತೆಯೂ ಇದ್ದಾಳೆ. ಆಕೆಯ ಸ್ತನಗಳು ನಿನ್ನನ್ನು ಸಂಪೂರ್ಣವಾಗಿ ತೃಪ್ತಿಪಡಿಸಲಿ. ಆಕೆಯ ಪ್ರೀತಿಯಲ್ಲೇ ಲೀನವಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆಕೆಯು ಮನೋಹರವಾದ ಹರಿಣಿ, ಅಂದವಾದ ಜಿಂಕೆಯ ಹಾಗೆಯೂ; ಆಕೆಯ ಎದೆಯು ನಿನ್ನನ್ನು ಸದಾ ತೃಪ್ತಿಪಡಿಸಲಿ; ಆಕೆಯ ಪ್ರೀತಿಯಿಂದ ನೀನು ಸದಾ ಪರವಶನಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 5:19
8 ತಿಳಿವುಗಳ ಹೋಲಿಕೆ  

ನಿನ್ನ ಸ್ತನಗಳೆರಡೂ ಜಿಂಕೆಯ ಅವಳಿಮರಿಗಳಂತಿವೆ.


ನನ್ನ ಪ್ರಿಯನು ಜಿಂಕೆಯಂತೆಯೂ ಪ್ರಾಯದ ಹರಿಣದಂತೆಯೂ ಇದ್ದಾನೆ. ಆಹಾ, ಇಗೋ ನಮ್ಮ ಗೋಡೆಯ ಆಚೆ ನಿಂತು, ಕಿಟಕಿಗಳ ಮೂಲಕ ನೋಡುತ್ತಾನೆ, ಜಾಲಾಂದ್ರಗಳ ಮೂಲಕ ಇಣಿಕುಹಾಕುತ್ತಾನೆ!


ಸುಗಂಧಸಸ್ಯದ ಪರ್ವತಗಳಲ್ಲಿ ಜಿಂಕೆಯಂತೆಯೂ, ಪ್ರಾಯದ ಹರಿಣದಂತೆಯೂ ತ್ವರೆಮಾಡಿ ಬಾ ನನ್ನಿನಿಯನೇ.


ನಿನ್ನ ಎರಡು ಸ್ತನಗಳು ನೆಲದಾವರೆಗಳ ಮಧ್ಯದಲ್ಲಿ ಮೇಯುತ್ತಿರುವ ಅವಳಿ ಜಿಂಕೆಮರಿಗಳಂತಿವೆ.


ಕತ್ತಲು ಕಳೆಯುವ ಮೊದಲು, ಹೊತ್ತು ಮೂಡುವ ಮೊದಲು ಹೊರಟು ಬಾ ನನ್ನ ಪ್ರಿಯನೇ, ಬೇತೆರ್ ಪರ್ವತದಲ್ಲಿ ಜಿಂಕೆಯಂತೆಯೂ ಪ್ರಾಯದ ಹರಿಣದಂತೆಯೂ ಇರು.


ಸ್ವಂತ ಕೊಳದ ನೀರನ್ನು, ಸ್ವಂತ ಬಾವಿಯಲ್ಲಿ ಉಕ್ಕುವ ಜಲವನ್ನು ಮಾತ್ರ ಕುಡಿ.


ಒಂದು ದಿನ ಐಶ್ವರ್ಯವಂತನ ಮನೆಗೆ ಒಬ್ಬ ಪ್ರಯಾಣಿಕನು ಬಂದನು. ಆಗ ಐಶ್ವರ್ಯವಂತನು ತನ್ನ ಕುರಿದನಗಳಿಂದ ಏನೂ ತೆಗೆದುಕೊಳ್ಳಲು ಮನಸ್ಸಿಲ್ಲದೆ, ಆ ಬಡವನ ಹೆಣ್ಣುಕುರಿಮರಿಯನ್ನು ಹಿಡಿದು ಅತಿಥಿಗೋಸ್ಕರ ಅಡಿಗೆ ಮಾಡಿಸಿದನು” ಎಂದು ಹೇಳಿದನು.


ಮಗನೇ, ಏಕೆ ಪರಸ್ತ್ರೀಯಲ್ಲಿ ಭ್ರಮೆಗೊಳ್ಳುವಿ, ಅನ್ಯಳ ಎದೆಯನ್ನು ತಬ್ಬಿಕೊಳ್ಳುವುದೇಕೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು